ಮಂಡ್ಯ: ಸೆಪ್ಟೆಂಬರ್ 5 ರಂದು ನಗರ ಸಭೆ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡುವುದಾಗಿ ನಗರಸಭೆ ಅಧ್ಯಕ್ಷ ಎಂವಿ ಪ್ರಕಾಶ್ ತಿಳಿಸಿದರು.
ನಗರದ ಪರ್ತಕರ್ತರ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಂಡ್ಯ ನಗರದಲ್ಲಿ ಸ್ವಚ್ಛತೆ, ರಸ್ತೆ, ಆಟೋ ಶೆಟ್ಟರ್ , ಬಸ್ ಶೆಲ್ಟರ್ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡುವುದಾಗಿ ಭರವಸೆ ನೀಡಿದರು.
ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಮುಗಿದಿದೆ .ಈಗ ರಾಜಕೀಯ ಮಾಡುವ ಸಮಯವಲ್ಲ .ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವುದಾಗಿ ತಿಳಿಸಿದರು. ಮಂಡ್ಯ ನಗರದ ವಾಣಿ ವಿಲಾಸ ರಸ್ತೆ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಬೀದಿ ಬದಿಯಲ್ಲಿ ವ್ಯಾಪಾರ ವಹಿವಾಟು ನಡೆಯುತ್ತಿದ್ದು ಹಾಗಾಗಿ ಬೀದಿಬದಿ ವ್ಯಾಪಾರಿಗಳಿಗೂ ಶೆಲ್ಟರ್ ನಿರ್ಮಿಸುವ ಗುರಿ ನಮ್ಮದಾಗಿದೆ ಎಂದರು.
ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಅವರು ,ಕೇಂದ್ರದ ಅನುದಾನ ಒದಗಿಸುವ ಭರವಸೆ ನೀಡಿದ್ದಾರೆ. ಹಾಗೆಯೇ ಸ್ಥಳೀಯ ಶಾಸಕ ಗಣಿಗ ರವಿಕುಮಾರ್ ಅವರು ಮಂಡ್ಯ ನಗರದ ಅಭಿವೃದ್ಧಿಗೆ ಸಾತ್ ನೀಡುವುದಾಗಿ ಹೇಳಿದ್ದಾರೆ ಎಂದು ಹೇಳಿದರು.
ನಗರಸಭೆಯಲ್ಲಿ ಇಂಜಿನಿಯರಿಂಗ್, ಆರೋಗ್ಯ ವಿಭಾಗ ಸೇರಿದಂತೆ ಕೆಲವು ವಿಭಾಗದಲ್ಲಿ ಸಿಬ್ಬಂದಿಗಳ ಕೊರತೆ ಇದೆ. ಹಾಗಾಗಿ ತುರ್ತಾಗಿ ಈ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದರು.
ಉಪಾಧ್ಯಕ್ಷ ಅರುಣ್ ಕುಮಾರ್ ಮಾತನಾಡಿ ,ನಾಗೇಶ್ ಅವರಿಗೆ ಆಡಳಿತದ ಬಗ್ಗೆ ಗೊತ್ತಿದೆ. ಅನುಭವಿಯಾಗಿದ್ದಾರೆ. ನಗರದ ಅಭಿವೃದ್ಧಿ ಬಗ್ಗೆ ಪ್ಲಾನ್ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.
ನಾನು ಅಧ್ಯಕ್ಷನಾಗಿದ್ದ ಸಂದರ್ಭದಲ್ಲೇ ಜನಸಂಖ್ಯೆ ಕಡಿಮೆ ಇತ್ತು .ಈಗ ಜಾಸ್ತಿಯಾಗಿದೆ. ನಗರವು ಬೆಳೆದಿದೆ. ಎಲ್ಲರ ಸಹಕಾರದಿಂದ ಕೆಲಸ ಮಾಡುವುದಾಗಿ ತಿಳಿಸಿದರು. ರಾಜೇಂದ್ರ ಪ್ರಸಾದ್ ರಸ್ತೆ, ವಿನೋಬಾ ರಸ್ತೆ ಒನ್ ವೇ ರಸ್ತೆಯಾಗಿದೆ .ಹಾಗೆಯೇ ವಿವಿ ರಸ್ತೆಯಲ್ಲಿಯೂ ಒನ್ ವೇ ಮಾಡಿದರೆ ಸುಗಮ ಸಂಚಾರಕ್ಕೆ ಅನುಕೂಲವಾಗುತ್ತದೆ ಎಂದರು. ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಅನುದಾನ ನೀಡುವ ಬಗ್ಗೆ ಭರವಸೆ ಕೊಟ್ಟಿದ್ದಾರೆ .ಎಲ್ಲರ ಸಹಕಾರದೊಂದಿಗೆ ಕೆಲಸ ಮಾಡುತ್ತೇವೆ ಎಂದರು.
ಸುದ್ದಿಗೋಷ್ಠಿಯಲ್ಲಿ ನಗರಸಭೆ ಸದಸ್ಯ ರವಿ ಉಪಸ್ಥಿತರಿದ್ದರು.
ಮಂಡ್ಯ: ಪಾರ್ಸೆಲ್ ಕೊಡುವ ನೆಪದಲ್ಲಿ ಬಂದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮೇಶ್…
ಬೆಂಗಳೂರು: ನಿವೃತ್ತ ಸಾರಿಗೆ ನೌಕರರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಿದೆ. ಗ್ರಾಚ್ಯುಟಿ ಮತ್ತು ಗಳಿಕೆ…
ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ…
ಹೈದರಾಬಾದ್: ಡಿಸೆಂಬರ್.4ರಂದು ಸಂಧ್ಯಾ ಥಿಯೇಟರ್ ಬಳಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ದುರದೃಷ್ಟಕರ ಎಂದು ನಟ ಅಲ್ಲು ಅರ್ಜುನ್ ಬೇಸರ…
ಬೆಂಗಳೂರು: ಎರಡು ಕಾರು, ಎರಡು ಲಾರಿ ಹಾಗೂ ಶಾಲಾ ಬಸ್ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ…
ಬೆಂಗಳೂರು: ವಕ್ಫ್ ಮಂಡಳಿಯು ಹಿಂದೂ ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ…