ಮಂಡ್ಯ

ನಾಲೆಗಳಿಗೆ ನೀರು ಹರಿಸಲು ಒತ್ತಾಯಿಸಿ ರೈತರ ಪ್ರತಿಭಟನೆ

ಶ್ರೀರಂಗಪಟ್ಟಣ : ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಬೆಳಗೊಳ ಹೋಬಳಿಯ ವಿವಿಧ ಗ್ರಾಮಗಳ ರೈತರು ಕೆಆರ್‌ಎಸ್‌ನ ನೀರಾವರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬೆಳಗೊಳ ರೈತ ಮುಖಂಡ ಸುನೀಲ್ ನೇತೃತ್ವದಲ್ಲಿ ವಿವಿಧ ಗ್ರಾಮಗಳ ಮುಖಂಡರು ಕಚೇರಿ ಮುಂದೆ ಜಮಾಯಿಸಿ ನಾಲೆಗಳಿಗೆ ನೀರು ಹರಿಸದ ಸರ್ಕಾರದ ಕ್ರಮವನ್ನು ಖಂಡಿಸಿದರು.

ಕೆಆರ್‌ಎಸ್ ಜಲಾಶಯ ಭರ್ತಿಯಾದರೂ ನಾಲೆಗಳಿಗೆ ನೀರು ಹರಿಸದೆ, ಕಟಾವಿನ ಹಂತಕ್ಕೆ ಬಂದ ಕಬ್ಬು ಇತರ ವಾಣಿಜ್ಯ ಬೆಳೆಗಳಾದ ತೆಂಗು, ಅಡಿಕೆ, ಬಾಳೆ ಬೆಳೆಗಳು ನೀರಿಲ್ಲದೆ ಬಾಡುತ್ತಿವೆ. ಈ ಭಾಗದಲ್ಲಿ ತಿಂಗಳಿನಿಂದ ಸರಿಯಾಗಿ ಮಳೆ ಬಿದ್ದಿಲ್ಲ. ಆಗೊಮ್ಮೆ ಈಗೊಮ್ಮೆ ಸೋನೆ ಸುರಿದಿದ್ದು ಬಿಟ್ಟರೆ ಹಳ್ಳ, ಕೊಳ್ಳಗಳಲ್ಲಿ ನೀರು ಹರಿಯುವಂತಹ ಮಳೆ ಬಂದಿಲ್ಲ. ವಿಶ್ವೇಶ್ವರಯ್ಯ ನಾಲೆ, ಸಿಡಿಎಸ್ ಹಾಗೂ ವಿರಿಜಾ ನಾಲೆಯ ವ್ಯಾಪ್ತಿಯ ಸಂಪರ್ಕ ನಾಲೆಯಲ್ಲಿ ನೂರಾರು ಎಕರೆ ಕೃಷಿ ಜಮೀನುಗಳಿಗೆ ಕಬ್ಬು ಇತರ ಬೆಳೆಗಳಿಗೆ ನೀರಿನ ಅವಶ್ಯಕತೆಯಿದೆ. ಬೆಳೆಗಳು ನೀರಿಲ್ಲದೆ ಬಾಡುವ ಪರಿಸ್ಥಿತಿ ಎದುರಾಗಿದ್ದು, ಕೂಡಲೆ ನೀರು ಹರಿಸಿ ಬೆಳೆ ಉಳಿಸಲು ಮುಂದಾಗಬೇಕು ಎಂದು ಒತ್ತಾಯಿಸಿ ನೀರಾವರಿ ಇಲಾಖೆಯ ಎಇಇ ಕಿಶೋರ್ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಹರೀಶ್, ವಿಷಕಂಠು, ವಿನಯ್, ಸಿದ್ದಪ್ಪ, ದಾಸೇಗೌಡ, ರವಿ, ಪಾಪಯ್ಯ, ಶಿವಕುಮಾರ್ ಸೇರಿದಂತೆ ಇತರ ರೈತ ಮುಖಂಡರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

2 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

3 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

4 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

5 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

10 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

10 hours ago