ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ವರ್ಷದಿಂದ ವರ್ಷಕ್ಕೆ ಅಂತರ್ಜಲ ಪ್ರಮಾಣ ಹೆಚ್ಚುತ್ತಿದ್ದು, ಮುಂದೆ ಹೆಚ್ಚಿನ ಅನಾಹುತ ಆಗುವ ಆತಂಕ ಎದುರಾಗಿದೆ.
ಮಂಡ್ಯ ಜಿಲ್ಲೆಯಲ್ಲಿ ಅಂತರ್ಜಲ ಬಳಕೆ ಪ್ರಮಾಣ ಹೆಚ್ಚುತ್ತಿರುವ ಪರಿಣಾಮ ಅಂತರ್ಜಲ ಪಾತಾಳ ಸೇರುತ್ತಿದೆ. ಈ ಹಿನ್ನೆಲೆಯಲ್ಲಿ ಆತಂಕ ಮನೆಮಾಡಿದ್ದು, ಮುಂದಿನ ದಿನಗಳಲ್ಲಿ ಭಾರೀ ಅನಾಹುತವಾಗುವ ಎಚ್ಚರಿಕೆ ನೀಡಲಾಗಿದೆ.
ಜಿಲ್ಲೆಯಲ್ಲಿರುವ ಅಂತರ್ಜಲ ಇಲಾಖೆಯ 61 ಅಧ್ಯಯನ ಕೊಳವೆ ಬಾವಿಗಳಲ್ಲಿ ಪ್ರತಿ ಮಾಹೆ ದಾಖಲಿಸುತ್ತಿದೆ. ಅದರಂತೆ 2024ರಲ್ಲಿ ಪ್ರತಿ ತಿಂಗಳು ನಡೆಸಿದ ಅಧ್ಯಯನದಂತೆ ಜುಲೈನಲ್ಲಿ 9.97 ಮೀಟರ್‌ನಷ್ಟು ಅಂತರ್ಜಲ ಏರಿಳಿತವಾಗಿದೆ. ಅಂದರೆ ಸರಾಸರಿ 11.76 ಮೀಟರ್‌ನಷ್ಟು ವ್ಯತ್ಯಾಸವಾಗಿರುವುದು ಕಂಡು ಬಂದಿದೆ.
ಬೇಸಿಗೆ ಅವಧಿಯಲ್ಲಿ ಅಂತರ್ಜಲದ ಬಳಕೆ ಹೆಚ್ಚಾಗಿರುವುದರಿಂದ ಫೆಬ್ರವರಿಯಿಂದ ಮೇ ತಿಂಗಳವರೆಗೆ ಅಂತರ್ಜಲ ಹೆಚ್ಚು ಕುಸಿಯುತ್ತಾ ಹೋಗುತ್ತದೆ. ಮೇ ತಿಂಗಳಿನಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದ್ದು, ಜೂನ್, ಜುಲೈನಲ್ಲಿ ಮುಂಗಾರು ಮಳೆಯಾಗಿದ್ದರಿಂದ ಅಂತರ್ಜಲ ಬಳಕೆ ಪ್ರಮಾಣ ಶೇಕಡಾ.4 ಮೀಟರ್‌ನಷ್ಟು ಕಡಿಮೆಯಾಗಿರುವುದನ್ನು ಗುರುತಿಸಲಾಗಿದೆ.
ಇನ್ನು ಜಿಲ್ಲೆಯ ನಾಗಮಂಗಲ, ಮಳವಳ್ಳಿ ಹಾಗೂ ಮಂಡ್ಯ ತಾಲ್ಲೂಕುಗಳಲ್ಲಿ ಅಂತರ್ಜಲ ಪ್ರಮಾಣದಲ್ಲಿ ಭಾರೀ ಕುಸಿತ ಕಂಡಿದ್ದು, ಅನ್ನದಾತರಲ್ಲೂ ಸಹ ಆತಂಕ ಮನೆಮಾಡಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಕೆರೆಗಳಲ್ಲಿ ಹೂಳೆತ್ತಿ ಮಳೆಗಾಲದಲ್ಲಿ ಅತೀ ಹೆಚ್ಚು ನೀರು ಸಂಗ್ರಹವಾಗುವ ಹಾಗೇ ಮಾಡುವಂತೆ ಸೂಚನೆ ನೀಡಲಾಗಿದೆ.