ಮಂಡ್ಯ: ಮಾರಕ ಕೊರೊನಾ ಸೋಂಕು ಮದ್ದೂರು ಪಟ್ಟಣದ ವ್ಯಕ್ತಿಯೊಬ್ಬರಲ್ಲಿ ಪತ್ತೆಯಾಗಿದ್ದು, ಸೋಂಕಿತನನ್ನು ಮುನ್ನೆಚ್ಚರಿಕೆಯಾಗಿ ಹೋಂ ಕ್ವಾರಂಟೈನ್ ಮಾಡಲಾಗಿದೆ.
ಜ್ವರ, ಉಸಿರಾಟದ ತೊಂದರೆ, ಮಲಬದ್ಧತೆ, ಹೊಟ್ಟೆನೋವು ಹಿನ್ನೆಲೆಯಲ್ಲಿ ಡಿ.೧೨ರಂದು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಗೆ ದಾಖಲಾಗಿದ್ದರು. ೧೩ರಂದು ಈತನ ಗಂಟಲ ದ್ರವ ಸಂಗ್ರಹಿಸಲಾಗಿತ್ತು. ೧೪ರಂದು ರ್ಯಾಪಿಡ್ ಟೆಸ್ಟ್ ಮಾಡಿಸಲಾಗಿತ್ತು. ಅದರಂತೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಮಿಮ್ಸ್ನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಇವರ ಕುಟುಂಬದ ನಾಲ್ವರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ಎಲ್ಲರಿಗೂ ನೆಗೆಟಿವ್ ಬಂದಿದೆ.
ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ರೂಪಾಂತರ ತಳಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಹೈ-ಅಲರ್ಟ್ ಮಾಡಲಾಗಿದೆ. ಅದರಂತೆ ಜಿಲ್ಲೆಯಲ್ಲಿಯೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಮಿಮ್ಸ್ ಸೇರಿದಂತೆ ತಾಲ್ಲೂಕು ಆಸ್ಪತ್ರೆಯಲ್ಲಿ ಐಸಿಯು ಬೆಡ್ ವ್ಯವಸ್ಥೆ, ಆಕ್ಸಿಜನ್ ಫ್ಲಾಂಟ್‌ಗಳನ್ನು ಪರಿಶೀಲಿಸಲಾಗಿದೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…