ಮಂಡ್ಯ: ಆಸ್ತಿ ವಿಚಾರವಾಗಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಬಳಿ ಆತ್ಮಹತ್ಯಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಮೃತರನ್ನು ಕೆ.ಆರ್.ಪೇಟೆ ತಾಲ್ಲೂಕಿನ ಮೂಡನಹಳ್ಳಿ ಗ್ರಾಮದ ಮಂಜೇಗೌಡ ಎಂದು ಗುರುತಿಸಲಾಗಿದೆ.
ಇದನ್ನು ಓದಿ: ಮಂಡ್ಯ| ಜಿಲ್ಲಾಧಿಕಾರಿ ಕಚೇರಿ ಎದುರೇ ವ್ಯಕ್ತಿ ಆತ್ಮಹತ್ಯೆಗೆ ಯತ್ನ
ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಬೇಸತ್ತಿದ್ದ ಅವರು ನಿನ್ನೆ ಜಿಲ್ಲಾಧಿಕಾರಿ ಕಚೇರಿ ಎದುರು ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.
ನಂತರ ಸ್ಥಳೀಯರು ಬೆಂಕಿ ನಂದಿಸಿ ಅವರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ದೇಹದ ಶೇಕಡಾ.60ರಷ್ಟು ಭಾಗ ಸುಟ್ಟು ಹೋಗಿದ್ದರಿಂದ ನಂತರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರೈತ ಮಂಜೇಗೌಡ ಮೃತಪಟ್ಟಿದ್ದಾರೆ.





