ಮಂಡ್ಯ: ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ನಾಗಮಂಗಲದಲ್ಲಿ ನಡೆದ ಕೋಮುಗಲಭೆ ಸಂಬಂಧ ಸುಳ್ಳು ಮಾಹಿತಿ ಹಂಚಿಕೆ ಮಾಡಿದ್ದಾರೆ ಎಂಬ ಆರೋಪದಡಿ ನಾಗಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ನಾಗಮಂಗಲ ಘಟನೆಗೆ ಸಂಬಂಧಿಸಿದ ವಿಡಿಯೋ ಹಾಗೂ ಫೋಟೋ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ದೊಂಬಿ ಗಲಭೆಗೆ ಪ್ರಚೋದನೆ ಆರೋಪದಡಿ ಎಫ್‌ಐಆರ್ ದಾಖಲಿಸಲಾಗಿದೆ.
ಕಲ್ಲು ತೂರಿ, ಬೆಂಕಿ ಹಚ್ಚಿದವರನ್ನು ರಕ್ಷಿಸಿ ಗಣೇಶನನ್ನು ಬಂಧಿಸಲಾಗಿದೆ ಎಂದು ಶೋಭಾ ಕರಂದ್ಲಾಜೆ ಪೋಸ್ಟ್ ಮಾಡಿದ್ದರು. ಬೆಂಗಳೂರಿನಲ್ಲಿ ನಡೆದ ಘಟನೆಯ ಚಿತ್ರವನ್ನು ನಾಗಮಂಗಲದಲ್ಲಿ ನಡೆದ ಘಟನೆ ಎಂದು ಪೋಸ್ಟ್ ಮಾಡಿದ್ದರು.
ಇನ್ನು ಆರ್.ಅಶೋಕ್ ಅವರು ಘಟನೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ ಎಂದು ಪೋಸ್ಟ್ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ನಾಗಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.