ಮಂಡ್ಯ

ಶೀಘ್ರದಲ್ಲೇ ಜಿಲ್ಲೆಯಲ್ಲಿ ಸರ್ಕಾರಿ ಗೋಶಾಲೆ ಪ್ರಾರಂಭ: ಡಾ: ಕುಮಾರ

ಮಂಡ್ಯ:  ಮದ್ದೂರು ತಾಲ್ಲೂಕಿನ ಅತಗೂರು ಹೋಬಳಿಯ ಹೂತಗೆರೆ ಗ್ರಾಮದಲ್ಲಿ 50 ಲಕ್ಷ ರೂ ವೆಚ್ಚದಲ್ಲಿ ಮೊದಲ ಸರ್ಕಾರಿ ಗೋಶಾಲೆಯನ್ನು ನಿರ್ಮಾಣವಾಗಿದ್ದು, ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಾಣಿ ದಯಾ ಸಂಘ ಸಮಿತಿಯ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗೋಶಾಲೆ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಉದ್ಘಾಟನೆಗೆ ಸಿದ್ಧತೆ ಮಾಡಿಕೊಳ್ಳಿ , ಪ್ರಾಣಿಗಳಿಗೆ ವಸತಿ, ಕುಡಿಯುವ ನೀರು, ಮೇವಿಗೆ ಯಾವುದೇ ತೊಂದರೆಯಾಗದಂತೆ ಸಿದ್ಧತೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಹೂತಗೆರೆ ಗ್ರಾಮದ ಗೋಶಾಲೆಯು 10 ಎಕರೆ ವಿಸ್ತೀರ್ಣದಲ್ಲಿದ್ದು, ಇದರ ಸುತ್ತ ಕಾಂಪೌಂಡ್ ಅಥವಾ ಬೇಲಿ ನಿರ್ಮಿಸಿ ಸ್ಥಳದ ರಕ್ಷಣೆ ಮಾಡಿಕೊಳ್ಳಬೇಕು ಇಲ್ಲಾವದಲ್ಲಿ ಒತ್ತುವರಿಯಾಗುವ ಸಾಧ್ಯತೆ ಹೆಚ್ಚು. ಗೋಶಾಲೆಯ ಸುತ್ತ ಕಾಂಪೌಂಡ್ ನಿರ್ಮಿಸಲು ಯೋಜನೆ ಸಿದ್ಧಪಡಿಸಿ ಎಂದರು.

ಜಿಲ್ಲೆಯಲ್ಲಿ ಬೀದಿ ನಾಯಿಗಳ ಹವಾಳಿ ಕಡಿಮೆಗೊಳಿಸಲು ಎ.ಬಿ.ಸಿ (Animal birth control) ಚಿಕಿತ್ಸೆಗಾಗಿ ಸ್ಥಳೀಯ ಸಂಸ್ಥೆಗಳು ಅನುದಾನ ಮೀಸಲಿಡಿ. ಪ್ರತ್ಯೇಕವಾಗಿ ಸ್ಥಳ ಗುರುತಿಸಿ ಬೀದಿ ನಾಯಿಗಳ ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಿ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಮಾತನಾಡಿ, ಬೇರೆ ದೇಶಗಳಿಗಿಂತ ಭಾರತ ದೇಶದಲ್ಲಿ ರೇಬೀಸ್ ರೋಗಿಗಳ ಸಂಖ್ಯೆ ಹೆಚ್ಚು ಇದಕ್ಕೆ ಮುಖ್ಯ ಕಾರಣ ಬೀದಿ ನಾಯಿಯ ಕಡಿತ. ಬೇರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಮಂಡ್ಯ ಜಿಲ್ಲೆಯಲ್ಲಿ ಬೀದಿ ನಾಯಿ ಕಡಿತಕ್ಕೆ ಒಳಗಾಗಿರುವವರ ಸಂಖ್ಯೆ ಹೆಚ್ಚು, ಈ ಹಿನ್ನಲೆಯಲ್ಲಿ ಎ.ಬಿ.ಸಿ ಚಿಕಿತ್ಸೆ ಕೆಲಸ ಚುರುಕುಗೊಳಿಸಿ ಎಂದರು.

ಖಾಸಗಿಯಾಗಿ ಕಾರ್ಯನಿರ್ವಹಿಸುವ ಗೋಶಾಲೆಗಳಿಗೆ ಪ್ರತಿ ಗೋವಿಗೆ ಪ್ರತಿದಿನಕ್ಕೆ ರೂ 17.30 /- ರಂತೆ ಸಹಾಯಧನ ನೀಡಲಾಗುವುದು. ಈ ಹಿನ್ನಲೆಯಲ್ಲಿ ಸಹಾಯಧನ ಕೋರಿ ಮನವಿ ಸಲ್ಲಿಸಿರುವ ಮಂಡ್ಯ ತಾಲ್ಲೂಕು ಸಾತನೂರಿನಲ್ಲಿರುವ ಶ್ರೀ ಅದಿಚುಂಚನಗಿರಿ ಗೋಶಾಲೆ- 159, ನಾಗಮಂಗಲ ತಾಲ್ಲೂಕಿನ ಅದಿಚುಂಚನಗಿರಿ ಗೋಶಾಲೆ- 100, ಪಾಂಡವಪುರ ತಾಲ್ಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿರುವ ಶ್ರೀ ಧ್ಯಾನ ಪೌಂಡೇಶನ್ ಗೋರಕ್ಷಾ ಟ್ರಸ್ಟ್ ನ ಚೈತ್ರ ಗೋಶಾಲೆ- 891, ಕೆರೆತೊಣ್ಣೂರು ಯತಿರಾಜ್ ಸೇವಾ ಟ್ರಸ್ಟ್- 116, ಮದ್ದೂರು ತಾಲ್ಲೂಕಿನ ಹರಕನಹಳ್ಳಿಯಲ್ಲಿರುವ ಕೃಷ್ಣ ಗೀರ್ ಗೋಶಾಲೆ ಟ್ರಸ್ಟ್- 128, ಹೊಸಗಾಮಿ ಗ್ರಾಮದ ಗಣೇಶ್ ದೇಶಿ ಗೋಶಾಲೆ ಟ್ರಸ್ಟ್ -202, ಕದಲೂರಿನಲ್ಲಿರುವ ನಿಧಿಗೌಡ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸೇವಾ ಟ್ರಸ್ಟ್- 53‌ ಹಾಗೂ ಮಂಡ್ಯ ತಾಲ್ಲೂಕಿನ ಕಾಮದೇನು ಗೋ ಸಂರಕ್ಷಣಾ ಟ್ರಸ್ಟ್- 22 ಸಹಾಯಧನ ಮಂಜೂರಾತಿ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ:ಸುರೇಶ್, ಮಂಡ್ಯ ನಗರಸಭೆ ಆಯುಕ್ತ ಮಂಜುಮಾಥ್ , ವಿವಿಧ ಗೋಶಾಲೆಯ ಮುಖ್ಯಸ್ಥರು ಉಪಸ್ಥಿತರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು| ಕಗ್ಗತ್ತಲ್ಲಿನಲ್ಲಿದ್ದ ಎರಡು ಬಡ ಕುಟುಂಬಗಳಿಗೆ ಆಸರೆಯಾದ ಪೇದೆ ಕುಮಾರಸ್ವಾಮಿ: ಸಾರ್ವಜನಿಕರಿಂದ ಮೆಚ್ಚುಗೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸ್ವಾತಂತ್ರ ಬಂದು 78 ವರ್ಷ ಪೂರ್ಣಗೊಂಡಿದ್ದರು ವಿದ್ಯುತ್ ಬೆಳಕು ನೋಡದೆ…

42 mins ago

ರಾಜ್ಯ ಬಜೆಟ್‌ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಟೀಕೆ

ಮಂಡ್ಯ: ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್‌ ಬಗ್ಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಈ ಕುರಿತು…

57 mins ago

ಗ್ರಾಹಕರಿಗೆ ಬಿಗ್‌ ಶಾಕ್:‌ ಎಲ್‌ಪಿಜಿ ಸಿಲಿಂಡರ್‌ ದರ ಏರಿಕೆ

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋ ಗ್ರಾಂ ತೂಕದ ಗೃಹ ಬಳಕೆಯ…

1 hour ago

ಬಜೆಟ್‌ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ: ಸ್ಪೀಕರ್‌ ಯು.ಟಿ.ಖಾದರ್‌ ಕರೆ

ಮಂಗಳೂರು: ಬಜೆಟ್‌ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಕರೆ ನೀಡಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ…

2 hours ago

ಹಾಸನ| ಒಂದೇ ವಾರದಲ್ಲಿ ಎರಡು ಚಿರತೆ ಸೆರೆ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ದಿಂಡಗೂರು ಗ್ರಾಮದಲ್ಲಿ ಕಳೆದ ಒಂದು ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಗ್ರಾಮಸ್ಥರು ನೆಮ್ಮದಿಯ…

3 hours ago

ಯುದ್ಧದ ನಡುವೆ ಇರಾನ್‌ನಲ್ಲಿ ಭೂಕಂಪ: 4.1 ತೀವ್ರತೆ ದಾಖಲು

ಟೆಹರಾನ್:‌ ಯುದ್ಧದ ನಡುವೆಯೇ ಇರಾನ್‌ನಲ್ಲಿ ಇಂದು ಭೂಕಂಪ ಸಂಭವಿಸಿದೆ. ಇರಾನ್‌ನ ಆಯಕಟ್ಟಿನ ಪ್ರದೇಶದವಾದ ಬಂದರ್‌ ಅಬ್ಬಾಸ್‌ ಸಮೀಪ ರಿಕ್ಟರ್‌ ಮಾಪಕದಲ್ಲಿ…

3 hours ago