ಮಂಡ್ಯ

ಭತ್ತ, ರಾಗಿ ಖರೀದಿ ನೋಂದಣಿಯ ಅವಧಿ ವಿಸ್ತರಣೆ

ಮಂಡ್ಯ : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ೨೦೨೫-೨೬ನೇ ಸಾಲಿನ ಭತ್ತ ಮತ್ತು ರಾಗಿ ಖರೀದಿಗೆ ಸಮಯಾವಕಾಶ ವಿಸ್ತರಿಸಿದ್ದು, ಭತ್ತ ಖರೀದಿಗೆ ಡಿ.೩೧ರ ವರೆಗೆ ಹಾಗೂ ರಾಗಿ ಖರೀದಿಗೆ ಡಿ.೧೫ರ ವರೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ೨೦೨೫-೨೬ ನೇ ಸಾಲಿನ ಕಬ್ಬು ಸರಬರಾಜು ಮಾಡಿದ ರೈತರಿಗೆ ಹಾಗೂ ೨೦೨೪-೨೫ ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ, ಕೊಬ್ಬರಿ ಸರಬರಾಜು ಮಾಡಿದ ರೈತರಿಗೆ ಹಣ ಪವತಿಸಲು ಬಾಕಿಯಿರುವ ಸಂಬಂಧ ಆಯೋಜಿಸಲಾಗಿದ್ದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

೨೦೨೫-೨೬ ನೇ ಸಾಲಿಗೆ ಸಂಬಂಧಪಟ್ಟಂತೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿ ನೋಂದಣಿಗಾಗಿ ಜಿಲ್ಲೆಯಲ್ಲಿ ೧೭ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರು ನೇರವಾಗಿ ನೋಂದಣಿ ಕೇಂದ್ರಗಳಲ್ಲಿ ಭತ್ತ ಮತ್ತು ರಾಗಿ ಖರೀದಿಗೆ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಹೇಳಿದರು.

ಈವರೆಗೂ ಭತ್ತ ಖರೀದಿಗಾಗಿ ೧೮೨ ರೈತರು ೫೯೫೩.೦೦ ಕ್ವಿಂಟಾಲ್ ಪ್ರಮಾಣದಲ್ಲಿ ಭತ್ತಕ್ಕೆ ನೋಂದಾಯಿಸಿಕೊಂಡಿರುತ್ತಾರೆ. ರಾಗಿ ಖರೀದಿಗಾಗಿ ೧೩,೦೪೭ ರೈತರು ೩,೦೮,೬೬೬ ಕ್ವಿಂಟಾಲ್ ಪ್ರಮಾಣದ ರಾಗಿಗೆ ನೋಂದಾಯಿಸಿಕೊಂಡಿರುತ್ತಾರೆ ಎಂದು ಮಾಹಿತಿ ನೀಡಿದರು.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಸರ್ಕಾರವು ೨೦೨೫-೨೬ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದಿರುವ ಭತ್ತ ಮತ್ತು ರಾಗಿ ಖರೀದಿಸಲು ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂಟಾಲ್‌ಗೆ ರೂ ೨೩೬೯, ಗ್ರೇಡ್- ಎ ಭತ್ತಕ್ಕೆ ರೂ ೨೩೮೯ ಹಾಗೂ ರಾಗಿ ಪ್ರತಿ ಕ್ವಿಂಟಾಲ್‌ಗೆ ರೂ ೪೮೮೬ ನಿಗಽಪಡಿಸಲಾಗಿರುತ್ತದೆ. ಜಿಲ್ಲೆಯ ಎಲ್ಲಾ ರೈತರು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.

ಕಬ್ಬು ಸರಬರಾಜು ಮಾಡುವ ರೈತರಿಗೆ ಪಾವತಿ ಹಣವನ್ನು ಕಬ್ಬು ಸರಬರಾಜು ಮಾಡಿದ ೧೪ ದಿನದೊಳಗೆ ಹಣ ಪಾವತಿಸುವುದು ಕಡ್ಡಾಯವಾಗಿದ್ದು. ಜಿಲ್ಲೆಯಲ್ಲಿನ ಸಕ್ಕರೆ ಕಾರ್ಖಾನೆಗಳು ಕಬ್ಬು ಸರಬರಾಜು ಮಾಡಿದ ರೈತರಿಗೆ ೧೪ ದಿನದೊಳಗೆ ಹಣ ಪಾವತಿಸದಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಹಾಗೂ ೨೦೨೪-೨೫ ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಕೊಬ್ಬರಿ ಸರಬರಾಜು ಮಾಡಿದ ರೈತರಿಗೆ ಬಾಕಿಯಿರುವ ಪಾವತಿ ಹಣವನ್ನು ಶೀಘ್ರದಲ್ಲೇ ಪಾವತಿಸಬೇಕು ಎಂದರು.

ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಪ್ರತೀಕ್ ಹೆಗ್ಡೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

9 mins ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

38 mins ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

1 hour ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

1 hour ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…

2 hours ago