ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಸಾವಿನ ನರ್ತನದ ನಡುವೆಯೇ ಝೀಕಾ ವೈರಸ್ ಕಾಟ ಶುರುವಾಗಿದ್ದು, ಇಂದು ಮೊದಲ ಸಾವಾಗಿದೆ.
ಶಿವಮೊಗ್ಗದಲ್ಲಿ 74 ವರ್ಷದ ವೃದ್ಧರೋರ್ವರು ಝೀಕಾ ವೈರಸ್ ಗುಣಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಬಳಿಕ ವೃದ್ಧನನ್ನು ಮನೆಗೆ ಕಳುಹಿಸಲಾಗಿತ್ತು.
ಶಿವಮೊಗ್ಗದ ವ್ಯಕ್ತಿ ಕಳೆದ ಜುಲೈ.5 ರಂದೇ ಸಾವನ್ನಪ್ಪಿದ್ದರು. ಝೀಕಾ ವೈರಸ್‌ಗೆ ಸಾವನ್ನಪ್ಪಿದ ಶಂಕೆ ವ್ಯಕ್ತಪಡಿಸಿದ್ದ ಆರೋಗ್ಯ ಇಲಾಖೆ ಸ್ಯಾಂಪಲ್ ಕಲೆ ಹಾಕಿತ್ತು. ಝೀಕಾ ವೈರಸ್‌ನಿಂದಲೇ ಸಾವನ್ನಪ್ಪಿರುವುದು ವರದಿಯಲ್ಲಿ ಪತ್ತೆಯಾಗಿದೆ.
ಶಿವಮೊಗ್ಗ ಗಾಂಧಿ ನಗರದ 74 ವರ್ಷದ ವೃದ್ಧ ಕಳೆದ ಜೂನ್ 19 ರಂದು ತೀವರ ಜ್ವರದಿಂದ ಬಳಲುತ್ತಿದ್ದರು. ಜೂನ್.21ರಂದು ಝೀಕಾ ವೈರಸ್ ಪತ್ತೆ ಆಗಿತ್ತು. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ವೃದ್ಧನಿಗೆ ಚಿಕಿತ್ಸೆ ನೀಡಲಾಗಿತ್ತು. ಕುಟುಂಬಸ್ಥರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಮನೆಗೆ ಕರೆದುಕೊಂಡು ಹೋಗಿದ್ದರು. ಜ್ವರ ಮಾತ್ರವಲ್ಲದೇ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ವೃದ್ಧ ಝೀಕಾ ವೈರಸ್‌ಗೆ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದಾರೆ.
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…