ಕೆ.ಆರ್.ಪೇಟೆ : ಸೆಸ್ಕ್ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತನೊಬ್ಬ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನ ಅರೆಬೂವನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಅರೆಬೂವನಹಳ್ಳಿ ಗ್ರಾಮದ ರೈತ ಬಿ.ಎನ್.ಮಂಜುನಾಥ್ ಮೃತ ರೈತರಾಗಿದ್ದಾರೆ. ಮಂಜುನಾಥ್ ಅವರು ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿ, ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು ಗಮನಿಸದೆ ಹುಲ್ಲು ಕುಯ್ಯುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈಗಾಗಲೇ ತಾಲ್ಲೂಕಿನಾದ್ಯಂತ ವಿದ್ಯುತ್‌ನಿಂದ ಹಲವಾರು ಜೀವಗಳು ಬಲಿಯಾಗುತ್ತಿದ್ದರೂ ತಾಲ್ಲೂಕಿನ ಸೆಸ್ಕ್ ಇಲಾಖೆಯವರು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ರೈತ ಸಂಘದ ಹಿರಿಯ ಮುಖಂಡ ಮುದುಗೆರೆ ರಾಜೇಗೌಡ ಹಾಗೂ ಅರೆಬೂವನಹಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ.
ಮನೆಯ ಒಡೆಯನನ್ನು ಕಳೆದುಕೊಂಡು ಮೃತ ಮಂಜುನಾಥ್ ಅವರ ಪತ್ನಿ ಸೇರಿದಂತೆ ಮಕ್ಕಳು ಆಘಾತಕ್ಕೀಡಾಗಿದ್ದು, ಸೆಸ್ಕ್ ಇಲಾಖೆಯ ಮೇಲ್ಮಟ್ಟದ ಅಧಿಕಾರಿಗಳು ಮೃತರ ಕುಟುಂಬದವರಿಗೆ ಸೂಕ್ತ ಪರಿಹಾರ ನೀಡಬೇಕು. ಅಲ್ಲದೆ, ತಾಲ್ಲೂಕಿನಾದ್ಯಂತ ವಿದ್ಯುತ್ ತಂತಿಗಳನ್ನು ಸರಿಪಡಿಸಿ ಮುಂದೆ ನಡೆಯಬಹುದಾದ ಆಘಾತಗಳನ್ನು ತಪ್ಪಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಚೌಡೇನಹಳ್ಳಿ ನಾಗರಾಜು, ವಕೀಲ ಕುರುಬಳ್ಳಿ ನಾಗೇಶ್, ಮಂಚನಹಳ್ಳಿ ನಾಗೇಗೌಡ ಇತರರಿದ್ದರು.
ಈ ಸಂಬಂಧ ಮೃತ ಮಂಜುನಾಥ್ ಅವರ ಪುತ್ರ ಬಿ.ಎಂ. ಧರ್ಮೇಶ್ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…