ಕೆ.ಆರ್.ಪೇಟೆ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದು ಹೊತ್ತಿ ಉರಿದಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಹೊಸಹೊಳಲು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕಾಳಮ್ಮನ ಬೀದಿಯಲ್ಲಿ ವಾಸಿಸುತ್ತಿರುವ ಮಹೇಶ್ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಮನೆಯು ಸಂಪೂರ್ಣ ಸುಟ್ಟು ಹೋಗಿದ್ದು, ಮನೆಯ ಮೇಲ್ಛಾವಣಿ ಹಾಗೂ ಮನೆಯಲ್ಲಿದ್ದ ದಿನಬಳಕೆಯ ವಸ್ತುಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿವೆ. ಇದರಿಂದ ಲಕ್ಷಾಂತರ ರೂ ನಷ್ಟ ಉಂಟಾಗಿದೆ. ಬೆಂಕಿ ಅವಘಡ ಸಂಭವಿಸಿದ ವೇಳೆ ಅಕ್ಕಪಕ್ಕದಲ್ಲಿದ್ದ ಸಾರ್ವಜನಿಕರ ಸ್ಥಳಕ್ಕೆ ಧಾವಿಸಿ ನೀರು ಸುರಿದು ಹೆಚ್ಚಿನ ಅನಾಹುತ ಆಗುವುದನ್ನು ತಪ್ಪಿಸಿದ್ದಾರೆ.





