ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ ಮತ್ತು ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆ ಮೇಳ – 2026” ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ಇಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯದ ವಿ.ಸಿ. ಫಾರಂ, ಆವರಣದಲ್ಲಿ ಯಂತ್ರೋಪಕರಣ ಮತ್ತು ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆ ಮೇಳವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ಇದರ ಗೌರವಾನ್ವಿತ ಕುಲಪತಿಗಳಾದ ಡಾ. ಕೆ. ಸಿ. ನಾರಾಯಣಸ್ವಾಮಿ ಅವರು, ಅಭಿವೃದ್ಧಿ ಹೊಂದಿದ ಪಶ್ಚಿಮ ರಾಷ್ಟ್ರಗಳಲ್ಲಿ ಕೃಷಿಯಲ್ಲಿ ಸುಮಾರು 80 ರಿಂದ 90 ಶೇಕಡಾ ಮಟ್ಟದಲ್ಲಿ ಯಂತ್ರೋಪಕರಣಗಳ ಬಳಕೆ ನಡೆಯುತ್ತಿದೆ ಎಂದು ತಿಳಿಸಿದರು. ನಮ್ಮ ದೇಶದ ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ಸುಮಾರು 40 ರಿಂದ 50 ಶೇಕಡಾ ಮಟ್ಟದಲ್ಲಿ ಕೃಷಿ ಯಾಂತ್ರೀಕರಣ ಬಳಕೆಯಲ್ಲಿದ್ದು, ಕರ್ನಾಟಕ ರಾಜ್ಯದ ರೈತರು ಸಹ ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಯಂತ್ರೋಪಕರಣಗಳನ್ನು ಬಳಸುವ ಮೂಲಕ ಉತ್ಪಾದಕತೆ ಮತ್ತು ಆರ್ಥಿಕ ಮಟ್ಟವನ್ನು ಹೆಚ್ಚಿಸಿಕೊಳ್ಳಬೇಕೆಂದು ಹೇಳಿದರು.
ಇಂದಿನ ದಿನಗಳಲ್ಲಿ ಕೃಷಿ ಕಾರ್ಮಿಕರ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೃಷಿ ಯಾಂತ್ರೀಕರಣ ಅತ್ಯಂತ ಅಗತ್ಯವಾಗಿದೆ. ರೈತರು ಆಧುನಿಕ ತಂತ್ರಜ್ಞಾನ ಹಾಗೂ ಯಂತ್ರೋಪಕರಣಗಳನ್ನು ಅಳವಡಿಸಿಕೊಂಡು ಕೃಷಿಯನ್ನು ಹೆಚ್ಚು ಲಾಭದಾಯಕವಾಗಿಸಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು. ಇದರೊಂದಿಗೆ ಕೃಷಿ ಯಂತ್ರೋಪಕರಣಗಳ ದುರಸ್ತಿ ವಿಧಾನಗಳು ಹಾಗೂ ಸುರಕ್ಷಿತ ಬಳಕೆ ಕುರಿತು ತರಬೇತಿ ನೀಡುವ ಸರ್ಟಿಫಿಕೇಟ್ ಕೋರ್ಸ್‌ಗಳನ್ನು ಮುಂದಿನ ವರ್ಷಗಳಲ್ಲಿ ಆರಂಭಿಸಲು ಯೋಜಿಸಲಾಗಿದೆ ಎಂದು ಅವರು ಹೇಳಿದರು.
ಈ ಮೇಳದಲ್ಲಿ ಸುಮಾರು 50ಕ್ಕೂ ಹೆಚ್ಚು ಕೃಷಿ ಯಂತ್ರೋಪಕರಣಗಳಿಗೆ ಸಂಬಂಧಿಸಿದ ಮಳಿಗೆಗಳನ್ನು ಏರ್ಪಡಿಸಲಾಗಿತ್ತು. ವಿವಿಧ ಕಂಪನಿಗಳು ಹಾಗೂ ಸಂಸ್ಥೆಗಳು ತಮ್ಮ ಆಧುನಿಕ ಕೃಷಿ ಯಂತ್ರೋಪಕರಣಗಳನ್ನು ಪ್ರದರ್ಶಿಸಿದ್ದು, ರೈತರಿಗೆ ಅವುಗಳ ಕಾರ್ಯವಿಧಾನ, ಬಳಕೆ ವಿಧಾನ ಹಾಗೂ ಕೃಷಿಯಲ್ಲಿ ದೊರೆಯುವ ಪ್ರಯೋಜನಗಳ ಕುರಿತು ಸಮಗ್ರ ಮಾಹಿತಿ ನೀಡಲಾಯಿತು.
ಬೆಂಗಳೂರು: ನಾಳೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್ ಮಂಡನೆಯ…
ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…
ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…
ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾತನೂರು ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ್ ರವಿಕುಮಾರ್…