ಮಂಡ್ಯ

ಮಂಡ್ಯದ ಮನ್ ಮುಲ್​​ನಲ್ಲಿ ಬೆಂಕಿ ಅವಘಡ: ತಪ್ಪಿದ ಪ್ರಾಣಹಾನಿ

ಮಂಡ್ಯ : ಅತ್ತಿಬೆಲೆ ಪಟಾಕಿ ಗೋಡೌನ್ ಅಗ್ನಿ ದುರಂತ ಮಾಸುವ ಮುನ್ನವೇ ಇತ್ತ ಮಂಡ್ಯದಲ್ಲೂ ಅಗ್ನಿ ಅವಘಡ ಘಟನೆ ವರದಿಯಾಗಿದ್ದು, ಮಂಡ್ಯದ ಮನ್ ಮುಲ್​​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಇತ್ತೀಚೆಗೆ ಆರಂಭಗೊಂಡಿದ್ದ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿರುವ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ (ಮನ್​ ಮುಲ್) ದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಮನ್​ಮುಲ್​​ನ ಪ್ಯಾಕಿಂಗ್​ ಸೆಕ್ಷನ್​ನಲ್ಲಿ ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡು ಆತಂಕ ಸೃಷ್ಟಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಬೆಂಕಿ ಹತ್ತಿರುವ ಕಟ್ಟಡದಲ್ಲಿ ಮಾರ್ನಿಂಗ್ ಶಿಫ್ಟ್​​ನಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಹೊರಕ್ಕೆ ಓಡಿಬಂದಿದ್ದಾರೆ. ಅದೃಷ್ಟವಶಾತ್​ ಯಾವುದೆ ಪ್ರಣಾಪಾಯ ಸಂಭವಿಸಿಲ್ಲ. ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

ಕೇಂದ್ರ ಸಚಿವ ಅಮಿತ್ ಶಾ ಕಳೆದ ವರ್ಷ ಮೆಗಾ ಡೈರಿ ಕಟ್ಟಡಕ್ಕೆ ಚಾಲನೆ ನೀಡಿದ್ದರು. ಇದೀಗ ಬೆಂಕಿ ಅವಘಡದಿಂದ ಬಾರಿ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ.

https://x.com/ANI/status/1710890196668211484?s=20

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

11 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

12 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

12 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

12 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

12 hours ago