Mysore
22
overcast clouds

Social Media

ಭಾನುವಾರ, 13 ಜುಲೈ 2025
Light
Dark

ತಮಿಳುನಾಡಿಗೆ ಕಾವೇರಿ ನೀರು: ʻಎಚ್‌ಡಿಕೆʼ ಮಧ್ಯ ಪ್ರವೇಶಿಸಲು ಒತ್ತಾಯ

ಮಂಡ್ಯ: ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ಕಾವೇರಿ ನೀರು ಬಿಡುಗಡೆ ಮಾಡುವಂತೆ ಆದೇಶಸಿರುವ ಕಾವೇರಿ ನದಿ ನೀರು ಪ್ರಾಧಿಕಾರದ ವಿರುದ್ಧ ತಮ್ಮ ಪ್ರಭಾವ ಬಳಸಿ ತಡೆ ಹಿಡಿಯುವಂತೆ ಕೇಂದ್ರ ಉಕ್ಕ ಮತ್ತು ಬೃಹತ್‌ ಕೈಗಾರಿಕೆ ಸಚಿವ ಎಚ್.ಡಿ ಕುಮಾರಸ್ವಾಮಿ ಅವರನ್ನು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸಿ.ಡಿ ಗಂಗಾಧರ್‌ ಒತ್ತಾಯಿಸಿದ್ದಾರೆ.

ಕಾವೇರಿ ನದಿ ನೀರು ಪ್ರಾಧಿಕಾರವು ಕೆಆರ್‌ಎಸ್‌ ಜಲಾಶಯದಿಂದ ಇಂದಿನಿಂದ ಪ್ರತಿನಿತ್ಯ 11,000 ನೀರನ್ನು ತಮಿಳುನಾಡಿಗೆ ಹರಿಸುವಂತೆ ಆದೇಶ ನೀಡಿದೆ. ಆದ್ದರಿಂದ ಕೇಂದ್ರದ ಪ್ರಭಾವಿ ಸಚಿವರಾಗಿರುವ ಜಿಲ್ಲೆಯ ಸಂಸದರು ಆದ ಎಚ್‌ಡಿ ಕುಮಾರಸ್ವಾಮಿ ಅವರು ಪ್ರಧಾನಿ ಮೋದಿ ಅವರೊಂದಿಗೆ ಚರ್ಚಿಸಿ ಪ್ರಾಧಿಕಾರದ ಆದೇಶವನ್ನು ಹಿಂಪಡೆಯಬೇಕು ಎಂದು ಶುಕ್ರವಾರ(ಜು.12) ಪರ್ತಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಕಾವೇರಿ ಹಾಗೂ ಮಹದಾಯಿ ವಿಚಾರದಲ್ಲಿ ರಾಜ್ಯಕ್ಕೆ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ ಅವರು ಕೇಂದ್ರದ ಮೇಲೆ ಒತ್ತಡ ಹೇರಿ ರಾಜ್ಯ ಹಾಗೂ ಜಿಲ್ಲೆಯ ರೈತರಿಗೆ ನ್ಯಾಯ ಒದಗಿಸಬೇಕು ಎಂದು ತಾಕೀತು ಮಾಡಿದರು.

Tags:
error: Content is protected !!