ಮಂಡ್ಯ

ಸಮಾಗಮ ವೆಲ್ಫೇರ್ ಫೌಂಡೇಶನ್ ವತಿಯಿಂದ ಶಾಲೆಯಲ್ಲಿ ಪರಿಸರ ದಿನಾಚರಣೆ

ಮಂಡ್ಯ: ಪರಿಸರ ಸಂರಕ್ಷಣೆ ಎಂದರೆ ಗಿಡ ನೆಟ್ಟು ಆಚರಣೆ ಮಾಡುವುದಷ್ಟೇ ಅಲ್ಲದೆ, ಅವುಗಳನ್ನ ಪೋಷಣೆ ಮಾಡಬೇಕು ಆಗಷ್ಟೇ ಅದಕ್ಕೊಂದು ಪರಿಪೂರ್ಣತೆ ಸಿಕ್ಕಿ, ಪ್ರತಿಯೊಬ್ಬರಲ್ಲೂ ಪರಿಸರ ಪ್ರಜ್ಞೆಯು ಮೂಡುತ್ತದೆ ಎಂದು ಬೆಂಗಳೂರು ಆರ್ ಟಿ ಓ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ ಅವರು ಅಭಿಪ್ರಾಯಪಟ್ಟರು.

ಅವರು ಶನಿವಾರ ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲ್ಲೂಕಿನ ಶೀಳನೆರೆ ಹೋಬಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢ ಶಾಲೆಯಲ್ಲಿ ಸಮಾಗಮ ವೆಲ್ಫೇರ್ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರದಲ್ಲಿ ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಪರಿಸರ ಸಂರಕ್ಷಣೆ ನಮ್ಮೇಲ್ಲರ ಹೊಣೆಯು ಹೌದು.  ಪರಿಸರ ಅವಶ್ಯಕತೆಯನ್ನು ಇಂದಿನ ಪೀಳಿಗೆಗೆ ತಿಳಿಸಿ, ಅರಿವು ಮೂಡಿಸಬೇಕು ಇದರಿಂದ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ಹಾಗೂ ಪರಿಸರವನ್ನು ಕೊಡುಗೆಯಾಗಿ ನೀಡಬಹುದು ಎಂದು ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಮಾರಾಟ ಮಹಾಮಂಡಳಿ ನಿರ್ದೇಶಕ ಮೋಹನ್ ಎಸ್ ಮಾತನಾಡಿ, ಹಿಂದಿನಿಂದಲೂ ಪರಿಸರ ಸಂರಕ್ಷಣೆ ಬಗ್ಗೆ ವಿಷಯಗಳು ಚರ್ಚೆಯಾಗುತ್ತಿವೆ ಆದರೆ ಪ್ರಸ್ತುತದಲ್ಲಿ ಆರೋಗ್ಯಕರ ಜೀವನಕ್ಕಾಗಿ ಮರ ಬೆಳೆಸಿ ನಾಡು ಉಳಿಸಿ ಇಲ್ಲದಿದ್ದರೆ ಉತ್ತಮ ಪರಿಸರವಿಲ್ಲದೆ ಬದುಕಲು ಸಾಧ್ಯವಿಲ್ಲ ಎಂದರು.

ಇದಕ್ಕೂ ಮುನ್ನ ಪ್ರಸ್ತವಿಕ ನುಡಿಗಳನ್ನಾಡಿದ ಸಮಾಗಮ ವೆಲ್ಫೇರ್ ಫೌಂಡೇಶನ್ ನ್ ನಿರ್ದೇಶಕರು ಪಾಂಡು ಎಸ್,  ಪ್ರಸ್ತುತ ಪರಿಸರದ ಸ್ಥಿತಿ  ಗ್ರಾಮೀಣ ಪ್ರದೇಶಗಳಲ್ಲಿಯೂ ಸಹ ಪರಿಸರ ಸಂರಕ್ಷಣೆ ಬಗ್ಗೆ ಅರಿವು ಮೂಡಿಸುವಂತ ಕಾಲಗಟ್ಟಕ್ಕೆ ಬಂದು ತಲುಪಿದೆ. ಹಳ್ಳಿಗಳ ಪರಿಸ್ಥಿಯೇ ಹೀಗಾದರೆ ಪಟ್ಟಣಗಳ ಸ್ಥಿತಿ ಗತಿ ಹೇಗೆ ಎಂದು ಬೇಸರ ವ್ಯಕ್ತಪಡಿಸಿದರು.

ಹಳ್ಳಿಗಳಲ್ಲಿ ತಪ್ಪೇ ಸಗಣಿ ತುಂಬುತಿದ್ದ ತಿಪ್ಪೆಗಳು ಇಂದು ಪ್ಲಾಸ್ಟಿಕ್ ಗಳ ಗುಂಡಿಗಳಾಗಿವೆ ಹಾಗೆಯೇ ಪ್ರಸ್ತುತ ವರ್ಷದಲ್ಲಿ ಅತೀ ಹೆಚ್ಚು ಉಷ್ಣಾಂಶವನ್ನ ಕಾಣಬೇಕಾಯಿತು, ಇದೆ ರೀತಿ ಮುಂದುವರೆದರೆ ಬದುಕುವ ಆಸೆಯನ್ನೇ ಕಳೆದುಕೊಳ್ಳಬೇಕಾಗುತ್ತದೆ ಆದ್ದರಿಂದ ಆರೋಗ್ಯಕರ ಜೀವನ ನಡೆಸಲು ಪರಿಸರ ಸಂರಕ್ಷಿಸಿ ಎಂದು ನುಡಿದರು.

ಇದೆ ಸಂದರ್ಭದಲ್ಲಿ ಸಮಾಗಮ ವೆಲ್ಫೇರ್ ಫೌಂಡೇಶನ್ ವತಿಯಿಂದ ಶಾಲಾ ಕಾಲೇಜು ಮಕ್ಕಳಿಗೆ ಪ್ರಬಂಧ ಹಾಗೂ ಭಾಷಣ ಏರ್ಪಡಿಸಿ ವಿಜೇತರಿಗೆ ಪುಸ್ತಕ ಹಾಗೂ ಟ್ರೋಫಿಗಳನ್ನ ನೀಡಿ ಪ್ರೊತ್ಸಾಹಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಯುವರಾಜು, ಸದಸ್ಯ ಎಸ್ ಕೆ ಪ್ರಕಾಶ್, ಮುಖ್ಯಯೊಪಾಧ್ಯರಾದ ನೀಲಮ್ಮ, ಸಮಾಗಮ ವೆಲ್ಫೇರ್ ಫೌಂಡೇಶನ್ ನ್ ನಿರ್ದೇಶಕಿ ಸುಮಿತ್ರ ಎಚ್ ವಿ ಹಾಗೂ ನಿರ್ದೇಶಕರಾದ ರಾಘವೇಂದ್ರಸ್ವಾಮಿ ಎಂ.ಸಿ, ಶಿವಕುಮಾರ್‌ ಜಿ, ವಕೀಲರಾದ ರಘು ಎಸ್ ಕೆ ಆರ್ ಪೇಟೆ , ಆರ್ಥಿಕ ಸಲಹೆಗರರಾದ ಪ್ರಮೋದ್ ಕೆ ಆರ್ ಪೇಟೆ , ಕಿರಣ್ ಹಾಗೂ ಕಾಲೇಜಿನ ಉಪನ್ಯಾಸಕರು ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

8 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

9 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

9 hours ago