ಮಂಡ್ಯ: ಪರಿಸರ ಸಂರಕ್ಷಣೆ ಎಂದರೆ ಗಿಡ ನೆಟ್ಟು ಆಚರಣೆ ಮಾಡುವುದಷ್ಟೇ ಅಲ್ಲದೆ, ಅವುಗಳನ್ನ ಪೋಷಣೆ ಮಾಡಬೇಕು ಆಗಷ್ಟೇ ಅದಕ್ಕೊಂದು ಪರಿಪೂರ್ಣತೆ ಸಿಕ್ಕಿ, ಪ್ರತಿಯೊಬ್ಬರಲ್ಲೂ ಪರಿಸರ ಪ್ರಜ್ಞೆಯು ಮೂಡುತ್ತದೆ ಎಂದು ಬೆಂಗಳೂರು ಆರ್ ಟಿ ಓ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ ಅವರು ಅಭಿಪ್ರಾಯಪಟ್ಟರು.
ಅವರು ಶನಿವಾರ ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲ್ಲೂಕಿನ ಶೀಳನೆರೆ ಹೋಬಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢ ಶಾಲೆಯಲ್ಲಿ ಸಮಾಗಮ ವೆಲ್ಫೇರ್ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರದಲ್ಲಿ ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಪರಿಸರ ಸಂರಕ್ಷಣೆ ನಮ್ಮೇಲ್ಲರ ಹೊಣೆಯು ಹೌದು. ಪರಿಸರ ಅವಶ್ಯಕತೆಯನ್ನು ಇಂದಿನ ಪೀಳಿಗೆಗೆ ತಿಳಿಸಿ, ಅರಿವು ಮೂಡಿಸಬೇಕು ಇದರಿಂದ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ಹಾಗೂ ಪರಿಸರವನ್ನು ಕೊಡುಗೆಯಾಗಿ ನೀಡಬಹುದು ಎಂದು ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಮಾರಾಟ ಮಹಾಮಂಡಳಿ ನಿರ್ದೇಶಕ ಮೋಹನ್ ಎಸ್ ಮಾತನಾಡಿ, ಹಿಂದಿನಿಂದಲೂ ಪರಿಸರ ಸಂರಕ್ಷಣೆ ಬಗ್ಗೆ ವಿಷಯಗಳು ಚರ್ಚೆಯಾಗುತ್ತಿವೆ ಆದರೆ ಪ್ರಸ್ತುತದಲ್ಲಿ ಆರೋಗ್ಯಕರ ಜೀವನಕ್ಕಾಗಿ ಮರ ಬೆಳೆಸಿ ನಾಡು ಉಳಿಸಿ ಇಲ್ಲದಿದ್ದರೆ ಉತ್ತಮ ಪರಿಸರವಿಲ್ಲದೆ ಬದುಕಲು ಸಾಧ್ಯವಿಲ್ಲ ಎಂದರು.
ಇದಕ್ಕೂ ಮುನ್ನ ಪ್ರಸ್ತವಿಕ ನುಡಿಗಳನ್ನಾಡಿದ ಸಮಾಗಮ ವೆಲ್ಫೇರ್ ಫೌಂಡೇಶನ್ ನ್ ನಿರ್ದೇಶಕರು ಪಾಂಡು ಎಸ್, ಪ್ರಸ್ತುತ ಪರಿಸರದ ಸ್ಥಿತಿ ಗ್ರಾಮೀಣ ಪ್ರದೇಶಗಳಲ್ಲಿಯೂ ಸಹ ಪರಿಸರ ಸಂರಕ್ಷಣೆ ಬಗ್ಗೆ ಅರಿವು ಮೂಡಿಸುವಂತ ಕಾಲಗಟ್ಟಕ್ಕೆ ಬಂದು ತಲುಪಿದೆ. ಹಳ್ಳಿಗಳ ಪರಿಸ್ಥಿಯೇ ಹೀಗಾದರೆ ಪಟ್ಟಣಗಳ ಸ್ಥಿತಿ ಗತಿ ಹೇಗೆ ಎಂದು ಬೇಸರ ವ್ಯಕ್ತಪಡಿಸಿದರು.
ಹಳ್ಳಿಗಳಲ್ಲಿ ತಪ್ಪೇ ಸಗಣಿ ತುಂಬುತಿದ್ದ ತಿಪ್ಪೆಗಳು ಇಂದು ಪ್ಲಾಸ್ಟಿಕ್ ಗಳ ಗುಂಡಿಗಳಾಗಿವೆ ಹಾಗೆಯೇ ಪ್ರಸ್ತುತ ವರ್ಷದಲ್ಲಿ ಅತೀ ಹೆಚ್ಚು ಉಷ್ಣಾಂಶವನ್ನ ಕಾಣಬೇಕಾಯಿತು, ಇದೆ ರೀತಿ ಮುಂದುವರೆದರೆ ಬದುಕುವ ಆಸೆಯನ್ನೇ ಕಳೆದುಕೊಳ್ಳಬೇಕಾಗುತ್ತದೆ ಆದ್ದರಿಂದ ಆರೋಗ್ಯಕರ ಜೀವನ ನಡೆಸಲು ಪರಿಸರ ಸಂರಕ್ಷಿಸಿ ಎಂದು ನುಡಿದರು.
ಇದೆ ಸಂದರ್ಭದಲ್ಲಿ ಸಮಾಗಮ ವೆಲ್ಫೇರ್ ಫೌಂಡೇಶನ್ ವತಿಯಿಂದ ಶಾಲಾ ಕಾಲೇಜು ಮಕ್ಕಳಿಗೆ ಪ್ರಬಂಧ ಹಾಗೂ ಭಾಷಣ ಏರ್ಪಡಿಸಿ ವಿಜೇತರಿಗೆ ಪುಸ್ತಕ ಹಾಗೂ ಟ್ರೋಫಿಗಳನ್ನ ನೀಡಿ ಪ್ರೊತ್ಸಾಹಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಯುವರಾಜು, ಸದಸ್ಯ ಎಸ್ ಕೆ ಪ್ರಕಾಶ್, ಮುಖ್ಯಯೊಪಾಧ್ಯರಾದ ನೀಲಮ್ಮ, ಸಮಾಗಮ ವೆಲ್ಫೇರ್ ಫೌಂಡೇಶನ್ ನ್ ನಿರ್ದೇಶಕಿ ಸುಮಿತ್ರ ಎಚ್ ವಿ ಹಾಗೂ ನಿರ್ದೇಶಕರಾದ ರಾಘವೇಂದ್ರಸ್ವಾಮಿ ಎಂ.ಸಿ, ಶಿವಕುಮಾರ್ ಜಿ, ವಕೀಲರಾದ ರಘು ಎಸ್ ಕೆ ಆರ್ ಪೇಟೆ , ಆರ್ಥಿಕ ಸಲಹೆಗರರಾದ ಪ್ರಮೋದ್ ಕೆ ಆರ್ ಪೇಟೆ , ಕಿರಣ್ ಹಾಗೂ ಕಾಲೇಜಿನ ಉಪನ್ಯಾಸಕರು ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ…
ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ…
ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳಗಾವಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು…
ಬೆಂಗಳೂರು,- ನಿರಂತರ ಏರಿಕೆಯಿಂದಾಗಿ ಚಿನ್ನ, ಬೆಳ್ಳಿ ಬೆಲೆಯು ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. ಇಂದು ಪ್ರತೀ ಗ್ರಾಂ ಚಿನ್ನಕ್ಕೆ (24 ಕ್ಯಾರೆಟ್)…
ಅಮೇರಿಕಾ: ಯುವ ರೋಗಿಯನ್ನು ಹಾಗೂ ಇತರ ಏಳು ಜನರನ್ನು ಸಾಗಿಸುತ್ತಿದ್ದ ಮೆಕ್ಸಿಕ್ನ ನೌಕಾಪಡೆಯ ಸಣ್ಣ ವಿಮಾನವು ಗಾಲ್ವೆಸ್ಟನ್ ಬಳಿ ಪತನಗೊಂಡು…
ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…