ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಮಂಡ್ಯದಲ್ಲಿ ನಡೆದಿದ್ದ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿ ದಿನ ಒಬ್ಬೊಬ್ಬರು ಆರೋಪಿಗಳು ಪೊಲೀಸರಿಗೆ ಸಿಕ್ಕಿ ಬೀಳುತ್ತಿದ್ದಾರೆ.
ಒಂಟಿ ಮನೆ ಹಾಗೂ ಕಾರಿನಲ್ಲಿ ಸ್ಕ್ಯಾನಿಂಗ್ ಮಾಡುತ್ತಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ಎಲ್ಲಾ ಆರೋಪಿಗಳು ಒಂದು ಹೆಣ್ಣು ಭ್ರೂಣ ಹತ್ಯೆಗೆ 10 ರಿಂದ 50 ಸಾವಿರದವರೆಗೂ ಚಾರ್ಜ್ ಮಾಡುತ್ತಿದ್ದರು ಎಂದು ಹೇಳಲಾಗಿದೆ.
ಈ ಪ್ರಕರಣ ಭೇದಿಸಲು ಏಳು ತಂಡ ರಚನೆ ಮಾಡಲಾಗಿದ್ದು, ಪ್ರಕರಣದಲ್ಲಿ ಕೆಲ ವೈದ್ಯರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ತನಿಖೆ ಶುರು ಮಾಡಿರುವ ಪೊಲೀಸರು ಆರೋಪಿ ವೈದ್ಯರನ್ನು ಬಂಧಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.
ಪ್ರಕರಣ ಸಂಬಂಧ ಮೇಲುಕೋಟೆ, ಪಾಂಡವಪುರ, ಬೆಳ್ಳೂರು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಚುರುಕುಗೊಂಡಿದೆ.