ಮಂಡ್ಯ

ರೈತರು ಪೂರ್ಣ ಪ್ರಮಾಣದಲ್ಲಿ ಯೋಜನೆಗಳನ್ನು ಬಳಸಿಕೊಳ್ಳಿ : ಸಚಿವ ಚಲುವರಾಯಸ್ವಾಮಿ ಕರೆ

ಮಂಡ್ಯ : ರೈತರು ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ  ಕರೆ ನೀಡಿದರು.

ಇಂದು (ಮಾ.24) ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕೃಷಿ ಇಲಾಖೆಯ ವತಿಯಿಂದ ನಡೆದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕೃಷಿ ಕವಚ ಕಾರ್ಯಕ್ರಮದ ಕೃಷಿ ಇಲಾಖೆ ಯೋಜನೆಗಳ ಒಗ್ಗೂಡಿತ ಬದು ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಕೃಷಿಯ ಮೂಲಕ ರೈತರು ಆರ್ಥಿಕವಾಗಿ ಸದೃಢರಾಗಲು ಇಂತಹ ಕಾರ್ಯಾಗಾರಗಳು ಅತ್ಯಗತ್ಯ ಎಂದು ಹೇಳಿದರು.

ಭಾರತದ ಮಾಜಿ ಪ್ರಧಾನಿ ಹಾಗೂ ಶ್ರೇಷ್ಠ ಅರ್ಥಶಾಸ್ತ್ರಜ್ಞ ದಿವಂಗತ ಡಾ. ಮನ ಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಜಾರಿಗೆ ಗೊಳಿಸಿದರು, ದೇಶದ ಯಾವುದೇ ಪ್ರಜೆಯೂ ಹಸಿವಿನಿಂದ ಬಳಲಬಾರದೆಂದು ಆಹಾರ ಸುರಕ್ಷತಾ ಕಾಯ್ದೆಯನ್ನು ಜಾರಿಗೊಳಿಸಿದ್ದರು ಎಂದು ಹೇಳಿದರು.

ಬೇಸಿಗೆ ಕಾಲದಲ್ಲಿ ಹೆಚ್ಚಿನ ನೀರಿನ ಸಮಸ್ಯೆ ಉದ್ಭವಿಸುತ್ತದೆ, ಇದರಿಂದ ಬೆಳೆಹಾನಿ ಸಂಭವ ಹೆಚ್ಚು, ಮೊದಲ ಹಂತದಲ್ಲಿ ಕೃಷಿ ಭಾಗ್ಯ ಯೋಜನೆಯಡಿ ನೀರಿನ ಕೊರತೆ ಇರುವ ರಾಜ್ಯದ 104 ತಾಲ್ಲೂಕುಗಳಲ್ಲಿ ಕೃಷಿ ಹೊಂಡ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಈಗ 224 ತಾಲ್ಲೂಕುಗಳಲ್ಲೂ ಕೃಷಿ ಹೊಂಡ ನಿರ್ಮಾಣ ಯೋಜನೆಯನ್ನು ಜಾರಿಗೆ ತರಲಾಯಿತು.ಇದರಿಂದ ನೀರಿನ ಕೊರತೆಯಾದ ಸಂದರ್ಭದಲ್ಲಿ 15-30 ದಿನಗಳ ಅವಧಿಗೆ ಕೃಷಿಗೆ ನೀರನ್ನು‌ ನೀಡಬಹುದು ಎಂದರು.

ಕೃಷಿ ಇಲಾಖೆಯಲ್ಲಿ ರೈತರಿಗೆ ಹಲವಾರು ಯೋಜನೆಗಳಿದ್ದು, ರೈತರು ಸದುಪಯೋಗ ಪಡಿಸಿಕೊಳ್ಳಬೇಕು. ತಾಲ್ಲೂಕು ಮಟ್ಟದಲ್ಲಿ ಜನಪ್ರತಿನಿಧಿಗಳ ಅಧ್ಯಕ್ಷತೆಯಲ್ಲಿ ಮನರೇಗಾ ಯೋಜನೆ ಕುರಿತು ಕಾರ್ಯಾಗಾರ ನಡೆಸಿ ಹೆಚ್ಚಿನ ಸಾಧನೆ ಮಾಡುವಂತೆ ತಿಳಿಸಿದರು.

ಸರ್ಕಾರ ಬಡವರು, ಹಿಂದುಳಿದ ಹಾಗೂ ಮಹಿಳೆಯರ ಜೀವನ ಸುಧಾರಿಸಲು ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರಲಾಯಿತು. ಇಂತಹ ಯೋಜನೆಯನ್ನು ಈ ಹಿಂದೆ ಯಾವುದೇ ಸರ್ಕಾರ ಜಾರಿಗೆ ತಂದಲ್ಲಿ. ಪಂಚ ಗ್ಯಾರಂಟಿ ಯೋಜನೆಯನ್ನು ನಮ್ಮ ಸರ್ಕಾರ ಜಾರಿಗೆ ತರುವ ಮೂಲಕ ಹೃದಯ ಶ್ರೀಮಂತಿಕೆಯನ್ನು ಮೆರೆದಿದೆ ಎಂದರು.

ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ತಾಲ್ಲೂಕಿಗೆ ಒಂದು ವರ್ಷಕ್ಕೆ ರೂ 230 ಕೋಟಿ ರೂ ವೆಚ್ಚ ಮಾಡಲಾಗುತ್ತಿದೆ. ಮಂಡ್ಯ ಜಿಲ್ಲೆಗೆ ಒಂದು ವರ್ಷದಲ್ಲಿ ಪಂಚ ಗ್ಯಾರಂಟಿ ಯೋಜನೆಗಾಗಿ 1610 ಕೋಟಿ ರೂ ವೆಚ್ಚವಾಗುತ್ತದೆ. ಈ ಯೋಜನೆಯಲ್ಲಿ ಯಾವುದೇ ಮದ್ಯವರ್ತಿಗಳಲ್ಲಿ ನೇರವಾಗಿ ಹಣ ಪೋಲಾಗದೆ ಫಲಾನುಭವಿಗಳ ಖಾತೆಗೆ ಜಮೆಯಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಹಲವಾರು ಅಭಿವೃದ್ಧಿ ಕೆಲಸಗಳು ಸಹ ನಿರಂತರವಾಗಿ ನಡೆಯುತ್ತಿದೆ ಎಂದರು.

ಸಭೆಯಲ್ಲಿ ಶ್ರೀರಂಗಪಟ್ಟಣ ವಿಧಾನಸಭಾ ಶಾಸಕ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷರಾದ ಎ.ಬಿ. ರಮೇಶ್ ಬಂಡಿಸಿದ್ದೇಗೌಡ, ಮೈಷುಗರ್ ಅಧ್ಯಕ್ಷ ಗಂಗಾಧರ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಂಟಿ ಕೃಷಿ ನಿರ್ದೇಶಕ ಅಶೋಕ್, ಬೆಲ್ಲದ ನಾಡು ರೈತ ಉತ್ಪಾದಕ ಕಂಪನಿಗಳು ಒಕ್ಕೂಟದ ಅಧ್ಯಕ್ಷ ಕಾರಸವಾಡಿ ಮಹದೇವ, ಮಂಡ್ಯ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದ ವಿಶೇಷಾಧಿಕಾರಿ ಡಾ.ಕೆ. ಎಂ. ಹರಿಣಿ ಕುಮಾರ್, ನರೇಗಾ ಆಯುಕ್ತಾಲಯ ಜಂಟಿ ನಿರ್ದೇಶಕಿ ಲಲಿತಾ ರೆಡ್ಡಿ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

10 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

10 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

10 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

11 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

11 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

12 hours ago