ಮಂಡ್ಯ

ಪೊಲೀಸ್‌ ಪೇದೆ ಮೇಲೆ ಮಾರಣಾಂತಿಕ ಹಲ್ಲೆ : ಐವರ ವಿರುದ್ಧ ಎಫ್‌ಐಆರ್‌

ಕೆ.ಆರ್‌ ಪೇಟೆ : ಪೊಲೀಸ್ ಪೇದೆಯೊಬ್ಬರ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ್ದು, ಈ ಸಂಬಂಧ ಐವರ ವಿರುದ್ದ ಕೆ.ಆರ್‌ ಪೇಟೆ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.

ಸೈಯ್ಯದ್‌ ಮನ್ಸೂರ್ (27) ಹಲ್ಲೆಗೆ ಒಳಗಾದ ಪೊಲೀಸ್ ಕಾನ್ಸ್ ಟೇಬಲ್. ಸದ್ಯ ಮೈಸೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇದೆ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಸೈಯ್ಯದ್‌ಮನ್ಸೂರ್ ಮೆದುಳಿಗೆ ತೀವ್ರ ಪೆಟ್ಟಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಮಂಡ್ಯದ ಮೂಲದ ಕೆ.ಆರ್.ಪೇಟೆಯ ನಿವಾಸಿಯಾಗಿರುವ ಸೈಯ್ಯದ್‌ ಮನ್ಸೂರ್ ರಾಮನಗರ ಪೊಲೀಸ್ ಕಾನ್ಸ್ ಟೆಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅನಾರೋಗ್ಯ ಕಾರಣ ರಜೆ ಮೇಲೆ ಕೆ.ಆರ್‌ ಪೇಟೆಗೆ ಬಂದಿದ್ದ ಸೈಯ್ಯದ್‌, ಸ್ನೇಹಿತ ಜೊತೆ ಬೈಕ್ ರೇಸ್ ವೀಕ್ಷಣೆಗೆ ಹೋದ ವೇಳೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿದ್ದಾರೆ.

ರೇಸ್ ಸ್ಥಳದಿಂದ ಅಟ್ಟಾಡಿಸಿಕೊಂಡು‌ ಹೋಗಿ ಹತ್ಯೆಗೆ ಯತ್ನಿಸಿದ್ದು, ಡ್ರೋನ್ ಕ್ಯಾಮೆರಾದಲ್ಲಿ ಹಲ್ಲೆಯ ಇಂಚಿಂಚು‌ ದೃಶ್ಯಾವಳಿ ಸೆರೆಯಾಗಿದೆ. ಕಳೆದ ವರ್ಷ ನಾಗಮಂಗಲದ ಗಲಭೆಗೆ ಕಾರಣವಾಗಿದ್ದವರು ಈ ರೀತಿ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ನಾಗಮಂಗಲದ ಗಣೇಶ ಗಲಾಟೆಯಲ್ಲಿ‌ ಭಾಗಿಯಾಗಿದ್ದ ಕಿಡಿಗೇಡಿಗಳು ಈ ಹಲ್ಲೆ ನಡೆಸಿದ್ದು, ನಾಗಮಂಗಲದ ಮುತುಬೀರ್, ಅಜ್ಜು, ಬಾಲಿ ಸೇರಿ‌ ಐವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಗೂಗಲ್ ಮಹಾತ್ಮೆ: ಗೂಗಲ್ ಮಾತ್ರ ಸತ್ಯ, ಉಳಿದೆಲ್ಲವೂ ಮಿಥ್ಯ?

ರಮಾನಂದ ಶರ್ಮ ಯಾವುದೋ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಟೆಕ್ಕಿಯೊಬ್ಬರು ವೈದ್ಯರ ಬಳಿ ಹೋಗಿದ್ದರಂತೆ. ವೈದ್ಯರು ಅವರನ್ನು ಸ್ಥೂಲವಾಗಿ ಪರೀಕ್ಷಿಸಿ, ಮೂರು…

2 hours ago

ಕೆಎಸ್‌ಐಸಿ: ೧೫ ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಅಂತ್ಯ

ತಿ.ನರಸೀಪುರ: ಪಟ್ಟಣದ ಕೆಎಸ್‌ಐಸಿ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ವಿರೋಽಸಿ ಕಳೆದ ೧೫ ದಿನಗಳಿಂದ ವಿವಿಧ ಸಂಘಟನೆಗಳವರು ನಡೆಸುತ್ತಿದ್ದ ಪ್ರತಿಭಟನೆ…

2 hours ago

28 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ; ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ೬,೧೮೩ ವಿದ್ಯಾರ್ಥಿಗಳು ಮಡಿಕೇರಿ: ಮಾ.೧೮ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗ…

2 hours ago

ರಾಗಿ ಖರೀದಿ ಕೇಂದ್ರದಲ್ಲಿ ಹೆಚ್ಚುತ್ತಿರುವ ಅಕ್ರಮ: ಆರೋಪ

ನವೀನ್ ಕುಮಾರ್ ಕ್ವಿಂಟಾಲ್ ರಾಗಿಗೆ ೪ ಕೆಜಿ ಕಳೆಯುತ್ತಿರುವುದರಿಂದ ನಷ್ಟ ಎಂಬುದು ರೈತರ ಅಳಲು ಪಿರಿಯಾಪಟ್ಟಣ: ರಾಗಿ ಖರೀದಿ ಕೇಂದ್ರಗಳಲ್ಲಿ…

2 hours ago

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

12 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

12 hours ago