ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಎಗ್ಗಿಲ್ಲದೇ ನಡೆಯುತ್ತಿದ್ದ ಭ್ರೂಣ ಹತ್ಯೆಗೆ ಆರೋಗ್ಯ ಇಲಾಖೆ ಕಡಿವಾಣ ಹಾಕಿದ ಬೆನ್ನಲ್ಲೇ ಲಿಂಗಾನುಪಾತದಲ್ಲಿ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಂಡ್ಯ, ಪಾಂಡವಪುರ, ನಾಗಮಂಗಲದಲ್ಲಿ ಸರಣಿ ಭ್ರೂಣ ಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಮಂಡ್ಯ ಜಿಲ್ಲೆಯನ್ನು ರಾಜ್ಯದ ಮುಂದೆ ತಲೆ ತಗ್ಗಿಸುವಂತೆ ಮಾಡಿತ್ತು.
ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಅಲರ್ಟ್ ಆದ ಆರೋಗ್ಯ ಇಲಾಖೆ ದಂಧೆಗೆ ಕಡಿವಾಣ ಹಾಕುವಲ್ಲಿ ಸಂಪೂರ್ಣ ಯಶಸ್ವಿಯಾಗಿದೆ.
ಈ ಹಿನ್ನೆಲೆಯಲ್ಲಿ ಇದೀಗ ಆರೋಗ್ಯ ಇಲಾಖೆ ದಿಟ್ಟ ಕ್ರಮಕ್ಕೆ ಲಿಂಗಾನುಪಾತ ಏರಿಕೆ ಆಗಿದೆ. ಕಳೆದ ವರ್ಷ ಪ್ರತಿ ಗಂಡಿಗೆ 869 ಇದ್ದ ಹೆಣ್ಣು ಮಕ್ಕಳ ಸಂಖ್ಯೆ ಈ ವರ್ಷ 930ಕ್ಕೆ ಏರಿಕೆಯಾಗಿದೆ.
ಮಂಡ್ಯ ಜಿಲ್ಲೆಗೆ ತೀವ್ರ ಕಳಂಕ ತಂದಿದ್ದ ಭ್ರೂಣ ಲಿಂಗ ಪತ್ತೆ ದಂಧೆಗೆ ಬ್ರೇಕ್ ಹಾಕುವಲ್ಲಿ ಆರೋಗ್ಯ ಇಲಾಖೆ ಯಶಸ್ವಿಯಾಗಿದೆ.





