ಮಂಡ್ಯ: ಜಿಲ್ಲೆಯ ಬಸ್ ನಿಲ್ದಾಣದ ಮುಂಭಾಗದಲ್ಲಿಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಆಟೋ ನಿಲ್ದಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ಆಟೋ ಚಾಲಕರಿಗೆ ನೀವೇ ಗುದ್ದಲಿ ಪೂಜೆ ಮಾಡಿ ಎಂದಿದ್ದೆ. ದೊಡ್ಡ ಯೋಜನೆಗೆ ಚಾಲನೆ ಕೊಟ್ಟಾಗಲು ನಾನು ಪ್ರಚಾರಕ್ಕೆ ಎಂದು ಕೂಡ ಕೈ ಹಾಕಲಿಲ್ಲ. ಅದು ನನ್ನ ಜಾಯಮಾನವೂ ಅಲ್ಲ. ಪ್ರತಿ ಪಂಚಾಯತಿ ಮಟ್ಟದಲ್ಲಿ ಸುಸಜ್ಜಿತ ಆಸ್ಪತ್ರೆ, ಶಾಲೆ ಮಾಡಬೇಕು ಎಂಬ ಕನಸ್ಸಿದೆ. ಮೊದಲ ಹಂತವಾಗಿ 8 ಕೋಟಿ ಯೋಜನೆಯಲ್ಲಿ ಶಾಲೆ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ಧವಾಗಿದೆ. 100 ಬಸ್ ಸೆಲ್ಟರ್ ನಿರ್ಮಾಣಕ್ಕೆ ಪ್ಲಾನ್ ಮಾಡಿದ್ದೇವೆ ಎಂದು ಆಶ್ವಾಸನೆ ನೀಡಿದರು.
ಜಿಲ್ಲೆಯ ವಿಕಲಚೇತನರಿಗಾಗಿ ದೊಡ್ಡ ಮಟ್ಟದ ಕಾರ್ಯಕ್ರಮ ರೂಪಿಸಿದ್ದೇನೆ. ಕಾರ್ಖಾನೆಯನನು ತರಬೇಕು ಎಂಬುದು ಮಂಡ್ಯ ಜಿಲ್ಲೆಯ ಜನರ ನಿರೀಕ್ಷೆಯಾಗಿದೆ. ರಾಜ್ಯ ಸರ್ಕಾರದ ಸಹಕಾರ ಕೊಟ್ಟು ಪ್ರೋತ್ಸಾಹ ಮಾಡಿದ್ರೆ ಅದನ್ನು ಮಾಡಬಹುದು. ಆದ್ರೂ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆಗೆ ನಾನು ಪ್ರಯತ್ನ ಮಾಡ್ತಿದ್ದೇನೆ. ಟೀಕೆಗಳಿಗಿಂತ ಹೆಚ್ಚಾಗಿ ನನ್ನ ಡ್ಯೂಟಿಯನ್ನ ಪ್ರಾಮಾಣಿಕವಾಗಿ ದುಡಿಯುತ್ತೇನೆ. ರಾಜ್ಯ ಸರ್ಕಾರದ ಸಹಕಾರದ ಬಗ್ಗೆ ಈಗ ಚರ್ಚೆ ಮಾಡಲ್ಲ ಎಂದರು.
ಇನ್ನು ಮಂಡ್ಯಕ್ಕೆ ಕುಮಾರಸ್ವಾಮಿ ಕೊಡುಗೆ ಏನು ಎಂಬ ಕೈ ನಾಯಕರ ಪ್ರಶ್ನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಜಿಲ್ಲೆಗೆ ಕಾಂಗ್ರೆಸ್‌ನವರ ಕೊಡುಗೆ ಏನು? ಕೃಷಿ ವಿವಿಯನ್ನು ಎಷ್ಟು ವರ್ಷ ಇಟ್ಟುಕೊಳ್ತಾರೆ. ಎಷ್ಟು ವರ್ಷ ನಡೆಸುತ್ತಾರೆ. ಈಗ ಬೀದರ್‌ನಲ್ಲಿರುವ ಪಶು ವೈದ್ಯಕೀಯ ವಿವಿಯನ್ನು ಮುಚ್ಚುವ ಪರಿಸ್ಥಿತಿ ಬಂದಿದೆ. ಅದಕ್ಕೆ ಹಣ ಎಷ್ಟು ಕೊಟ್ಟಿದ್ದಾರೆ. ಎಷ್ಟು ವಿವಿಯನ್ನು ಇವರು ಮುಚ್ಚಿದ್ದಾರೆ. ಬರೀ ಪ್ರಚಾರಕ್ಕೋಸ್ಕರ ಕೆಲಸ ಮಾಡಬಾರದು ಎಂದು ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…