ಮಂಡ್ಯ

ಜಿಲ್ಲೆಯ ಕೊನೆಯ ಭಾಗದ ಕೆರೆಗಳಿಗೆ ನೀರು ತುಂಬಿಸಿ: ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ : ಕೆ.ಆರ್.ಎಸ್ ಜಲಾಶಯ ಭರ್ತಿಯಾಗಿದ್ದು, ಜಿಲ್ಲೆಯ ಕೊನೆಯ ಭಾಗದ ಕೆರೆಗಳಿಗೆ ನೀರು ತುಂಬಿಸಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಶನಿವಾರ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಕೆ.ಡಿ.ಪಿ. ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮದ್ದೂರು ಮತ್ತು ಮಳವಳ್ಳಿ ತಾಲ್ಲೂಕಿನ ಕೊನೆಯ ಭಾಗದ ಕೆರೆಗಳಿಗೆ ನೀರು ತುಂಬಿಸಲು ನೀರು ಅಚ್ಚುಕಟ್ಟು ಪ್ರದೇಶಕ್ಕೆ ಹೋಗಿ ನಂತರ ಹೋಗಬೇಕು ಎಂದಿದ್ದರೆ ಅಥವಾ ಬೇರೆ ತೊಂದರೆಯಿದ್ದಲ್ಲಿ, ಆಯಾ ತಾಲ್ಲೂಕಿನ ಶಾಸಕರನ್ನು ಭೇಟಿ ಮಾಡಿ ತೊಂದರೆಗಳನ್ನು ವಿವರಿಸಬೇಕು ಎಂದರು.

ಬಲಮುರಿ ಭಾಗದಲ್ಲಿ ತೆಪ್ಪ ನಡೆಸುತ್ತಿದ್ದು, ಪರವಾನಗಿ ಪಡೆದು ನಡೆಸಬೇಕು ಹಾಗೂ ಮಳೆ ಹೆಚ್ಚಾದ ಸಂದರ್ಭದಲ್ಲಿ ಮುನ್ನಚ್ಚರಿಕಾ ಕ್ರಮವಾಗಿ ತೆಪ್ಪ ನಡೆಸುವುದನ್ನು ನಿಲ್ಲಿಸಬೇಕು. ಈ ಬಗ್ಗೆ ಹೆಚ್ಚಿನ ನಿಗಾ ವಹಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಪೂರ್ವ ಮುಂಗಾರು ಸಂದರ್ಭದಲ್ಲಿ ಶೇ 75 ಕ್ಕಿಂತ ಹೆಚ್ಚಿನ ಹಾನಿ ಉಂಟಾಗಿರುವ 4 ಮನೆಗಳಿದ್ದು, ಇವರಿಗೆ 1,20,000 ಪರಿಹಾರ ನೀಡುವುದರ ಜೊತೆಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಅವರಿಗೆ ವಸತಿ ಕಲ್ಪಿಸಲು ಕ್ರಮ ವಹಿಸಬೇಕು ಎಂದರು.

ಮಂಡ್ಯ ಜಿಲ್ಲೆಯಲ್ಲಿ 32899 ಹೆಕ್ಟೇರ್ ಡೀಮಡ್ ಅರಣ್ಯ ಪ್ರದೇಶವಿದ್ದು, ಈ ಪ್ರದೇಶವನ್ನು ಕಂದಾಯ ಹಾಗೂ ಅರಣ್ಯ ಇಲಾಖೆಯಿಂದ 1.5 ತಿಂಗಳ ಅವಧಿಯಲ್ಲಿ ಸಮೀಕ್ಷೆ ನಡೆಸಿ ನ್ಯಾಯಾಲಯಕ್ಕೆ ವರದಿ ನೀಡಬೇಕಿರುತ್ತದೆ. ಇದನ್ನು ನಿಖರವಾಗಿ ಸಮೀಕ್ಷೆ ನಡೆಸಿ ವರದಿ ನೀಡಿ ಎಂದರು.

ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ವಮೆಯ ಉಪಯುಕ್ತತೆಯ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಬೇಕು‌ ಬೆಳೆ ವಿಮೆ ಮೊತ್ತದಲ್ಲಿ ರೈತರು ಕೇವಲ ಶೇ 2 ರಷ್ಟು ಮಾತ್ರ ಪಾವತಿ ಮಾಡಲಾಗುತ್ತಿದ್ದು, ಅನಾವೃಷ್ಠಿ ಹಾಗೂ ಅತಿವೃಷ್ಠಿಯ ಸಂದರ್ಭದಲ್ಲಿ ಹೆಚ್ಚು ಸಹಾಯವಾಗಲಿದೆ ಎಂದರು.

ಜಿಲ್ಲೆಯಲ್ಲಿ ರಸಗೊಬ್ಬರದ ಕೊರತೆ ಇಲ್ಲ. ಆದರೆ ಕೃತಕ ಅಭಾವ ಸೃಷ್ಠಿಸುವ ಸಾಧ್ಯತೆ ಇರುತ್ತದೆ. ರಸಗೊಬ್ಬರ ಮಾರಾಟ ಸೊಸೈಟಿ ಹಾಗೂ ಡೀಲರ್ಸ್ ಗಳು ದಾಸ್ತಾನು ವಿವರಗಳ ಬಗ್ಗೆ ಪಲಕ ಅನಾವರಣಗೊಳಿಸಬೇಕು. ಯಾವುದೇ ಅಕ್ರಮ ದಾಸ್ತಾನು ಕಂಡುಬಂದಲ್ಲಿ ದಾಳಿ ನಡೆಸಿ ಎಂದು ನಿರ್ದೇಶನ ನೀಡಿದರು.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು ಮಾತನಾಡಿ ಎಲಿಯೂರು ಹಾಗೂ ತೂಬಿನಕೆರೆ ಬಳಿ ಸರ್ವಿಸ್ ರಸ್ತೆಯಲ್ಲಿ ಒಳಚರಂಡಿ ರಸ್ತೆ ಕಾಮಗಾರಿ ಬೇಗ ಪೂರ್ಣಗೊಳಿಸಬೇಕು. ಬೆಂಗಳೂರು- ಮೈಸೂರು ಹೆದ್ದಾರಿಗೆ ಹೊಂದಿಕೊಂಡಿರುವ ಸರ್ವಿಸ್ ರಸ್ತೆಗಳಲ್ಲಿ ಸಿ.ಸಿಟಿ.ವಿ ಅಳವಡಿಸಬೇಕು ಎಂದರು‌.

ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ಮಾತನಾಡಿ ಮಳವಳ್ಳಿ ತಾಲ್ಲೂಕಿನಲ್ಲಿ ಅಕ್ರಮವಾಗಿ ಭೂಮಿ ಪಡೆದಿರುವ ಹಾಗೂ ಮಾಡಿಕೊಟ್ಟಿರುವವರ ವಿರುದ್ಧ ಕ್ರಮ ರೀತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಿಗೆ ತಿಂಗಳ ಅಂತ್ಯದಲ್ಲಿ ಆಹಾರ ಸಾಮಗ್ರಿ ವಿತರಣೆಯಾಗುತ್ತಿದ್ದು, ಇದರಿಂದ ತೊಂದರೆಯಾಗುತ್ತದೆ. ತಿಂಗಳ 5 ತಾರೀಖಿನೊಳಗೆ ಸರಬರಾಜು ಆಗಬೇಕು. ಟೆಂಡರ್ ದಾರರು ಸರಿಯಾದ ಸಮಯಕ್ಕೆ ಸರಬರಾಜುರಾಜು ಮಾಡದಿದ್ದಲ್ಲಿ ಕಪ್ಪುಪಟ್ಟಿಗೆ ಸೇರಿಸಿ ಎಂದರು‌

ಗ್ಯಾರಂಟಿ ಯೋಜನೆಯ ರಾಜ್ಯಾದ್ಯಕ್ಷರಾದ ಹೆಚ್.ಎಂ.ರೇವಣ್ಣ ಅವರು ಮಾತನಾಡಿ ಗೃಹ ಲಕ್ಷ್ಮಿ ಯೋಜನೆಯಡಿ ರಾಜ್ಯದಲ್ಲಿ 120000 ಮಹಿಳೆಯರು ಜಿ.ಎಸ್.ಟಿ ಪಾವತಿದಾರರು ಎಂದು ಗೃಹ ಲಕ್ಷ್ಮಿ ಹಣವನ್ನು ತಡೆಹಿಡಿಯಲಾಗಿತ್ತು, ಈ ಕುರಿತಂತೆ ಸಭೆ ನಡೆಸಿ ದಾಖಲೆ ಪರಿಶೀಲಿಸಿ 59000 ಮಹಿಳೆಯರು ಜಿ.ಎಸ್.ಟಿ ಪಾವತಿದಾರಲ್ಲ ಎಂದು ತೀರ್ಮಾನಿಸಿ ಅವರಿಗೆ ಗೃಹ ಲಕ್ಷ್ಮಿ ಹಣ ಪಾವತಿಸಲು ಕ್ರಮ ವಹಿಸಲಾಗಿದೆ. ಇನ್ನುಳಿದ ಅರ್ಜಿಗಳನ್ನು ಸದ್ಯದಲ್ಲೇ ಪರಿಶೀಲಿಸಲಾಗುವುದು ಎಂದರು.

ಪಡಿತರ ಅಂಗಡಿಗಳ ಮುಂದೆ ಪಡಿತರ ನೀಡುವ ಆಹಾರ ಪದಾರ್ಥಗಳ ವಿವರ, ಅಂಗಡಿ ತೆರೆಯುವ ಸಮಯದ ಪಲಕ ಅನಾವರಣಗೊಳಿಸಿರುವುದನ್ನು ಖಾತ್ರಿ ಪಡಿಸಿಕೊಳ್ಳಿ. ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸಮಯಕ್ಕೆ ಸರಿಯಾಗಿ ಬಸ್ ಒದಗಿಸಬೇಕು. ಬೇಡಿಕೆ ಇರುವ ಹೊಸ ಬಸ್ ಗಳ ಪ್ರಸ್ತಾವನೆ ಸಲ್ಲಿಸಬೇಕು ಎಂದರು.

ಜಿಲ್ಲಾಧಿಕಾರಿ ಡಾ: ಕುಮಾರ ಅವರು ಮಾತನಾಡಿ ಜಿಲ್ಲೆಯಲ್ಲಿ ಮಳೆ, ಬಿತ್ತನೆ, ಮುಂಗಾರು ಹಾಗೂ ಬೇಸಿಗೆ ಬೆಳೆಗೆ ಬೇಕಿರುವ ನೀರು, ಪೌತಿ ಖಾತೆ, ಆಧಾರ್ ಸೀಡಿಂಗ್, ನ್ಯಾಯಾಲಯ ಪ್ರಕರಣಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ವಿವರಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ‌ಕೆ.ಆರ್. ನಂದಿನಿ‌ ಅವರು‌ ಮಾತನಾಡಿ ಜಲ್ ಜೀವನ್ ಮಿಷನ್, ನರೇಗಾ, ಸ್ವಚ್ಛ ಭಾರತ್ ಮಿಷನ್, ಎನ್.ಆರ್.ಎಲ್.ಎಂ ಸೇರಿದಂತೆ ವಿವಿಧ ವಿಷಯಗಳ ಕುರಿತು ವಿವರಿಸಿದರು.

ಸಭೆಯಲ್ಲಿ ವಿಧಾನಸಭಾ ಶಾಸಕರಾದ ಹೆಚ್.ಟಿ ಮಂಜು, ದರ್ಶನ್ ಪುಟ್ಟಣ್ಣಯ್ಯ, ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಮುಡಾ ಅಧ್ಯಕ್ಷ ನಯೀಮ್, , ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಮೈಸೂರು ವಿಭಾಗದ ಉಪಾಧ್ಯಕ್ಷೆ ಪುಷ್ಪ ಅಮರ್ ನಾಥ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದ ಮೂರ್ತಿ, ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

1 hour ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

2 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

2 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

2 hours ago

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಗೆಹಲೋತ್‌ ನಿರಾಕರಣೆ

ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…

2 hours ago

ಯುವಕರೇ, ನಿಯಮ ಪಾಲಿಸಿ ಜೀವ ಉಳಿಸಿ : ಎಸ್‌ಪಿ ಶೋಭಾರಾಣಿ ಮನವಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…

3 hours ago