ಮಂಡ್ಯ

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸೋಮನಹಳ್ಳಿ ಕೆಸ್ತೂರು ಅಡ್ಡರಸ್ತೆಯ ಅಡಿಗಾಸ್ ಹೋಟೆಲ್ ಬಳಿ ಶುಕ್ರವಾರ ಸಂಜೆ ಜರುಗಿದೆ.

ನಗರದ ಡಾ.ಶಾಂತಾ ಹೆಚ್.ಕೆ.ಮರಿಯಪ್ಪ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ ಶಶಾಂಕ್ ಗೌಡ, ಹಿತಾ, ನಂದಿನಿ, ವಿಕ್ರಾಂತ್ ವಂದನಾ, ನಿಖಿತ್, ಮನ್ವಿತ್, ಹರ್ಷಿತಾ, ಹಾಗೂ ಸಾಹಿತ್ಯ ಗಾಯಗೊಂಡ ವಿದ್ಯಾರ್ಥಿಗಳಾಗಿದ್ದಾರೆ.
ಉದಯರಂಗ ಬಸ್ ನಲ್ಲಿದ್ದ ಸುಶೀಲಮ್ಮ, ಗೌರಮ್ಮ, ಶಿವರಾಂ, ಶೋಭಾ, ಶಿವಮಲ್ಲು, ಗಾಯಗೊಂಡ ವ್ಯಕ್ತಿಗಳಾಗಿದ್ದಾರೆ. ಗಾಯಗೊಂಡವರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದರಲ್ಲಿ ವಿಕ್ರಾಂತ್, ಹರ್ಷಿತಾ ಸೇರಿದಂತೆ 6 ಮಂದಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಎಂದಿನಂತೆ ಶಾಲೆಗೆ ಆಗಮಿಸಿದ್ದ ವಿದ್ಯಾರ್ಥಿಗಳು ಶಾಲೆ ಮುಗಿಸಿ ತಮ್ಮ ಗ್ರಾಮಗಳಿಗೆ ಶಾಲಾ ವಾಹನದ ಮೂಲಕ ತೆರಳುತ್ತಿದ ವೇಳೆ ಮದ್ದೂರು ಮಾರ್ಗವಾಗಿ ಆಗಮಿಸಿದ ಉದಯರಂಗ ಖಾಸಗಿ ಬಸ್ ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಕದಲೀಪುರ, ಹುಳಗನಹಳ್ಳಿ, ಹೆಮ್ಮನಹಳ್ಳಿ, ಗ್ರಾಮಗಳ ವಿದ್ಯಾರ್ಥಿಗಳನ್ನು ತಮ್ಮ ಗ್ರಾಮಕ್ಕೆ ಬಿಡಲು ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ಅಪಘಾತ ಸಂಭವಿಸಿದ ವಿಷಯ ತಿಳಿದು ಪೋಷಕರು ಆಸ್ಪತ್ರೆಗೆ ದೌಡಾಯಿಸಿ ತಮ್ಮ ಮಕ್ಕಳ ಆರೋಗ್ಯ ವಿಚಾರಿಸುತ್ತಿದ್ದಾರೆ.

ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸಚಿವ ಡಿ.ಸಿ.ತಮ್ಮಣ್ಸ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ‌. ಶೋಭಾರಾಣಿ, ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ, ಡಿವೈಎಸ್ಪಿ ಯಶವಂತ್ ಕುಮಾರ್, ಬಿಇಓ ಧನಂಜಯ, ಕದಲೂರು ಉದಯ್ ಚಾರಿಟಬಲ್ ಟ್ರಸ್ಟಿ ಕೆ.ಎಂ.ರವಿ, ಶಾಲಾ‌ ಆಡಳಿತ ಮಂಡಳಿಯ ಅಪೂರ್ವ ಚಂದ್ರು ಆಸ್ಪತ್ರೆಗೆ ಭೇಟಿ ಗಾಯಾಳುಗಳ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.

ಮದ್ದೂರು ಸಂಚಾರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

10 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

10 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

12 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

13 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

14 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

17 hours ago