ಮಂಡ್ಯ : ಅತ್ತಿಬೆಲೆ ಪಟಾಕಿ ಗೋಡೌನ್ ಅಗ್ನಿ ದುರಂತ ಮಾಸುವ ಮುನ್ನವೇ ಇತ್ತ ಮಂಡ್ಯದಲ್ಲೂ ಅಗ್ನಿ ಅವಘಡ ಘಟನೆ ವರದಿಯಾಗಿದ್ದು, ಮಂಡ್ಯದ ಮನ್ ಮುಲ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಇತ್ತೀಚೆಗೆ ಆರಂಭಗೊಂಡಿದ್ದ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿರುವ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ (ಮನ್ ಮುಲ್) ದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಮನ್ಮುಲ್ನ ಪ್ಯಾಕಿಂಗ್ ಸೆಕ್ಷನ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡು ಆತಂಕ ಸೃಷ್ಟಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಬೆಂಕಿ ಹತ್ತಿರುವ ಕಟ್ಟಡದಲ್ಲಿ ಮಾರ್ನಿಂಗ್ ಶಿಫ್ಟ್ನಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಹೊರಕ್ಕೆ ಓಡಿಬಂದಿದ್ದಾರೆ. ಅದೃಷ್ಟವಶಾತ್ ಯಾವುದೆ ಪ್ರಣಾಪಾಯ ಸಂಭವಿಸಿಲ್ಲ. ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
ಕೇಂದ್ರ ಸಚಿವ ಅಮಿತ್ ಶಾ ಕಳೆದ ವರ್ಷ ಮೆಗಾ ಡೈರಿ ಕಟ್ಟಡಕ್ಕೆ ಚಾಲನೆ ನೀಡಿದ್ದರು. ಇದೀಗ ಬೆಂಕಿ ಅವಘಡದಿಂದ ಬಾರಿ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ.





