Mysore
29
clear sky

Social Media

ಶನಿವಾರ, 31 ಜನವರಿ 2026
Light
Dark

ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ಮತ್ತೆ ಮೂವರು ಆರೋಪಿಗಳ ಬಂಧನ

ಮಂಡ್ಯ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತೆ ಮಾಡಿದ್ದ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಸಂಬಂದ ಮಂಡ್ಯ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬನ್ನೂರಿನ ರಾಮಕೃಷ್ಣ, ಗುರು ಹಾಗೂ ಮೈಸೂರಿನ ಸೋಮಶೇಖರ್‌ ಎಂಬುವವರೇ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 2 ಸ್ಕ್ಯಾನಿಂಗ್‌ ಯಂತ್ರ, ಒಂದು ಕಾರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 12 ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಆರೇಳು ಮಂದಿ ಆರೋಪಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಪ್ರಕರಣ ಸಂಬಂಧ ಮೇಲುಕೋಟೆ, ಪಾಂಡವಪುರ, ಬೆಳ್ಳೂರು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಮಂಡ್ಯ ಪೊಲೀಸರು ಮತ್ತಷ್ಟು ತನಿಖೆ ಚುರುಕುಗೊಳಿಸಿದ್ದಾರೆ.

ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದ ಹೆಣ್ಣುಭ್ರೂಣ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತೆ ಮಾಡಿತ್ತು. ಹಣದಾಸೆಗೆ ಕರುಳಬಳ್ಳಿಗಳನ್ನು ಕೊಲ್ಲುವ ಹೇಯ ಕೃತ್ಯವನ್ನು ಪಾಪಿಗಳು ಎಸಗುತ್ತಿದ್ದರು.

ಈ ಹಿನ್ನೆಲೆಯಲ್ಲಿ ಮೊದಲಿಗೆ ಮಂಡ್ಯ ತಾಲ್ಲೂಕಿನ ಹಾಡ್ಯ ಗ್ರಾಮದ ಆಲೆಮನೆಯಲ್ಲಿ ನಡೆಯುತ್ತಿದ್ದ ಕರಾಳ ದಂಧೆಯನ್ನು ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಬೇಧಿಸಿ ಹಲವು ಮಂದಿಯನ್ನು ಬಂಧಿಸಿದ್ದರು.

ಅನಂತರ ತನಿಖೆ ಕೈಗೊಂಡ ಪೊಲೀಸರು ಇದುವರೆಗೂ ಕಾರ್ಯಾಚರಣೆ ನಡೆಸಿ ಆರೋಪಿಗಳ ಎಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಇನ್ನೂ ನಾಲ್ಕೈದು ಜನ ಆರೋಪಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಅವರನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.

Tags:
error: Content is protected !!