ಮಂಡ್ಯ

ಕಾವೇರಿಯಲ್ಲಿ ಪ್ರವಾಹ: ಮುತ್ತತ್ತಿಗೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿ

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯ ಮುಂಗಾರು ಆರಂಭದಲ್ಲೇ ತುಂಬಿದ್ದು, ಭಾರೀ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಹೀಗಾಗಿ ಕಾವೇರಿ ನದಿ ತೀರ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಸೋಮವಾರ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನದಿ ತೀರದಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಮುತ್ತತ್ತಿ ಭಾಗದಲ್ಲಿ ಪ್ರವಾಸಿಗರು ಹೆಚ್ಚು ಭೇಟಿ ನೀಡುತ್ತಾರೆ. ಕೆ.ಆರ್.ಎಸ್ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ ಮಾಡುತ್ತಿರುವ ಹಿನ್ನಲೆಯಲ್ಲಿ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವವರು ಎಚ್ಚರಿಕೆಯಿಂದರಬೇಕು ಎಂದು ಸೂಚಿಸಿದರು.

ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿಯ ಒಳಗೆ ಇಳಿಯುವುದು, ಸೆಲ್ಫಿ ತೆಗೆದುಕೊಳ್ಳುವುದು ಮುಂತಾದ ಪ್ರಕ್ರಿಯೆಗಳಿಗೆ ಕೈಹಾಕಿ ಜೀವಕ್ಕೆ ತೊಂದರೆ ಮಾಡಿಕೊಳ್ಳಬೇಡಿ. ಜಿಲ್ಲಾಡಳಿತದಿಂದ ಎಚ್ಚರಿಕೆ ಫಲಕಗಳನ್ನು ಅಳವಡಿಸಿದ್ದು, ಅವುಗಳನ್ನು ಪಾಲಿಸಿ ಎಂದರು‌.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ‌ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

16 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

16 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

17 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

18 hours ago