ಮಂಡ್ಯ

ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ : ಪ್ರವಾಸಿ ತಾಣಗಳಿಗೆ ನಿರ್ಬಂಧ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆ ಆರ್ಭಟ ಹೆಚ್ಚಾಗಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ.

ಜಲಾಶಯ ಭರ್ತಿಯಂಚಿಗೆ ತಲುಪಿರುವ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಕಾವೇರಿ ನದಿಗೆ 29 ಸಾವಿರ ಕ್ಯೂಸೆಕ್ಸ್‌ ನೀರನ್ನು ಬಿಡುಗಡೆ ಮಾಡಲಾಗಿದೆ. ಜಲಾಶಯಕ್ಕೆ ಒಳಹರಿವು ಹೆಚ್ಚಾದಂತೆ ಹೊರಹರಿವನ್ನು ಸಹ ಹೆಚ್ಚಳ ಮಾಡಲಾಗುತ್ತದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸದ್ಯ ಕೆಆರ್‌ಎಸ್‌ ಜಲಾಶಯ 121 ಅಡಿ ಭರ್ತಿಯಾಗಿದ್ದು, 124.80 ಅಡಿ ಗರಿಷ್ಠ ಮಟ್ಟ ಹೊಂದಿದೆ. ಡ್ಯಾಂಗೆ 20,315 ಕ್ಯೂಸೆಕ್ಸ್‌ ಒಳಹರಿವಿದ್ದು, ಸಂಜೆ ಅಥವಾ ನಾಳೆ ಬೆಳಿಗ್ಗೆ 50 ಸಾವಿರ ಕ್ಯೂಸೆಕ್ಸ್‌ಗೆ ಏರಿಕೆ ಆಗುವ ಸಾಧ್ಯತೆಯಿದೆ.

ಕೆಆರ್‌ಎಸ್‌ ಜಲಾಶಯದಿಂದ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಶ್ರೀರಂಗಪಟ್ಟಣ ವ್ಯಾಪ್ತಿಯ ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ.

ಬಲಮುರಿ, ಎಡಮುರಿ, ಸಂಗಮ, ಗೋಸಾಯಿ ಘಾಟ್‌ನಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ನಿಮಿಷಾಂಭ, ಶ್ರೀರಂಗನಾಥ ದೇವಸ್ಥಾನದ ಸ್ನಾನಘಟ್ಟಗಳಿಗೂ ನಿರ್ಬಂಧ ವಿಧಿಸಿ ಶ್ರೀರಂಗಪಟ್ಟಣ ತಹಶೀಲ್ದಾರ್‌ ಆದೇಶ ಹೊರಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ದರಗಳ ಏರಿಕೆಯಿಂದ ಸಂಕಷ್ಟದಲ್ಲಿ ಜನರು

ಕರ್ನಾಟಕ ಸರ್ಕಾರ ಇತ್ತೀಚೆಗೆ ಎರಡು ದರಗಳನ್ನು ಹೆಚ್ಚಿಸುವ ಮೂಲಕ ಜನರ ಮೇಲೆ ಹೆಚ್ಚಿನ ಹೊರೆ ಹೊರಿಸಿದೆ. ಒಂದು- ಹಾಲಿನ ದರ…

4 hours ago

ನಾಯಿಗೆ ಮೇಯರ್ ಗಿರಿ…!!

ಶೇಷಾದ್ರಿ ಗಂಜೂರು, ಹೆಸರಾಂತ ಮಾಧ್ಯಮ ತಜ್ಞರು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವಾದ ಭಾರತದಲ್ಲಿ, ಚುನಾವಣೆಯೆಂದರೆ, ಎಲೆಕ್ಟ್ರಾನಿಕ್ ಮತಯಂತ್ರದ ಮುಂದೆ ನಿಂತು…

4 hours ago

ಸಿಎಂ ಅಚ್ಯುತರಾಯರು ಮತ್ತು ಮಂತ್ರಿ ಗುಲ್ಗುಲೆಯೂ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಬೆಡ್ ರೂಮಿನ ಎಲೆಕ್ಟ್ರಿಕ್ ಸ್ವಿಚ್ ಬೋರ್ಡಿನ ತ್ರಿಪಿನ್ ಪ್ಲೇಟಿಗೆ ಫಿಕ್ಸ್ ಆಗಿದ್ದ…

4 hours ago

ದೀಪಾವಳಿ ಬಳಿಕ ರಸ್ತೆ ವೈಟ್ ಟಾಪಿಂಗ್ ಕಾಮಗಾರಿ

ಕೆ.ಬಿ.ರಮೇಶನಾಯಕ ಕಾಮಗಾರಿ ವೇಳೆ ಒಂದು ಕಡೆ ಸಂಚಾರ ನಿರ್ಬಂಧ; ಮತ್ತೊಂದು ಕಡೆ ಓಡಾಟಕ್ಕೆ ಅವಕಾಶ ವೈಟ್ ಟಾಪಿಂಗ್ ಕಾಮಗಾರಿಗೆ ಅತ್ಯಾಧುನಿಕ…

4 hours ago

ಅವ್ಯವಸ್ಥೆಗಳ ಆಗರ ಕುವೆಂಪುನಗರ ಪಾರ್ಕ್

ಪ್ರಶಾಂತ್ ಎಸ್. ಮೈಸೂರು: ನಗರದ ಸೌಂದರ್ಯಕ್ಕೆ ಕನ್ನಡಿ ಹಿಡಿದಂತಿದ್ದ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ವಾರ್ಡ್ ಸಂಖ್ಯೆ ೪೭ರ ಕುವೆಂಪುನಗರದ ಉದ್ಯಾನ…

4 hours ago

ಬೆಳಕಿನ ಹಬ್ಬಕ್ಕಿಲ್ಲ ಪಟಾಕಿ ವ್ಯಾಪಾರದ ಕಳೆ

ಅಣ್ಣೂರು ಸತೀಶ್ ಶೇ.೫೦ರಷ್ಟು ವಹಿವಾಟು ಇಳಿಕೆ; ಗ್ರಾಹಕರಿಲ್ಲದೆ ಕಂಗಾಲಾದ ವ್ಯಾಪಾರಿಗಳು ಭಾರತೀನಗರ: ದೀಪಾವಳಿ ಎಂದರೆ ಮನೆಮನೆಗಳಲ್ಲಿ ದೀಪಗಳ ಬೆಳಕಿನೊಂದಿಗೆ ಪಟಾಕಿಗಳ…

4 hours ago