ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ ಸಂಬಂಧಿಸಿದಂತೆ ಒಟ್ಟು 34 ಪ್ರಕರಣಗಳು ವರದಿ ಆಗಿದ್ದು, 28 ಪ್ರಕರಣಗಳನ್ನು ಭೇದಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದ್ದಾರೆ.
ಶಾಸಕ ಮಧು ಜಿ.ಮಾದೇಗೌಡ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಈ ಹೆದ್ದಾರಿ ಸಾರ್ವಜನಿಕ ಬಳಕೆಗೆ ಮುಕ್ತಗೊಂಡ ಬಳಿಕ 2022 ರಿಂದ 2025ರ ಅಂತ್ಯಕ್ಕೆ ಈ ಪ್ರಕರಣಗಳು ವರದಿಯಾಗಿವೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಯಾಣಿಕರ ಸುಲಿಗೆಗೆ ಸಂಬಂಧಿಸಿದಂತೆ ಒಟ್ಟು 22 ಪ್ರಕರಣಗಳು ವರದಿಯಾಗಿದ್ದು, 17 ಪ್ರಕರಣಗಳನ್ನು ಭೇದಿಸಲಾಗಿದೆ. ಒಟ್ಟು 34 ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 12, ಮಂಡ್ಯ ಜಿಲ್ಲೆಯಲ್ಲಿ 9 ಹಾಗೂ ಮೈಸೂರು ನಗರದಲ್ಲಿ 1 ಪ್ರಕರಣ ವರದಿಯಾಗಿದೆ ಎಂದರು.
ಪ್ರಯಾಣಿಕರ ದರೋಡೆಗೆ ಸಂಬಂಧಿಸಿದಂತೆ, ವರದಿಯಾದ ಒಟ್ಟು 12 ಪ್ರಕರಣಗಳಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 7 ಹಾಗೂ ಮಂಡ್ಯ ಜಿಲ್ಲೆಯಲ್ಲಿ 5 ಪ್ರಕರಣಗಳು ವರದಿಯಾಗಿದ್ದು 11 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 56 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಲಿಗೆ ಮತ್ತು ದರೋಡೆಯನ್ನು ತಡೆಯಲು ದಿನದ 24 ಗಂಟೆಗಳಲ್ಲಿ ಮೂರು ಪಾಳಿಯಲ್ಲಿ ಹೈವೇ ಪೆಟ್ರೋಲಿಂಗ್ ನಿಯೋಜನೆ ಸೇರಿದಂತೆ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.
19.27 ಲಕ್ಷ ಸಂಚಾರ ನಿಯಮ ಉಲ್ಲಂಘನೆ
ಮೈಸೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಒಟ್ಟು 19.27 ಲಕ್ಷ ಸಂಚಾರ ನಿಯಮಗಳ ಉಲ್ಲಂಘನೆ ಆಗಿದೆ. 2024ರಲ್ಲಿ 13,83,861 ಹಾಗೂ 2025ರಲ್ಲಿ 5,43,175 ಪ್ರಕರಣಗಳು ದಾಖಲಾಗಿವೆ ಎಂದು ಸಚಿವ ಜಿ.ಪರಮೇಶ್ವರ್ ತಿಳಿಸಿದರು.
ನಿಯಮ ಉಲ್ಲಂಘನೆ ಸಂಬಂಧ 2024ರಲ್ಲಿ 13,83,861 ಪ್ರಕರಣಗಳು ವರದಿಯಾಗಿದ್ದು ರೂ.93,75,42,500 ದಂಡ ವಿಧಿಸಲಾಗಿದೆ. ದಂಡದ ಮೊತ್ತ ರೂ. 8,38,80,500 ಸಂಗ್ರಹಿಸಲಾಗಿದೆ. ದಂಡದ ಮೊತ್ತ 85,36,62,000 ರೂ. ಬಾಕಿ ಇದೆ.
ನಿಯಮ ಉಲ್ಲಂಘನೆ ಸಂಬಂಧ 2025ಲ್ಲಿ 5,43,175 ಪ್ರಕರಣಗಳು ವರದಿಯಾಗಿದ್ದು ರೂ. 40,10,76,500 ದಂಡ ವಿಧಿಸಲಾಗಿದೆ. ದಂಡದ ಮೊತ್ತ ರೂ. 4,30,73,000 ಸಂಗ್ರಹಿಸಲಾಗಿದೆ. ದಂಡದ ಮೊತ್ತ 35,8003,500 ರೂ. ಬಾಕಿ ಇದೆ ಎಂದು ಉತ್ತರಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…