ಮಂಡ್ಯ

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ ರಸ್ತೆ ಬದಿಯ ಮರಗಳ ಸಮೀಕ್ಷೆ ನಡೆಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತ ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮದ್ದೂರಿನಲ್ಲಿಂದು ಜಿಲ್ಲಾ ಅರಣ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮಂಡ್ಯದ ೭ ವಲಯಗಳಲ್ಲಿರುವ ನರ್ಸರಿಗಳಲ್ಲಿ ತೇಗ, ಶ್ರೀಗಂಧ, ಹೊನ್ನೆ ಇತ್ಯಾದಿ ಗುಣಮಟ್ಟದ ಸಸಿಗಳನ್ನು ಬೆಳೆಸಿ ರೈತರಿಗೆ ವಿತರಿಸುವಂತೆ ಮತ್ತು ವಿತರಿಸಿದ ಸಸಿಗಳ ಪೈಕಿ ಎಷ್ಟು ಬದುಕುಳಿದಿವೆ ಎಂಬ ಬಗ್ಗೆ ಸಮೀಕ್ಷೆ ನಡೆಸುವಂತೆಯೂ ತಿಳಿಸಿದರು.

ಜಿಲ್ಲೆಯ ಹಲವೆಡೆ ಚಿರತೆಗಳ ಸಮಸ್ಯೆ ಪರಿಹಾರಕ್ಕೆ ತಕ್ಷಣವೇ ಕ್ರಮ ವಹಿಸುವಂತೆ ತಿಳಿಸಿದ ಅವರು, ಕಾಡಿನಂಚಿನ ಗ್ರಾಮದ ಜನರೊಂದಿಗೆ ಸೌಹಾರ್ಧ ಸಂಬಂಧ ಬೆಳೆಸಿಕೊಂಡರೆ, ಕಾಡ್ಗಿಚ್ಚು, ಕಳ್ಳಬೇಟೆ, ಅಕ್ರಮ ಮರ ಕಡಿತಲೆಯಂತಹ ಅಪರಾಧಗಳ ಬಗ್ಗೆ ತಕ್ಷಣದ ಮಾಹಿತಿ ಲಭಿಸುತ್ತದೆ. ವನ ಮತ್ತು ವನ್ಯಜೀವಿ ಸಂರಕ್ಷಣೆಯನ್ನು ಪರಿಣಾಮಕಾರಿಯಾಗಿ ಮಾಡಲು ಸಾಧ್ಯವಾಗುತ್ತದೆ ಎಂದರು.

ಜಿಯೋ ಟ್ಯಾಗ್ ಮಾಡಲು ಸೂಚನೆ
ಅರಣ್ಯ, ಕಾಡಿನಂಚಿನಲ್ಲಿರುವ ಪಟ್ಟಾ ಜಮೀನು, ಸರ್ಕಾರಿ ಜಾಗದಲ್ಲಿ ಬೆಳೆದಿರುವ ಶ್ರೀಗಂಧ, ರಕ್ತ ಚಂದನ, ಬೀಟೆ ಮತ್ತು ತೇಗದ ಮರಗಳ ಜಿಯೋ ಟ್ಯಾಗ್ ಮಾಡುವ ಮೂಲಕ ಯಾವುದೇ ಬೆಲೆ ಬಾಳುವ ವೃಕ್ಷ ಕಳುವಾಗದಂತೆ ಸಂರಕ್ಷಿಸಲು ಅರಣ್ಯ ಸಚಿವರು ಸೂಚಿಸಿದರು.

ಮಂಡ್ಯದಲ್ಲಿ ಮರಗಳ ಸಮೀಕ್ಷೆಗೆ ಆದೇಶ
ಮಂಡ್ಯ ನಗರದಲ್ಲಿ ಮನೆಯ ಮುಂದೆ, ರಸ್ತೆಯ ಬದಿಯಲ್ಲಿ ಬೆಳೆದ ಮರಗಳನ್ನು ಅಕ್ರಮವಾಗಿ ಕಡಿಯಲಾಗುತ್ತಿದೆ ಎಂಬ ಆರೋಪಗಳಿದ್ದು, ಮರಗಳ ಗಣತಿ ನಡೆಸಲು ಮತ್ತು ಅಕ್ರಮವಾಗಿ ಮರ ಕಡಿತಲೆ ಆಗದಂತೆ ಕ್ರಮ ವಹಿಸಲು ಸೂಚಿಸಿದರು.

೨ ಸಾವಿರ ಎಕರೆ ಅರಣ್ಯಭೂಮಿ ಒತ್ತುವರಿ
ಜಿಲ್ಲೆಯಲ್ಲಿ ಕರ್ನಾಟಕ ಅರಣ್ಯ ಕಾಯಿದೆ ಅಡಿ ಸೆಕ್ಷನ್ ೪ರ ಪ್ರಾಥಮಿಕ ಅಽಸೂಚನೆ ಆಗಿ ವರ್ಷಗಳೇ ಕಳೆದಿದ್ದರೂ ಸೆಕ್ಷನ್ ೧೭ರ ಅಡಿಯಲ್ಲಿ ಅರಣ್ಯ ಎಂದು ಘೋಷಣೆ ಆಗಿಲ್ಲ. ಎಲ್ಲೆಲ್ಲಿ ಅರಣ್ಯ ವ್ಯವಸ್ಥಾಪನಾಧಿಕಾರಿ (ಎಫ್‌ಎಸ್‌ಒ) ಇಲ್ಲವೋ ಅಲ್ಲಿಗೆ ಪ್ರಸ್ತಾವನೆ ಸಲ್ಲಿಸಿದರೆ ಅಧಿಕಾರಿಗಳನ್ನು ನೇಮಕ ಮಾಡುವುದಾಗಿ ತಿಳಿಸಿದರು. ಅದೇ ರೀತಿ ಜಿಲ್ಲೆಯಲ್ಲಿ ೨ ಸಾವಿರಕ್ಕೂ ಹೆಚ್ಚು ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, ಪಟ್ಟಾ ಜಮೀನೂ ಸೇರಿ ೩ ಎಕರೆಗಿಂತ ಕಡಿಮೆ ಒತ್ತುವರಿ ಹೊರತು ಪಡೆಸಿ, ಉಳಿದ ಎಲ್ಲ ಒತ್ತುವರಿ ಹಾಗೂ ೨೦೧೫ರ ನಂತರದ ಅರಣ್ಯ ಒತ್ತುವರಿ ತೆರವುಗೊಳಿಸಲು ಆದೇಶ ನೀಡಿದರು.

ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಈ ತಿಂಗಳಲ್ಲೇ ರೈಲ್ವೆ ಬ್ಯಾರಿಕೇಡ್ ಮತ್ತು ಆನೆ ಕಂದಕ ಹಾಗೂ ಸೌರಬೇಲಿ ಕುರಿತಂತೆ ಸಭೆ ನಡೆಸುವುದಾಗಿಯೂ ಈಶ್ವರ ಖಂಡ್ರೆ ತಿಳಿಸಿದರು.
ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ರಘು, ಪ್ರಭುಗೌಡ ಪಾಟೀಲ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

2 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

3 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

3 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

3 hours ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

3 hours ago