ಮಂಡ್ಯ

ಮಂಡ್ಯ ಜಿಲ್ಲೆಯಲ್ಲಿ ಮೊದಲ ಸೋಂಕು ಪತ್ತೆ

ಮಂಡ್ಯ: ೭೦ ವರ್ಷದ ವೃದ್ದೆಯೋರ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮೂರು ವರ್ಷದ ಬಳಿಕ ಜಿಲ್ಲೆಯಲ್ಲಿ ಮೊದಲ ಕೋವಿಡ್-೧೯ ಪ್ರಕರಣ ಇದಾಗಿದೆ.

ಶ್ರೀರಂಗಪಟ್ಟಣ ತಾಲೂಕಿನ ವೃದ್ದೆಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು, ಕೆಮ್ಮು, ಜ್ವರ ಮತ್ತು ಶೀತ ಹಿನ್ನೆಲೆಯಲ್ಲಿ ಚಿ‌ಕಿತ್ಸೆಗೆಂದು ಶುಕ್ರವಾರ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಯಲ್ಲಿ ದಾಖಲಾಗಿದ್ದರು. ಸೋಂಕಿನ ಗುಣಲಕ್ಷಣ ಕಂಡುಬಂದ ಕಾರಣ ಗಂಟಲಿನ ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೊಳಪಡಿಸಿದಾಗ ಸೋಂಕು ತಗುಲಿರುವುದು ಖಚಿತವಾಗಿದೆ.

ವೃದ್ದೆಯನ್ನು ಮಿಮ್ಸ್‌ನಲ್ಲಿ ತೆರೆದಿರುವ ಪ್ರತ್ಯೇಕ ಕೊಠಡಿಯಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ‌. ಆದರೆ ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ. ಮೋಹನ್ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

57 mins ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

1 hour ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

1 hour ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

1 hour ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

1 hour ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

1 hour ago