ಮಂಡ್ಯ : ಕೃಷ್ಣರಾಜಸಾಗರದಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವುದರಿಂದ ಜನಸಾಮಾನ್ಯರಿಗೂ ಸಂಕಷ್ಟ ಎದುರಾಗಲಿದ್ದು, ರೈತರ ಹೋರಾಟದ ಜೊತೆ ನಾವೆಲ್ಲರೂ ನಿಲ್ಲಬೇಕಾಗಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂಕಷ್ಟಕಾಲದಲ್ಲಿ ರೈತರು ಬೆಳೆದಿರುವ ಬೆಳೆಗೆ ಮಾತ್ರ ಸಂಕಷ್ಟ ಎಂದು ಭಾವಿಸಬಾರದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಕಾಡಲಿದೆ. ಹಾಗಾಗಿ ಹೋರಾಟಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದರು.
ರೈತರ ಸಮಸ್ಯೆಯಾಗಲಿ ನೀರಿನ ಸಮಸ್ಯೆಯಾಗಲಿ ಅದು ರೈತರಿಗೆ ಸಂಬಂಧಿಸಿದ ಸಮಸ್ಯೆ ಅಲ್ಲ ಬದಲಾಗಿ , ಸಾಮಾನ್ಯ ಜನರ ಸಮಸ್ಯೆ ಕೂಡ ಹಾಗಿದೆ. ಇಂತಹ ವಿಷಯದಲ್ಲಿ ಯಾರೂ ಕೂಡ ರಾಜಕಾರಣ ಮಾಡಬಾರದು. ಮಳೆ ಬಾರದ ಕಾರಣ ಸಂಕಷ್ಟ ಪರಿಸ್ಥಿತಿ ಎದುರಾಗಿದೆ ಕಳೆದ ಬಾರಿ ಮಳೆಯಾಗಿ ಕಾವೇರಿ ಮಾತೆಗೆ ಬಾಗಿನ ಅರ್ಪಣೆ ಮಾಡಿದ್ದೆವು,ಆದರೆ ಈ ಬಾರಿ ಸಂಕಷ್ಟದ ಜೊತೆಗೆ ತಮಿಳುನಾಡಿಗೆ ನೀರು ಬಿಟ್ಟಿರುವುದರಿಂದ ರೈತರ ಕಷ್ಟ ಹೇಳತೀರದಾಗಿದೆ,ನಾವು ಯಾವ ರೀತಿ ಹೋರಾಟ ಮಾಡುತ್ತೇವೆ ಎಂಬುದು ಮುಖ್ಯ ಎಂದು ತಿಳಿಸಿದರು.
ಕೇಂದ್ರದಲ್ಲಿ ತಮಿಳುನಾಡಿಗೆ ಹೆಚ್ಚು ಒಲವು ಇದೆ. ನಾವು ಹೋರಾಟ ಮಾಡಬೇಕಾದ ಅವಶ್ಯಕತೆಯಿದೆ. ಇದಕ್ಕೆ ಪರಿಹಾರ ಹುಡುಕುವ ಕೆಲಸ ಮಾಡಬೇಕು. ನಮಗೆ ಸಮಸ್ಯೆ ಇದೆ, ನಮ್ಮ ಹೋರಾಟ ನಾವು ಮಾಡಬೇಕು. ನಮಗೆ ಸಮಸ್ಯೆ ಇದ್ದರೂ ನೀರು ಬಿಡುತ್ತಿದ್ದಾರೆ,ಸರ್ವ ಪಕ್ಷಗಳ ಸಭೆ ಕರೆದಿರುವ ಬಗ್ಗೆ ಮಾಹಿತಿ ಇದೆ, ಎಲ್ಲರೂ ಸೇರಿ ಚರ್ಚಿಸಲಿ, ರೈತರ ಹಿತ ಕಾಪಾಡುವುದು ಪ್ರಮುಖವಾಗಿದೆ ಎಂದರು.
ಕಾವೇರಿ ವಿಚಾರದಲ್ಲಿ ನಾನು ಸಂಸತ್ತಿನಲ್ಲಿ ಕಾವೇರಿ ನೀರಿನ ಬಗ್ಗೆ ಮಾತನಾಡಿದ್ದೇನೆ. ನಮ್ಮ ಸಮಸ್ಯೆ ಬಗ್ಗೆ ಹೇಳಿದ್ದೇನೆ. ಕೇಂದ್ರದ ಸಚಿವರನ್ನ ಸಹ ಭೇಟಿ ಮಾಡಿದ್ದೇನೆ. ಇವತ್ತು ಸಮಸ್ಯೆ ಯಾಗಿದೆ, ದನಿ ಎತ್ತುತ್ತೇವೆ ಎಂದರು.
ರಾಜಕೀಯವಾಗಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿದ್ದೇವೆ, ಬಿಜೆಪಿ ಸಂಸದೆಅಲ್ಲ ಬಿಜೆಪಿ ನಿರ್ಧಾರ ನನಗೆ ಅನ್ವಯವಾಗಲ್ಲ, ಅದು ಅವರಿಗೆ ಬಿಟ್ಟದ್ದು. ಎಲ್ಲವನ್ನೂ ನನ್ನ ಕೇಳಿ ಮಾಡಬೇಕು ಎಂಬ ನಿಯಮ ಇಲ್ಲ. ಪ್ರತಿಯೊಂದು ವಿಷಯದಲ್ಲೂ ನಾನು ಮಧ್ಯ ಪ್ರವೇಶ ಮಾಡಲ್ಲ. ನನ್ನನ್ನು ಸಂಪರ್ಕ ಮಾಡಿದರೆ ಬೆಂಬಲ ಮಾಡುತ್ತೇವೆ,ಇನ್ನು ನನಗೆ ರಾಜಕೀಯ ಅನಿವಾರ್ಯವಾಗಿಲ್ಲ, ಆಕಸ್ಮಿಕ ಮಾತ್ರ
ಎಂದರು.
ಆಪರೆಷನ್ ಹಸ್ತ ವಿಚಾರವಾಗಿ ಯಾರು ನನಗೆ ಆಹ್ವಾನ ಮಾಡಿಲ್ಲ, ನಾನು ಸಂತೋಷವಾಗಿದ್ದೇನೆ. ಕಾಂಗ್ರೆಸ್ ನಿಂದ ನಮಗೆ ಯಾವುದೇ ಆಫರ್ ನೀಡಿಲ್ಲ. ಎಲ್ಲವೂ ವದಂತಿಯ ಎಲ್ಲವೂ ಸರಿ ಎಂದಾದರೆ ಮಾತ್ರ ಮುಂದಿನ ಹೆಜ್ಜೆ ಇಡುತ್ತೇನೆ ಎಂದರು.
ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿ ಬಂಧಿತನಾಗಿದ್ದ ಮಾಸ್ಕ್‌ಮ್ಯಾನ್ ಚಿನ್ನಯ್ಯ ಈಗ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಚಿನ್ನಯ್ಯನಿಗೆ…
ರಾಮನಗರ: ರಾಮನಗರದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಎಸಗಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಕಾಸ್, ಪ್ರಶಾಂತ್, ಚೇತನ್…
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್‌ನಲ್ಲಿ…
ಬೆಳಗಾವಿ: ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ.…
ಮೈಸೂರಿನ ಕುವೆಂಪು ನಗರದ ಅಪೋಲೋ ಆಸ್ಪತ್ರೆಯ ಹಿಂಭಾಗ ದಲ್ಲಿರುವ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎದುರಿನ ದೊಡ್ಡಮೋರಿ ಯಿಂದ ತೆಗೆದ ಕಸವನ್ನು…
ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ)…