ಮಂಡ್ಯ

ಹೆಣ್ಣು ಭ್ರೂಣ ಹತ್ಯೆ ಪ್ರಕರಣ:12 ಆರೋಪಿಗಳ ಬಂಧನ

ಮಂಡ್ಯ: ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳ ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸ್ ವಿಶೇಷ ತಂಡ ಯಶಸ್ವಿಯಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ಅಭಿಷೇಕ್,ವಿರೇಶ್‌ ಸೇರಿದಂತೆ ಪುಟ್ಟರಾಜು,ಕುಮಾರ್, ಶಾರದಮ್ಮ, ದಾಸೇಗೌಡ,ಲ್ಯಾಬ್ ಸತ್ಯ, lಮೀನಾ, ಮಲ್ಲಿಕಾರ್ಜುನ್, ಸೋಮಶೇಖರ್, ರತ್ನಮ್ಮ, ಪ್ರೇಮ ಆಲಿಯಾಸ್ ಪಾರ್ವತಿರವರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಹೆಣ್ಣು ಭ್ರೂಣವನ್ನು ಅಕ್ರಮವಾಗಿ ಸ್ಕ್ಯಾನಿಂಗ್ ಮೂಲಕ ಪತ್ತೆ ಮಾಡುವುದು ಆಶಾ ಕಾರ್ಯಕರ್ತರು,ಖಾಸಗಿ ಲ್ಯಾಬ್ ಟೆಕ್ನಿಷಿಯನ್ಸ್‌ಗಳ ಮೂಲಕ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ಮಾಡುತ್ತಿರುವ ಬಗ್ಗೆ ಹಾಗೂ ಸಹಕರಿಸುತ್ತಿದ್ದವರ ಮೇಲೆ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು.

ಪಾಂಡವಪುರದ ಆರೋಗ್ಯ ಇಲಾಖೆ ವಸತಿಗೃಹದಲ್ಲಿ ಗ್ರೂಪ್ ಡಿ ಮಹಿಳಾ ನೌಕರರಾದ ಅಶ್ವಿನಿರವರ ಮನೆಯಲ್ಲಿ ನಡೆದಿದ್ದ ಪ್ರಕರಣದಲ್ಲಿ 19 ಆರೋಪಿಗಳ ಪೈಕಿ 12 ಆರೋಪಿಗಳನ್ನು ಬಂಧಿಸಲಾಗಿತ್ತು. ಇನ್ನುಳಿದ ಏಳು ಆರೋಪಿಗಳು ತಲೆಮರೆಸಿಕೊಂಡಿದ್ದರು, ಮೇಲುಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣದಲ್ಲಿ ಏಳು ಆರೋಪಿಗಳ ಪೈಕಿ ಮೂವರನ್ನು ಬಂಧಿಸಲಾಗಿತ್ತು ನಾಲ್ವರು ತಲೆಮರಸಿಕೊಂಡಿದ್ದರು. ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಣ್ಣು ಭ್ರೂಣ ತಪಾಸಣೆ ಮಾಡಲು ತೆರಳುತ್ತಿದ್ದಾಗ ದಾಳಿ ಮಾಡಿದ್ದ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ಪೈಕಿ ಮೂವರನ್ನು ಬಂಧಿಸಲಾಗಿತ್ತು ಮತ್ತೋರ್ವ ನಾಪತ್ತೆಯಾಗಿ ದ್ದನು,ಅದೇ ರೀತಿ ಮೈಸೂರು ನಗರದ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಕರಣ ಹಾಗೂ ಬೆಂಗಳೂರು ನಗರದ ಬೈಯಪ್ಪನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು,
ಈ ಎಲ್ಲಾ ಪ್ರಕರಣಗಳಲ್ಲಿ ತಲೆ ಮರೆಸಿಕೊಂಡ ಆರೋಪಿಗಳ ಪತ್ತೆ ಸಂಬಂಧ ಪೊಲೀಸರ ವಿಶೇಷ ತಂಡವನ್ನು ರಚನೆ ಮಾಡಲಾಗಿತ್ತು. ತಂಡ ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿಗಳಾದ ಅಭಿಷೇಕ್ ಮತ್ತು ವಿರೇಶ್‌ ರನ್ನು ಬಂಧಿಸಿ ವಿಚಾರಣೆ ನಡೆಸಿದ್ದರಿಂದ ಪ್ರಕರಣದಲ್ಲಿ ಭಾಗಿಯಾಗಿರುವ ಇತರ 10 ಆರೋಪಿಗಳಾದ ಪುಟ್ಟರಾಜು,ಕುಮಾರ್,ಶಾರದಮ್ಮ, ದಾಸೇಗೌಡ, ಲ್ಯಾಬ್ ಸತ್ಯ, ಮೀನಾ, ಮಲ್ಲಿಕಾರ್ಜುನ್, ಸೋಮಶೇಖರ್, ರತ್ನಮ್ಮ, ಪ್ರೇಮ ಆಲಿಯಾಸ್ ಪಾರ್ವತಿರನ್ನ ಬಂಧಿಸಲಾಗಿದೆ ಎಂದು ತಿಳಿಸಿದರು.

ಬಂಧಿತರಿಂದ ಅಕ್ರಮವಾಗಿ ಕೃತ್ಯಕ್ಕೆ ಉಪಯೋಗಿಸಿದ ಎರಡು ಸ್ಕ್ಯಾನಿಂಗ್ ಉಪಕರಣ ಮಾರುತಿ ಎಸ್-ಕ್ರಾಸ್,ಮಾರುತಿ ಸಿಲಾರಿಯೋ ಮತ್ತು ಮಾರುತಿ ಓಮ್ಮಿ ಕಾರು ಹಾಗೂ ಮೂರು ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಅದೇ ರೀತಿ ಪ್ರಕರಣಗಳಲ್ಲಿ ಭಾಗಿಯಾಗಿರುವ ಕೆಲವರು ತಲೆ ಮರೆಸಿಕೊಂಡಿದ್ದು, ಇವರ ಪತ್ತೆ ಕಾರ್ಯಾಚರಣೆ ಮುಂದುವರೆದಿದೆ ಎಂದರು.

ಪತ್ತೆ ಕಾರ್ಯಾಚರಣೆಯಲ್ಲಿ ಭಾಗಿಯಾದ ಪೊಲೀಸ್ ಅಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿ ತಂಡಕ್ಕೆ ಇಲಾಖೆಯಿಂದ ಪ್ರಶಂಸನಾ ಪತ್ರ ಹಾಗೂ ನಗದು ಬಹುಮಾನ ಘೋಷಣೆ ಮಾಡಲಾಗಿದೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

3 hours ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

3 hours ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

3 hours ago

ಬಾಪೂಜಿ ನೆನಪಲ್ಲಿ; ಖಾದಿ ಕೇಂದ್ರದ ಅಂಗಳದಲ್ಲಿ…

ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ  ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ನಿರ್ಮಾಪಕರ ಸಂಘ, ವಾಣಿಜ್ಯ ಮಂಡಳಿ ಚುನಾವಣೆ, ಚಿತ್ರನಗರಿ, ಒಟಿಟಿ ವರ್ತಮಾನ

ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…

3 hours ago

ಚಳಿ ಇರುವಾಗಲೇ ದಿನಕ್ಕೊಂದು ‘ಅಗ್ನಿ ಕರೆ’

ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…

3 hours ago