Human fetus inside the womb
ಮಂಡ್ಯ: 2023ರ ಡಿಸೆಂಬರ್‌ನಲ್ಲಿ ರಾಜ್ಯ ಪೊಲೀಸ್ ಇಲಾಖೆ ಮಂಡ್ಯದಲ್ಲಿ ಅತಿದೊಡ್ಡ ಭ್ರೂಣಲಿಂಗ ಹತ್ಯೆ ಜಾಲವನ್ನು ಭೇದಿಸಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ಮಂಡ್ಯದಲ್ಲಿ ಮತ್ತೊಂದು ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಜಾಲವೊಂದು ಪತ್ತೆಯಾಗಿದೆ.
ಜಿಲ್ಲೆಯ ಪಾಂಡವಪುರ ಆರೋಗ್ಯ ಇಲಾಖೆಯ ಕಾರ್ಟರ್ಸ್‌ನಲ್ಲಿಯೇ ಭ್ರೂಣಲಿಂಗ ಹತ್ಯೆಗೆ ತಯಾರಿ ನಡೆಯುತ್ತಿದ್ದು, ಖಚಿತ ಮಾಹಿತಿ ಮೇರೆಗೆ ತಾಲೂಕು ಆರೋಗ್ಯಾಧಿಕಾರಿ ಡಾ. ಅರವಿಂದ್ ಹಾಗೂ ಪೊಲೀಸರ ತಂಡದ ಜಂಟಿ ಕಾರ್ಯಾಚರಣೆಯಿಂದ ಈ ಜಾಲ ಭೇದಿಸಿದ್ದಾರೆ.
ಮೈಸೂರು ಮೂಲದ ಮಹಿಳೆಯೊಬ್ಬರು ಗರ್ಭಪಾತಕ್ಕೆ ಆಗಮಿಸಿದ್ದ ವೇಳೆ ಕ್ವಾರ್ಟ್‌ರ್ಸ್‌ಗೆ ದಾಳಿ ನಡೆಸಿದ ಜಂಟಿ ತಂಡ ಮಹಿಳೆಯನ್ನು ರಕ್ಷಿಸಿದ್ದಾರೆ. ಈ ವೇಳೆ ಗರ್ಭಪಾತದ ಯೋತ್ರೋಪಕರಣಗಳು ಜತೆಗೆ ಈ ಕೃತ್ಯದಲ್ಲಿ ಭಾಗಿಯಾಗಿದ್ದ
ಪಾಂಡವಪುರ ತಾಲೂಕು ಆಸ್ಪತ್ರ ಆಂಬುಲೆನ್ಸ್ ಚಾಲಕ ಆನಂದ್, ಹೊರಗುತ್ತಿಗೆ ಡಿ ಗ್ರೂಪ್ ಸಿಬ್ಬಂದಿ ಅಶ್ವಿನಿ ಮತ್ತು ಮತ್ತೊಬ್ಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…