ಮಂಡ್ಯ

ಮಂಡ್ಯದಲ್ಲಿ ಅಂತರ್ಜಲ ಮಟ್ಟ ಕುಸಿತ: ಆತಂಕದ ಮುನ್ಸೂಚನೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ವರ್ಷದಿಂದ ವರ್ಷಕ್ಕೆ ಅಂತರ್ಜಲ ಪ್ರಮಾಣ ಹೆಚ್ಚುತ್ತಿದ್ದು, ಮುಂದೆ ಹೆಚ್ಚಿನ ಅನಾಹುತ ಆಗುವ ಆತಂಕ ಎದುರಾಗಿದೆ.

ಮಂಡ್ಯ ಜಿಲ್ಲೆಯಲ್ಲಿ ಅಂತರ್ಜಲ ಬಳಕೆ ಪ್ರಮಾಣ ಹೆಚ್ಚುತ್ತಿರುವ ಪರಿಣಾಮ ಅಂತರ್ಜಲ ಪಾತಾಳ ಸೇರುತ್ತಿದೆ. ಈ ಹಿನ್ನೆಲೆಯಲ್ಲಿ ಆತಂಕ ಮನೆಮಾಡಿದ್ದು, ಮುಂದಿನ ದಿನಗಳಲ್ಲಿ ಭಾರೀ ಅನಾಹುತವಾಗುವ ಎಚ್ಚರಿಕೆ ನೀಡಲಾಗಿದೆ.

ಜಿಲ್ಲೆಯಲ್ಲಿರುವ ಅಂತರ್ಜಲ ಇಲಾಖೆಯ 61 ಅಧ್ಯಯನ ಕೊಳವೆ ಬಾವಿಗಳಲ್ಲಿ ಪ್ರತಿ ಮಾಹೆ ದಾಖಲಿಸುತ್ತಿದೆ. ಅದರಂತೆ 2024ರಲ್ಲಿ ಪ್ರತಿ ತಿಂಗಳು ನಡೆಸಿದ ಅಧ್ಯಯನದಂತೆ ಜುಲೈನಲ್ಲಿ 9.97 ಮೀಟರ್‌ನಷ್ಟು ಅಂತರ್ಜಲ ಏರಿಳಿತವಾಗಿದೆ. ಅಂದರೆ ಸರಾಸರಿ 11.76 ಮೀಟರ್‌ನಷ್ಟು ವ್ಯತ್ಯಾಸವಾಗಿರುವುದು ಕಂಡು ಬಂದಿದೆ.

ಬೇಸಿಗೆ ಅವಧಿಯಲ್ಲಿ ಅಂತರ್ಜಲದ ಬಳಕೆ ಹೆಚ್ಚಾಗಿರುವುದರಿಂದ ಫೆಬ್ರವರಿಯಿಂದ ಮೇ ತಿಂಗಳವರೆಗೆ ಅಂತರ್ಜಲ ಹೆಚ್ಚು ಕುಸಿಯುತ್ತಾ ಹೋಗುತ್ತದೆ. ಮೇ ತಿಂಗಳಿನಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದ್ದು, ಜೂನ್‌, ಜುಲೈನಲ್ಲಿ ಮುಂಗಾರು ಮಳೆಯಾಗಿದ್ದರಿಂದ ಅಂತರ್ಜಲ ಬಳಕೆ ಪ್ರಮಾಣ ಶೇಕಡಾ.4 ಮೀಟರ್‌ನಷ್ಟು ಕಡಿಮೆಯಾಗಿರುವುದನ್ನು ಗುರುತಿಸಲಾಗಿದೆ.

ಇನ್ನು ಜಿಲ್ಲೆಯ ನಾಗಮಂಗಲ, ಮಳವಳ್ಳಿ ಹಾಗೂ ಮಂಡ್ಯ ತಾಲ್ಲೂಕುಗಳಲ್ಲಿ ಅಂತರ್ಜಲ ಪ್ರಮಾಣದಲ್ಲಿ ಭಾರೀ ಕುಸಿತ ಕಂಡಿದ್ದು, ಅನ್ನದಾತರಲ್ಲೂ ಸಹ ಆತಂಕ ಮನೆಮಾಡಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಕೆರೆಗಳಲ್ಲಿ ಹೂಳೆತ್ತಿ ಮಳೆಗಾಲದಲ್ಲಿ ಅತೀ ಹೆಚ್ಚು ನೀರು ಸಂಗ್ರಹವಾಗುವ ಹಾಗೇ ಮಾಡುವಂತೆ ಸೂಚನೆ ನೀಡಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

2 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

3 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

5 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

6 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

7 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

7 hours ago