ಮಂಡ್ಯ

ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆಗೆ ಕಡಿವಾಣ: ಲಿಂಗಾನುಪಾತ ಏರಿಕೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಎಗ್ಗಿಲ್ಲದೇ ನಡೆಯುತ್ತಿದ್ದ ಭ್ರೂಣ ಹತ್ಯೆಗೆ ಆರೋಗ್ಯ ಇಲಾಖೆ ಕಡಿವಾಣ ಹಾಕಿದ ಬೆನ್ನಲ್ಲೇ ಲಿಂಗಾನುಪಾತದಲ್ಲಿ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಂಡ್ಯ, ಪಾಂಡವಪುರ, ನಾಗಮಂಗಲದಲ್ಲಿ ಸರಣಿ ಭ್ರೂಣ ಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಮಂಡ್ಯ ಜಿಲ್ಲೆಯನ್ನು ರಾಜ್ಯದ ಮುಂದೆ ತಲೆ ತಗ್ಗಿಸುವಂತೆ ಮಾಡಿತ್ತು.

ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಅಲರ್ಟ್‌ ಆದ ಆರೋಗ್ಯ ಇಲಾಖೆ ದಂಧೆಗೆ ಕಡಿವಾಣ ಹಾಕುವಲ್ಲಿ ಸಂಪೂರ್ಣ ಯಶಸ್ವಿಯಾಗಿದೆ.

ಈ ಹಿನ್ನೆಲೆಯಲ್ಲಿ ಇದೀಗ ಆರೋಗ್ಯ ಇಲಾಖೆ ದಿಟ್ಟ ಕ್ರಮಕ್ಕೆ ಲಿಂಗಾನುಪಾತ ಏರಿಕೆ ಆಗಿದೆ. ಕಳೆದ ವರ್ಷ ಪ್ರತಿ ಗಂಡಿಗೆ 869 ಇದ್ದ ಹೆಣ್ಣು ಮಕ್ಕಳ ಸಂಖ್ಯೆ ಈ ವರ್ಷ 930ಕ್ಕೆ ಏರಿಕೆಯಾಗಿದೆ.

ಮಂಡ್ಯ ಜಿಲ್ಲೆಗೆ ತೀವ್ರ ಕಳಂಕ ತಂದಿದ್ದ ಭ್ರೂಣ ಲಿಂಗ ಪತ್ತೆ ದಂಧೆಗೆ ಬ್ರೇಕ್‌ ಹಾಕುವಲ್ಲಿ ಆರೋಗ್ಯ ಇಲಾಖೆ ಯಶಸ್ವಿಯಾಗಿದೆ.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

12 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

13 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

14 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

15 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

18 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

19 hours ago