Mysore
23
broken clouds

Social Media

ಶುಕ್ರವಾರ, 13 ಜೂನ್ 2025
Light
Dark

ಹೆಣ್ಣು ಭ್ರೂಣ ಪತ್ತೆ ಪ್ರಕರಣ: ಸ್ಥಳ ಮ‌ಹಜರ್ ನಡೆಸಿದ ಜಿಲ್ಲಾಧಿಕಾರಿ

ಪಾಂಡವಪುರ: ಇಲ್ಲಿನ ಆರೋಗ್ಯ ಇಲಾಖೆಯ ವಸತಿಗೃಹದಲ್ಲಿ ಹೆಣ್ಣು ಭ್ರೂಣ ಪತ್ತೆ ಮಾಡುತ್ತಿದ್ದ ಮನೆಗೆ ಜಿಲ್ಲಾಧಿಕಾರಿ ಡಾ.ಕುಮಾರ, ಪೊಲೀಸ್‌ ವರಿಷ್ಠಾಧಿಕಾರಿ ಎನ್.ಯತೀಶ್‌ ಹಾಗೂ ಜಿಲ್ಲಾ ಪಂಚಾಯತ್‌ ಸಿಇಒ ಶೇಖ್‌ ತನ್ವೀರ್‌ ಆಸಿಫ್ ಭೇಟಿ ನೀಡಿ ಪರಿಶೀಲನೆ‌ ನಡೆಸಿದರು.

ಭಾನುವಾರ ತಡರಾತ್ರಿ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಖಚಿತ ಮಾಹಿತಿ ಮೇರೆಗೆ ಹೆಣ್ಣು ಭ್ರೂಣ ಪತ್ತೆ ಸ್ಥಳಕ್ಕೆ ದಾಳಿ ನಡೆಸಿ, ಎಲ್ಲಾ ಪರಿಕರಗಳನ್ನು ವಶಕ್ಕೆ ಪಡೆದು ಆರೋಪಿಗಳನ್ನು ಬಂಧಿಸಲಾಗಿದ್ದು, ಸ್ಕ್ಯಾನಿಂಗ್‌ಗೆ ಬಂದಿದ್ದು ಮೈಸೂರು ಮೂಲದ ಮಹಿಳೆಯನ್ನು ರಕ್ಷಿಸಲಾಗಿದೆ.

ಸೋಮವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್‌ ಸ್ಕ್ಯಾನಿಂಗ್‌ ನಡೆಯುತ್ತಿದ್ದ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿಗೆ ಆಗಮಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪ್ರಕರಣದ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡರು.

Tags:
error: Content is protected !!