ನಾಗಮಂಗಲ: ತಾಲೂಕಿನ ಸಾತೇನಹಳ್ಳಿ ಗ್ರಾಮದ ಪ್ರಗತಿಪರ ರೈತ ಕುಮಾರಸ್ವಾಮಿ ಅವರ ತೋಟಕ್ಕೆ ಶನಿವಾರ ದುಷ್ಕರ್ಮಿಗಳು ಬೆಂಕಿ ಹಾಕಿದ ಪರಿಣಾಮ ಸಾವಿರಾರೂ ಗಿಡಗಳು ಹಾಗೂ ಲಕ್ಷಾಂತರ ರೂ ಮೌಲ್ಯದ ಹನಿ ನೀರಾವರಿ ಪೈಪ್‌ಗಳು ನಾಶವಾಗಿದೆ.
ಗ್ರಾಮದಿಂದ ಸುಮಾರು ಒಂದು ಕಿ.ಮೀ ದೂರದಲ್ಲಿ ಕುಮಾರಸ್ವಾಮಿ ಅವರ ಜಮೀನಿದೆ. ಒಂದು ಮುಕ್ಕಾಲು ಎಕರೆ ಭೂಮಿಯಲ್ಲಿ 100 ತೆಂಗಿನ ಮರಗಳಿವೆ. ಈ ಪೈಕಿ 25 ರಿಂದ 30 ಮರ ಐವತ್ತೂ ಹೆಚ್ಚು ವರ್ಷವಾಗಿದೆ. ಇದಲ್ಲದೆ ಒಂದು ಸಾವಿರ ಬಾಳೆ ಗಿಡ ಹಾಗೂ 200 ಅಡಿಕೆ ಮರಗಳು ಬೆಳೆಯುತ್ತಿದ್ದವು. ಬೇಸಾಯಕ್ಕೆಂದು ಅಂದಾಜು ಎರಡೂವರೆ ಲಕ್ಷ ರೂ ಖರ್ಚು ಮಾಡಿ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡಿದ್ದರು.
ಬರಗಾಲದ ನಡುವೆಯೂ ಬೋರ್‌ವೆಲ್‌ನಲ್ಲಿ ನೀರಿನ ಕೊರತೆ ಇರಲಿಲ್ಲ. ಪ್ರತಿದಿನ ಹನಿ ನೀರಾವರಿ ಪದ್ಧತಿ ಮೂಲಕ ನೀರು ಹಾಯಿಸುತ್ತಿದ್ದರು. ಗಿಡ ಮತ್ತು ಮರಗಳು ಕೂಡ ಚೆನ್ನಾಗಿ ಬೆಳೆಯುತ್ತಿದ್ದವು. ವಿಶೇಷವೆಂದರೆ ಇವರು ಜಮೀನಿನ ಉಳುಮೆ ಮಾಡುವ ಬದಲು ಕಳೆ ಸಹಿತ ಗಿಡಗಳನ್ನು ಭೂಮಿಯಲ್ಲಿಯೇ ಕೊಳೆಸಿ ಗೊಬ್ಬರ ಮಾಡುತ್ತಿದ್ದರು. ಶನಿವಾರ ಮಧ್ಯಾಹ್ನ ಯಾರೋ ದುಷ್ಕರ್ಮಿಗಳು ತೋಟಕ್ಕೆ ಬೆಂಕಿ ಹಾಕಿದ್ದಾರೆ. ಪರಿಣಾಮ ಕೆಲವೊತ್ತಿನಲ್ಲಿಯೇ ಬೆಂಕಿಯ ಕೆನ್ನಾಲಗೆ ತೋಟವನ್ನು ಆವರಿಸಿಕೊಂಡು ಗಿಡ, ಮರ ಹಾಗೂ ಪೈಪ್‌ಗಳು ಸುಟ್ಟು ಹೋಗಿವೆ.
ಸಂಜೆ ವೇಳೆಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಕುಮಾರಸ್ವಾಮಿ ಸ್ಥಳಕ್ಕೆ ಹೋಗಿದ್ದಾರೆ. ಅಷ್ಟರಲ್ಲಾಗಲೇ ಎಲ್ಲವೂ ನಾಶವಾಗಿತ್ತು.
ಕೃಷಿಯಲ್ಲಿ ಹೊಸ ವಿಧಾನ ಅಳವಡಿಸಿಕೊಂಡು ಮಾದರಿಯಾಗಿದ್ದ ಕುಮಾರಸ್ವಾಮಿ ಅವರು ಜಿಲ್ಲೆ ಮಾತ್ರವಲ್ಲದೆ ಹೊರ ಜಿಲ್ಲೆಗೆ ತೆರಳಿ ರೈತರಿಗೆ ಸಲಹೆ ನೀಡುತ್ತಿದ್ದರು. ತಮ್ಮ ಜಮೀನಿಗೆ ಬಂದವರಿಗೂ ಅಗತ್ಯ ಮಾಹಿತಿ ಕೊಡುತ್ತಿದ್ದರು. ನೆಮ್ಮದಿ ಜೀವನ ಕಟ್ಟಿಕೊಂಡಿರುವ ಕುಮಾರಸ್ವಾಮಿ ಕುಟುಂಬಕ್ಕೆ ಬೆಂಕಿ ಅವಘಡ ದಿಕ್ಕು ತೋಚದಂತಾಗಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…