ಮಂಡ್ಯ: ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ಕಾವೇರಿ ನೀರು ಬಿಡುಗಡೆ ಮಾಡುವಂತೆ ಆದೇಶಸಿರುವ ಕಾವೇರಿ ನದಿ ನೀರು ಪ್ರಾಧಿಕಾರದ ವಿರುದ್ಧ ತಮ್ಮ ಪ್ರಭಾವ ಬಳಸಿ ತಡೆ ಹಿಡಿಯುವಂತೆ ಕೇಂದ್ರ ಉಕ್ಕ ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ ಕುಮಾರಸ್ವಾಮಿ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ ಗಂಗಾಧರ್ ಒತ್ತಾಯಿಸಿದ್ದಾರೆ.
ಕಾವೇರಿ ನದಿ ನೀರು ಪ್ರಾಧಿಕಾರವು ಕೆಆರ್‌ಎಸ್ ಜಲಾಶಯದಿಂದ ಇಂದಿನಿಂದ ಪ್ರತಿನಿತ್ಯ 11,000 ನೀರನ್ನು ತಮಿಳುನಾಡಿಗೆ ಹರಿಸುವಂತೆ ಆದೇಶ ನೀಡಿದೆ. ಆದ್ದರಿಂದ ಕೇಂದ್ರದ ಪ್ರಭಾವಿ ಸಚಿವರಾಗಿರುವ ಜಿಲ್ಲೆಯ ಸಂಸದರು ಆದ ಎಚ್‌ಡಿ ಕುಮಾರಸ್ವಾಮಿ ಅವರು ಪ್ರಧಾನಿ ಮೋದಿ ಅವರೊಂದಿಗೆ ಚರ್ಚಿಸಿ ಪ್ರಾಧಿಕಾರದ ಆದೇಶವನ್ನು ಹಿಂಪಡೆಯಬೇಕು ಎಂದು ಶುಕ್ರವಾರ(ಜು.12) ಪರ್ತಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಕಾವೇರಿ ಹಾಗೂ ಮಹದಾಯಿ ವಿಚಾರದಲ್ಲಿ ರಾಜ್ಯಕ್ಕೆ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ ಅವರು ಕೇಂದ್ರದ ಮೇಲೆ ಒತ್ತಡ ಹೇರಿ ರಾಜ್ಯ ಹಾಗೂ ಜಿಲ್ಲೆಯ ರೈತರಿಗೆ ನ್ಯಾಯ ಒದಗಿಸಬೇಕು ಎಂದು ತಾಕೀತು ಮಾಡಿದರು.
ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…
ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು ಕೆಜಿಗೆ ರೂ. ೮೯ ಇದ್ದ ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…
ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ ಅಲ್ಪ ವಿರಾಮವನ್ನು ಘೋಷಿಸಲಾಗಿದೆ. ಈ ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…
ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…
ಹಾಲಿವುಡ್‌ನ ಪ್ರಖ್ಯಾತ ನಿರ್ದೇಶಕ ಚಾಡ್ ಸ್ಟಹೆಲ್ಸ್ಕಿ ನಿರ್ದೇಶನದ john wick" ಸರಣಿ ಚಿತ್ರಗಳಲ್ಲಿನ ಅಂತ್ಯವಿಲ್ಲದ ಶವಗಳ ಎಣಿಕೆ, ಕ್ವೆಂಟಿನ್ ಟರೆಂಟಿನೋ…
ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಹಾಡೊಂದು ದೇಶಾದ್ಯಂತ ಸುದ್ದಿ ಮಾಡಿತಷ್ಟೇ. ಅದರ ಪ್ರಸ್ತಾಪ ಲೋಕಸಭೆಯಲ್ಲೂ ಆಯಿತು. ವಾರ್ತಾ ಮತ್ತು ಪ್ರಸಾರ…