ಕೆ.ಆರ್.ಪೇಟೆ:– ರೈತರು ತಾವು ಬೆಳೆದ ಬೆಳೆಗಳನ್ನು ಸಾಗಿಸಲು ಸಮರ್ಪಕವಾದ ರಸ್ತೆಯಿಲ್ಲದೇ ಹೈರಾಣಾಗಿದ್ದು ಕೂಡಲೇ ತಮ್ಮ ಬೆಳೆಗಳನ್ನು ಸಾಗಿಸಲು ಸೂಕ್ತ ರಸ್ತೆ ನಿರ್ಮಿಸಿಕೊಡುವಂತೆ ಒತ್ತಾಯಿಸಿ ತಾಲ್ಲೂಕಿನ ಶೀಳನೆರೆ ಹೋಬಳಿಯ ಮರುವನಹಳ್ಳಿ ಗ್ರಾಮದ ರೈತರು ಗುಂಡಿಬಿದ್ದ ರಸ್ತೆಯಲ್ಲಿಯೇ ಪ್ರತಿಭಟನೆ ನಡೆಸಿದರು.
ಗ್ರಾಮದ ಸ್ಮಶಾನದ ಪಕ್ಕದಲ್ಲಿ ಶೀಳನೆರೆ ಗ್ರಾಮಕ್ಕೆ ತೆರಳಲು ಈ ಹಿಂದೆಯೇ ರಸ್ತೆ ಮಾಡಲಾಗಿತ್ತು. ಆದರೆ ಆ ರಸ್ತೆಯು ಪ್ರಾಕೃತಿಕ ವಿಕೋಪಗಳಿಗೆ ಸಿಲುಕಿ ಹದಗೆಟ್ಟಿದೆ. ಈಗ ಈ ರಸ್ತೆಗಳಲ್ಲಿ ಗಿಡಗಂಟಿಗಳು ಬೆಳೆದಿದ್ದು ಹಾಗೂ ಮಣ್ಣಿನ ಸವಕಳಿಯಿಂದ ವಾಹನಗಳನ್ನಾಗಲಿ ಅಥವಾ ಎತ್ತಿನ ಗಾಡಿಗಳನ್ನಾಗಲಿ ಚಲಾಯಿಸಲು ಸಾಧ್ಯವಾಗದೇ ಪರದಾಡುವಂತಾಗಿದೆ.
ಇದೇ ರಸ್ತೆಯನ್ನುಅವಲಂಬಿಸಿರುವ ಸುಮಾರು ನೂರಾರು ರೈತರುಗಳಿಗೆ ತಾವು ಬೆಳೆದ ಬೆಳೆಗಳನ್ನು ಸಾಗಿಸಲು ಬಹಳ ಅನಾನುಕೂಲವಾಗಿದೆ. ನೂರಾರು ಎಕರೆಗೂ ಹೆಚ್ಚಿನ ಪ್ರದೇಶದಲ್ಲಿ ರೈತರು ಹೆಚ್ಚಾಗಿ ಕಬ್ಬನ್ನು ಬೆಳೆಯುತ್ತಿದ್ದು ತಾವು ಬೆಳೆದ ಬೆಳೆಗಳನ್ನು ಸಾಗಿಸಲು ಸಮರ್ಪಕ ರಸ್ತೆಯಿಲ್ಲದೇ ಚುನಾಯಿತ ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಹಾಗಾಗಿ ಸಚಿವ ಕೆ.ಸಿ.ನಾರಾಯಣಗೌಡರು ಕೂಡಲೇ ಈ ಬಗ್ಗೆ ಗಮನಹರಿಸಿ ಭೂ ದಾಖಲೆಗಳ ಸಹಾಯಕ ನಿರ್ದೇಶಕರಿಗೆ ಸೂಚಿಸಿ ಒತ್ತುವರಿಯಾಗಿರುವ ರಸ್ತೆಯನ್ನು ಸರಿಪಡಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಗ್ರಾಮದ ಮುಖಂಡರಾದ ಹನುಮೇಗೌಡ, ಶಂಕರೇಗೌಡ, ನಂಜಪ್ಪಗೌಡ, ದೇವರಾಜು, ಶೇಖರ, ಶಂಕರಣ್ಣ, ವನಜಾಕ್ಷಮ್ಮ, ಶ್ರೀಕಂಠೇಗೌಡ, ಸುಧಾಕರ, ವಿಜಯ್‍ಕುಮಾರ್, ಸೇರಿದಂತೆ ಹಲವರು ಹಾಜರಿದ್ದರು.
ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…
ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ ಹನೂರು: ಮಹಾಲಯ ಅಮಾವಾಸ್ಯೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ ಗುಂಡ್ಲುಪೇಟೆ:…
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…