ಮಂಡ್ಯ

ಮಂಡ್ಯ: ಕೃಷಿ ಯಂತ್ರೋಪಕರಣದಿಂದ ಆಧುನಿಕ ಕೃಷಿಯತ್ತ ರೈತರು: ಡಾ. ಕೆ.ಸಿ.ನಾರಾಯಣಸ್ವಾಮಿ

ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ ಮತ್ತು ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆ ಮೇಳ – 2026” ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ಇಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯದ ವಿ.ಸಿ. ಫಾರಂ, ಆವರಣದಲ್ಲಿ ಯಂತ್ರೋಪಕರಣ ಮತ್ತು ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆ ಮೇಳವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ಇದರ ಗೌರವಾನ್ವಿತ ಕುಲಪತಿಗಳಾದ ಡಾ. ಕೆ. ಸಿ. ನಾರಾಯಣಸ್ವಾಮಿ ಅವರು, ಅಭಿವೃದ್ಧಿ ಹೊಂದಿದ ಪಶ್ಚಿಮ ರಾಷ್ಟ್ರಗಳಲ್ಲಿ ಕೃಷಿಯಲ್ಲಿ ಸುಮಾರು 80 ರಿಂದ 90 ಶೇಕಡಾ ಮಟ್ಟದಲ್ಲಿ ಯಂತ್ರೋಪಕರಣಗಳ ಬಳಕೆ ನಡೆಯುತ್ತಿದೆ ಎಂದು ತಿಳಿಸಿದರು. ನಮ್ಮ ದೇಶದ ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ಸುಮಾರು 40 ರಿಂದ 50 ಶೇಕಡಾ ಮಟ್ಟದಲ್ಲಿ ಕೃಷಿ ಯಾಂತ್ರೀಕರಣ ಬಳಕೆಯಲ್ಲಿದ್ದು, ಕರ್ನಾಟಕ ರಾಜ್ಯದ ರೈತರು ಸಹ ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಯಂತ್ರೋಪಕರಣಗಳನ್ನು ಬಳಸುವ ಮೂಲಕ ಉತ್ಪಾದಕತೆ ಮತ್ತು ಆರ್ಥಿಕ ಮಟ್ಟವನ್ನು ಹೆಚ್ಚಿಸಿಕೊಳ್ಳಬೇಕೆಂದು ಹೇಳಿದರು.

ಇಂದಿನ ದಿನಗಳಲ್ಲಿ ಕೃಷಿ ಕಾರ್ಮಿಕರ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೃಷಿ ಯಾಂತ್ರೀಕರಣ ಅತ್ಯಂತ ಅಗತ್ಯವಾಗಿದೆ. ರೈತರು ಆಧುನಿಕ ತಂತ್ರಜ್ಞಾನ ಹಾಗೂ ಯಂತ್ರೋಪಕರಣಗಳನ್ನು ಅಳವಡಿಸಿಕೊಂಡು ಕೃಷಿಯನ್ನು ಹೆಚ್ಚು ಲಾಭದಾಯಕವಾಗಿಸಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು. ಇದರೊಂದಿಗೆ ಕೃಷಿ ಯಂತ್ರೋಪಕರಣಗಳ ದುರಸ್ತಿ ವಿಧಾನಗಳು ಹಾಗೂ ಸುರಕ್ಷಿತ ಬಳಕೆ ಕುರಿತು ತರಬೇತಿ ನೀಡುವ ಸರ್ಟಿಫಿಕೇಟ್ ಕೋರ್ಸ್‌ಗಳನ್ನು ಮುಂದಿನ ವರ್ಷಗಳಲ್ಲಿ ಆರಂಭಿಸಲು ಯೋಜಿಸಲಾಗಿದೆ ಎಂದು ಅವರು ಹೇಳಿದರು.

ಈ ಮೇಳದಲ್ಲಿ ಸುಮಾರು 50ಕ್ಕೂ ಹೆಚ್ಚು ಕೃಷಿ ಯಂತ್ರೋಪಕರಣಗಳಿಗೆ ಸಂಬಂಧಿಸಿದ ಮಳಿಗೆಗಳನ್ನು ಏರ್ಪಡಿಸಲಾಗಿತ್ತು. ವಿವಿಧ ಕಂಪನಿಗಳು ಹಾಗೂ ಸಂಸ್ಥೆಗಳು ತಮ್ಮ ಆಧುನಿಕ ಕೃಷಿ ಯಂತ್ರೋಪಕರಣಗಳನ್ನು ಪ್ರದರ್ಶಿಸಿದ್ದು, ರೈತರಿಗೆ ಅವುಗಳ ಕಾರ್ಯವಿಧಾನ, ಬಳಕೆ ವಿಧಾನ ಹಾಗೂ ಕೃಷಿಯಲ್ಲಿ ದೊರೆಯುವ ಪ್ರಯೋಜನಗಳ ಕುರಿತು ಸಮಗ್ರ ಮಾಹಿತಿ ನೀಡಲಾಯಿತು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

2 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

2 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

2 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

2 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

2 hours ago