Mysore
24
moderate rain

Social Media

ಬುಧವಾರ, 16 ಸೆಪ್ಟೆಂಬರ್ 2026
Light
Dark

ನಾನು ಮಂಡ್ಯ ಅಭಿವೃದ್ಧಿಗಾಗಿ ಪ್ರಾಮಾಣಿಕ ಕೆಲಸ ಮಾಡುತ್ತೇನೆ: ಎಚ್‌ಡಿ ಕುಮಾರಸ್ವಾಮಿ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಚ್‌.ಡಿ ಕುಮಾರಸ್ವಾಮಿ ಮಂಡ್ಯದಲ್ಲಿ ಭರ್ಜರಿ ಪ್ರಚಾರ ಆರಂಭ ಮಾಡಿದ್ದಾರೆ. ಮಂಡ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನನ್ನ ಮೇಲೆ ವಿಶ್ವಾಸವಿಟ್ಟು ಈ ಬಾರಿ ಚುನಾವಣೆಯಲ್ಲಿ ಮತ ನೀಡಿ ಎಂದು ಎಚ್‌ಡಿಕೆ ಮನವಿ ಮಾಡಿಕೊಂಡಿದ್ದಾರೆ.

ಮಂಡ್ಯ ಜನರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಿರಾ. ನನ್ನಷ್ಟು ಬೇರೆ ಯಾವ ರಾಜಕೀಯ ನಾಯಕರು ಮಂಡ್ಯ ಜನರ ಕಷ್ಟಗಳಿಗೆ ಸ್ಪಂದಿಸಿಲ್ಲ. ಹಲವು ಜಿಲ್ಲೆಯಿಂದ ಮೈತ್ರಿ ನಾಯಕರು ನನ್ನನ್ನು ಚುನಾವಣಾ ಪ್ರಚಾರಕ್ಕೆ ಆಹ್ವಾನಿಸುತ್ತಿದ್ದಾರೆ. ಈ ಬಾರಿ ನನಗೆ ಮತ ನೀಡಿ ಗೆಲ್ಲಿಸಿ. ನಿಮಗಾಗಿ ದುಡಿಯಲು ಇನ್ನೊಮ್ಮೆ ಅವಕಾಶ ನೀಡಿ ಎಂದು ಕುಮಾರಸ್ವಾಮಿ ವಿನಂತಿಸಿದ್ದಾರೆ.

ಜೆಡಿಎಸ್ ಈಗ ಮುಗಿದೇ ಹೋಯ್ತು ಎಂದು ಕೆಲವರು ಹೇಳುತ್ತಿದ್ದಾರೆ. ನಮ್ಮ ಕಾರ್ಯಕರ್ತರು ನಮಗೆ ಯಾರು ಅನ್ಯಾಯ ಮಾಡಿಲ್ಲ. ಎಲ್ಲರಿಗೂ ನಮ್ಮ ಪಕ್ಷದ ಪರ ಒಲವು‌ ಇದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಸ್ವಯಂಕೃತ ಅಪಾರಾಧಗಳಿಂದ ಸೋತಿದ್ದೇವೆ ಅಷ್ಟೆ.

ನನ್ನ ಕನಕಪುರ ಸ್ನೇಹಿತ ನನಗೆ ಅಮೃತ ಹಾಕಿದ್ದೇನೆ ಎಂದು ಹೇಳಿದ್ದಾರೆ. ಅದ್ಯಾವ ಅಮೃತ ಹಾಕಿದ್ದಾನೋ ಗೊತ್ತಿಲ್ಲ. ಇಂದು ಮಂಡ್ಯಕ್ಕೆ ಬಂದು ಏನೇನೋ ಹೇಳಿದ್ದಾರೆ. ಏನು ಹೇಳ್ತಾರೋ ಹೇಳಲಿ, ಈ ಎಲ್ಲಾ ಅಪಾದನೆಗಳಿಗೂ ಮಂಡ್ಯ ಜನರು ಉತ್ತರ ಕೊಡುತ್ತಾರೆ ಎನ್ನುವ ಮೂಲಕ ಡಿಕೆ ಶಿವಕುಮಾರ್‌ಗೆ ಟಾಂಗ್​ ಕೊಟ್ಟಿರು.

 

Tags:
error: Content is protected !!