ಕೆ.ಆರ್.ಪೇಟೆ : ಸಿಡಿಲು ಬಡಿದು ರೈತ ಮೃತಪಟ್ಟು, ಮತ್ತೊಬ್ಬ ಗಾಯಗೊಂಡಿರುವ ಘಟನೆ ಘಟನೆ ತಾಲ್ಲೂಕಿನ ಬೀರುವಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಜವರೇಗೌಡ ಅವರ ಪುತ್ರ ಮಂಜುನಾಥ್(40) ಮೃತ ರೈತ.
ಮಂಜುನಾಥ್ ಜಮೀನಿನಲ್ಲಿ ಕೃಷಿ ಚಟುವಟಿಕೆ ನಡೆಸುವ ಸಂದರ್ಭದಲ್ಲಿ ಮಧ್ಯಾಹ್ನ 1ರ ಸಮಯದಲ್ಲಿ ಗುಡುಗು ಸಿಡಿಲು ಸಮೇತ ಮಳೆ ಸುರಿದಿದೆ.
ಈ ವೇಳೆ ಜಮೀನಿನಲ್ಲೇ ಇದ್ದ ಮಂಜುನಾಥ್‌ಗೆ ಸಿಡಿಲು ಬಡಿದಿದ್ದು ಸ್ಥಳದಲ್ಲೇ ಮೃತಪಟ್ಟರು. ಮತ್ತೊಬ್ಬ ರೈತ ಸಿಡಿಲು ಸ್ಪರ್ಶಕ್ಕೆ ಗಾಯಗೊಂಡಿದ್ದಾರೆ.ರಾಜು (47) ಬಂಡಿಹೊಳೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೃಷಿ ಚಟುವಟಿಕೆ ಮುಖಾಂತರ ದುಡಿದು ಕುಟುಂಬಕ್ಕೆ ಆಸರೆಯಾಗಿದ್ದ ಮಂಜುನಾಥ್ ಸಾವಿನಿಂದ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ. ಹಾಗಾಗಿ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.