ಮಂಡ್ಯ

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು ಕರಕಲಾದ ಘಟನೆ ಹಲಗೂರಿನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

ಹಲಗೂರು ಕೆರೆ ಕೋಡಿ ಅಂಚಿನಲ್ಲಿರುವ ಪಟ್ಟಲದಮ್ಮ ದೇವಸ್ಥಾನದ ಹಿಂಭಾಗದ ಭೂ ಪ್ರದೇಶಕ್ಕೆ ಬೆಂಕಿ ತಗುಲಿದ್ದು, ಅಪಾರ ಪ್ರಮಾಣದ ಮರ ಗಿಡಗಳು ಮತ್ತು ಸಮೀಪದ ಜಮೀನಿನಲ್ಲಿ ಬೆಳೆದಿದ್ದ ಸೌತೆಕಾಯಿ ಬೆಳೆ ಬೆಂಕಿಗೆ ಆಹುತಿಯಾಗಿವೆ. ಕಸದ ರಾಶಿಗೆ ಬೆಂಕಿ ಹಚ್ಚಿದ ಪರಿಣಾಮ ಬೆಂಕಿ ನಿಯಂತ್ರಣ ತಪ್ಪಿ ವ್ಯಾಪಕವಾಗಿ ಹರಡಿದೆ. ನಂತರ ವಾಸು ಬಾರ್ ಹಿಂಭಾಗದ ಭೀಮಾ ನದಿ ಬಫರ್ ಜೋನ್ ಹಾಗೂ ಚೌಕಿ ಮಠದವರೆಗೆ ಹರಡಿಕೊಂಡಿದ್ದ ಬೆಂಕಿಯನ್ನು ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾದರು.

ಹಲಗೂರು ಬೃಹದಾಕಾರವಾಗಿ ಬೆಳೆಯುತ್ತಿದ್ದು, ಅಗ್ನಿ ಅವಘಡಗಳು ಸಂಭವಿಸಿದರೆ ಮಳವಳ್ಳಿ ಪಟ್ಟಣದಿಂದ ಅಗ್ನಿ ಶಾಮಕ ವಾಹನಗಳು ಅವಘಡ ಸ್ಥಳಕ್ಕೆ ಬರುವಷ್ಟರಲ್ಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿರುತ್ತದೆ. ಬಸವನಬೆಟ್ಟ, ಮುತ್ತತ್ತಿ ಅರಣ್ಯ ಪ್ರದೇಶಗಳಿದ್ದು ಹಲಗೂರಿನಲ್ಲಿ ಅಗ್ನಿ ಶಾಮಕ ಠಾಣೆ ತೆರೆಯಲು ಸರ್ಕಾರ ಕ್ರಮವಹಿಸಬೇಕು ಎಂದು ಮುಖಂಡರಾದ ಬಾಳೆಹೊನ್ನಿಗ ಕುಮಾರ್ ಆಗ್ರಹಿಸಿದರು.

ಬೇಸಿಗೆ ಆರಂಭಲ್ಲಿದ್ದು, ಒಣಗಿದ ಗಿಡ-ಗಂಟಿಗಳು ಮತ್ತು ತರಗೆಲೆಗಳಿಗೆ ಬೆಂಕಿ ತಗುಲಿದರೆ ವೇಗವಾಗಿ ಹರಡುವ ಸಾಧ್ಯತೆ ಇದೆ. ಈ ರೀತಿ ಬೆಂಕಿ ಹಚ್ಚುವುದು ಭಾರೀ ನಷ್ಟಕ್ಕೆ ಕಾರಣವಾಗುತ್ತದೆ. ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ಅಗ್ನಿಶಾಮಕ ಠಾಣಾಧಿಕಾರಿ ಹೇಮಂತ್ ಕುಮಾರ್ ತಿಳಿಸಿದರು.

ಕಾರ್ಯಾಚರಣೆಯಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿ ಸಿದ್ದರಾಮಯ್ಯ, ಮೋಹನ್ ಕುಮಾರ್, ಗಗನ್ ಪಾಲ್ಗೊಂಡಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

12 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

12 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

12 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

12 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

12 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

14 hours ago