ಮಂಡ್ಯ

ಕೃಷಿಕರ ಜಾಗೃತಿ ಸಮಾವೇಶ: ರೈತರು ಸದುಪಯೋಗ ಪಡೆದುಕೊಳ್ಳಿ: ಎನ್ ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ಕೃಷಿಕರ ಜಾಗೃತಿ ಸಮಾವೇಶದಲ್ಲಿ ಕೃಷಿ ಬಗ್ಗೆ ಅನೇಕ ಮಾಹಿತಿಯನ್ನು ನೀಡಲಾಗುತ್ತಿದ್ದು, ರೈತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಹೇಳಿದರು.

ಅವರು ಇಂದು(ಜು.14) ಮಂಡ್ಯ ಪಿ.ಇ.ಎಸ್ ವಿದ್ಯಾ ಸಂಸ್ಥೆಯ ಶ್ರೀ ವಿವೇಕಾನಂದ ಸಭಾಂಗಣದಲ್ಲಿ ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನ ಕೃಷಿ ಬೆಳೆಗಾರರ ಸಂಘ, ಸಂಪೂರ್ಣ ಸಾವಯವ ಕೃಷಿಕರ ಸಂಘ ಹಾಗೂ ಆರಿಗ್ರಾಫ್ ಇವರ ಸಹಭಾಗಿತ್ವದಲ್ಲಿ ನಡೆದ ಕೃಷಿಕರ ಜಾಗೃತಿ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸಿರಿಧಾನ್ಯಗಳನ್ನು ಆಹಾರದಲ್ಲಿ ಉಪಯೋಗಿಸುವುದರಿಂದ ಆರೋಗ್ಯಕರ ಜೀವನವನ್ನು ನಡೆಸಬಹುದು. ಸಾವಯವ ಕೃಷಿಯಾದ ಸಿರಿಧಾನ್ಯವನ್ನು ಬೆಳೆಯುವಂತಹ ಪದ್ಧತಿಯನ್ನು ಕಾರ್ಯಕ್ರಮದಲ್ಲಿ ತಿಳಿಸಲಾಗುತ್ತದೆ. ಬೆಳೆದಂತಹ ಸಿರಿಧಾನ್ಯವನ್ನು ಮಾರಾಟ ಮಾಡಲು ಮಾರ್ಕೆಟ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಸಿರಿಧಾನ್ಯವನ್ನು ಹೆಚ್ಚಿನ ಖರ್ಚಿಲ್ಲದೆ ಬೆಳೆಯಬಹುದಾಗಿದೆ. ಕೃಷಿಯಲ್ಲಿ ಬೆಳೆದ ಇನ್ನಿತರೆ ಬೆಳೆಗಳಿಗೆ ಬೆಲೆಯಲ್ಲಿ ಏರುಪೇರು ಸಾಮಾನ್ಯವಾಗಿದ್ದು, ಸಿರಿಧಾನ್ಯ ಬೆಳೆಗಾರರಿಗೆ ಅದರ ಸಮಸ್ಯೆ ಇರುವುದಿಲ್ಲ. ಸಿರಿಧಾನ್ಯವನ್ನು ಉತ್ತಮ ಬೆಲೆಗೆ ಮಾರಾಟ ಮಾಡಬಹುದು ಆದ್ದರಿಂದ ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಿ ಎಂದು ತಿಳಿಸಿದರು.

ಪರಿಸರದಲ್ಲಿನ ಹಸಿರು ಮನೆ ಅನಿಲಗಳ ಹೊರಸೂಸುವಿಕೆ ಹಾಗೂ ಜಾಗತಿಕ ತಾಪಮಾನದ ಏರಿಕೆಯಿಂದಾಗಿ ಹವಾಮಾನದ ಬದಲಾವಣೆಗೆ ಕಾರಣವಾಗುತ್ತಿದೆ. ಇದರ ಸಲುವಾಗಿ ನೈಸರ್ಗಿಕ ಅಸಮತೋಲನ ಉಂಟಾಗುತ್ತಿದ್ದು ಕೃಷಿ ಉತ್ಪಾದನೆ ಮೇಲೆ ಪರಿಣಾಮ ಬೀರುತ್ತಿದೆ, ರೈತರಿಗೆ ಇದು ಕಳವಳಕಾರಿ ವಿಷಯವಾಗಿದೆ ಎಂದರು.

ಕಾರ್ಬನ್ ಕ್ರೆಡಿಟ್ ಯೋಜನೆಯು ಪರಿಸರದಲ್ಲಿನ ಮಾಲಿನ್ಯವನ್ನು ಸರಿದೂಗಿಸಲು ಇಂಗಾಲದ ಹೊರಸೂಸುವಿಕೆಯನ್ನು ತಡೆದು, ಪರಿಸರದಲ್ಲಿ ಇಂಗಾಲದ ಡೈಯಾಕ್ಸೈಡ್ ಅನ್ನು ಹಿಡಿದಿಡುವ ಪ್ರಮುಖ ತಂತ್ರವಾಗಿದೆ. ಈ ಮೂಲಕ ನೈಸರ್ಗಿಕ ಸಮತೋಲನವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘವು ರೈತರ ಬವಣೆಗಳನ್ನು ತಗ್ಗಿಸಲು ಅನೇಕ ರೀತಿಯಲ್ಲಿ ಪ್ರಯತ್ನ ಪಡುತ್ತಿದೆ. ಜಾಗತಿಕವಾಗಿ ಪ್ರಚಲಿತವಾಗಿರುವ ಕಾರ್ಬನ್ ಕ್ರೆಡಿಟ್ ಯೋಜನೆಯನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಜಾರಿಗೆ ತಂದರೆ ನಾಡಿನ ಸಮಸ್ತ ರೈತರಿಗೂ ಪ್ರಯೋಜನ ದೊರೆತಂತಾಗುತ್ತದೆ. ಕಾರ್ಬನ್ ಕ್ರೆಡಿಟ್ ಯೋಜನೆಯನ್ನು ಮಂಡ್ಯ ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ಇಂದು ಉದ್ಘಾಟನೆ ಮಾಡುತ್ತಿರುವುದು ಅತ್ಯಂತ ಸಂತೋಷದ ವಿಚಾರವಾಗಿದೆ. ಇಡೀ ರಾಜ್ಯದ್ಯಂತ ಈ ಯೋಜನೆಯನ್ನು ಜಾರಿಗೆ ತರಲು ನಮ್ಮ ಸರ್ಕಾರ ಬದ್ಧವಾಗಿದೆ. ನೊಂದು ಬೆಂದ ರೈತರಿಗೆ ಈ ಯೋಜನೆಯು ಸಹಾಯವಾಗುತ್ತದೆ. ಇಂತಹ ಕಾರ್ಯಕ್ರಮವನ್ನು ಏರ್ಪಡಿಸಿದಂತಹ ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನ ಕೃಷಿ ಬೆಳೆಗಾರರ ಸಂಘದ ಅಧ್ಯಕ್ಷರು ಹಾಗೂ ನಿವೃತ್ತ ಐಎಎಸ್ ಅಧಿಕಾರಿಯಾದ ಅಮರ್ ನಾರಾಯಣ ಅವರಿಗೆ ಅಭಿನಂದನೆಗಳನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಂಡ್ಯ ಶಾಸಕ ಪಿ ರವಿಕುಮಾರ್, ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಅಶೋಕ್, ವನಕೃಷಿ ಸಂಘದ ಜಿಲ್ಲಾಧ್ಯಕ್ಷ ನಾಗರಾಜು, ರೈತ ಮುಖಂಡರಾದ ಸುನಂದಾ ಸೇರಿದಂತೆ ಇನ್ನಿತರ ರೈತರುಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

1 hour ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

2 hours ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

2 hours ago

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

2 hours ago

ಪ್ರಮುಖ ಆಕರ್ಷಣೀಯ ಕೇಂದ್ರವಾಗಿ ಹೊರಹೊಮ್ಮಿದ ಅಯೋಧ್ಯೆ ರಾಮಮಂದಿರ

ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್‌ ಒನ್‌ ಪಟ್ಟ ಪಡೆದಿದೆ. ಈ ಮೂಲಕ ಈಗ…

3 hours ago

ಪ್ರವಾಸಿಗರಿಗೆ ಬಿಗ್‌ ಶಾಕ್: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್‌ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…

3 hours ago