Mysore
22
broken clouds

Social Media

ಮಂಗಳವಾರ, 31 ಮಾರ್ಚ್ 2026
Light
Dark

ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆಗೆ ಪ್ರಯತ್ನ ಮಾಡುತ್ತಿದ್ದೇನೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯ ಬಸ್‌ ನಿಲ್ದಾಣದ ಮುಂಭಾಗದಲ್ಲಿಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಆಟೋ ನಿಲ್ದಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ಆಟೋ ಚಾಲಕರಿಗೆ ನೀವೇ ಗುದ್ದಲಿ ಪೂಜೆ ಮಾಡಿ ಎಂದಿದ್ದೆ. ದೊಡ್ಡ ಯೋಜನೆಗೆ ಚಾಲನೆ ಕೊಟ್ಟಾಗಲು ನಾನು ಪ್ರಚಾರಕ್ಕೆ ಎಂದು ಕೂಡ ಕೈ ಹಾಕಲಿಲ್ಲ‌. ಅದು ನನ್ನ ಜಾಯಮಾನವೂ ಅಲ್ಲ. ಪ್ರತಿ ಪಂಚಾಯತಿ ಮಟ್ಟದಲ್ಲಿ ಸುಸಜ್ಜಿತ ಆಸ್ಪತ್ರೆ, ಶಾಲೆ ಮಾಡಬೇಕು ಎಂಬ ಕನಸ್ಸಿದೆ. ಮೊದಲ ಹಂತವಾಗಿ 8 ಕೋಟಿ ಯೋಜನೆಯಲ್ಲಿ ಶಾಲೆ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ಧವಾಗಿದೆ. 100 ಬಸ್ ಸೆಲ್ಟರ್ ನಿರ್ಮಾಣಕ್ಕೆ ಪ್ಲಾನ್ ಮಾಡಿದ್ದೇವೆ ಎಂದು ಆಶ್ವಾಸನೆ ನೀಡಿದರು.

 

ಜಿಲ್ಲೆಯ ವಿಕಲಚೇತನರಿಗಾಗಿ ದೊಡ್ಡ ಮಟ್ಟದ ಕಾರ್ಯಕ್ರಮ ರೂಪಿಸಿದ್ದೇನೆ. ಕಾರ್ಖಾನೆಯನನು ತರಬೇಕು ಎಂಬುದು ಮಂಡ್ಯ ಜಿಲ್ಲೆಯ ಜನರ ನಿರೀಕ್ಷೆಯಾಗಿದೆ. ರಾಜ್ಯ ಸರ್ಕಾರದ ಸಹಕಾರ ಕೊಟ್ಟು ಪ್ರೋತ್ಸಾಹ ಮಾಡಿದ್ರೆ ಅದನ್ನು ಮಾಡಬಹುದು. ಆದ್ರೂ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆಗೆ ನಾನು ಪ್ರಯತ್ನ ಮಾಡ್ತಿದ್ದೇನೆ. ಟೀಕೆಗಳಿಗಿಂತ ಹೆಚ್ಚಾಗಿ ನನ್ನ ಡ್ಯೂಟಿಯನ್ನ ಪ್ರಾಮಾಣಿಕವಾಗಿ ದುಡಿಯುತ್ತೇನೆ. ರಾಜ್ಯ ಸರ್ಕಾರದ ಸಹಕಾರದ ಬಗ್ಗೆ ಈಗ ಚರ್ಚೆ ಮಾಡಲ್ಲ ಎಂದರು.

ಇನ್ನು ಮಂಡ್ಯಕ್ಕೆ ಕುಮಾರಸ್ವಾಮಿ ಕೊಡುಗೆ ಏನು ಎಂಬ ಕೈ ನಾಯಕರ ಪ್ರಶ್ನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಜಿಲ್ಲೆಗೆ ಕಾಂಗ್ರೆಸ್‌ನವರ ಕೊಡುಗೆ ಏನು? ಕೃಷಿ ವಿವಿಯನ್ನು ಎಷ್ಟು ವರ್ಷ ಇಟ್ಟುಕೊಳ್ತಾರೆ. ಎಷ್ಟು ವರ್ಷ ನಡೆಸುತ್ತಾರೆ. ಈಗ ಬೀದರ್‌ನಲ್ಲಿರುವ ಪಶು ವೈದ್ಯಕೀಯ ವಿವಿಯನ್ನು ಮುಚ್ಚುವ ಪರಿಸ್ಥಿತಿ ಬಂದಿದೆ. ಅದಕ್ಕೆ ಹಣ ಎಷ್ಟು ಕೊಟ್ಟಿದ್ದಾರೆ. ಎಷ್ಟು ವಿವಿಯನ್ನು ಇವರು ಮುಚ್ಚಿದ್ದಾರೆ. ಬರೀ ಪ್ರಚಾರಕ್ಕೋಸ್ಕರ ಕೆಲಸ ಮಾಡಬಾರದು ಎಂದು ಕಾಂಗ್ರೆಸ್‌ ನಾಯಕರಿಗೆ ತಿರುಗೇಟು ನೀಡಿದ್ದಾರೆ.

Tags:
error: Content is protected !!