Mysore
15
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಮಂಡ್ಯದಲ್ಲಿ ಮೊದಲ ಕೊರೊನಾ ಸೋಂಕು ಪತ್ತೆ

ಮಂಡ್ಯ: ಮಾರಕ ಕೊರೊನಾ ಸೋಂಕು ಮದ್ದೂರು ಪಟ್ಟಣದ ವ್ಯಕ್ತಿಯೊಬ್ಬರಲ್ಲಿ ಪತ್ತೆಯಾಗಿದ್ದು, ಸೋಂಕಿತನನ್ನು ಮುನ್ನೆಚ್ಚರಿಕೆಯಾಗಿ ಹೋಂ ಕ್ವಾರಂಟೈನ್ ಮಾಡಲಾಗಿದೆ.

ಜ್ವರ, ಉಸಿರಾಟದ ತೊಂದರೆ, ಮಲಬದ್ಧತೆ, ಹೊಟ್ಟೆನೋವು ಹಿನ್ನೆಲೆಯಲ್ಲಿ ಡಿ.೧೨ರಂದು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಗೆ ದಾಖಲಾಗಿದ್ದರು. ೧೩ರಂದು ಈತನ ಗಂಟಲ ದ್ರವ ಸಂಗ್ರಹಿಸಲಾಗಿತ್ತು. ೧೪ರಂದು ರ್ಯಾಪಿಡ್‌ ಟೆಸ್ಟ್ ಮಾಡಿಸಲಾಗಿತ್ತು. ಅದರಂತೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಮಿಮ್ಸ್ನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಇವರ ಕುಟುಂಬದ ನಾಲ್ವರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ಎಲ್ಲರಿಗೂ ನೆಗೆಟಿವ್ ಬಂದಿದೆ.

ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ರೂಪಾಂತರ ತಳಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಹೈ-ಅಲರ್ಟ್ ಮಾಡಲಾಗಿದೆ. ಅದರಂತೆ ಜಿಲ್ಲೆಯಲ್ಲಿಯೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಮಿಮ್ಸ್ ಸೇರಿದಂತೆ ತಾಲ್ಲೂಕು ಆಸ್ಪತ್ರೆಯಲ್ಲಿ ಐಸಿಯು ಬೆಡ್ ವ್ಯವಸ್ಥೆ, ಆಕ್ಸಿಜನ್ ಫ್ಲಾಂಟ್‌ಗಳನ್ನು ಪರಿಶೀಲಿಸಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!