ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಮಂಡ್ಯದಲ್ಲಿ ಭರ್ಜರಿ ಪ್ರಚಾರ ಆರಂಭ ಮಾಡಿದ್ದಾರೆ. ಮಂಡ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನನ್ನ ಮೇಲೆ ವಿಶ್ವಾಸವಿಟ್ಟು ಈ ಬಾರಿ ಚುನಾವಣೆಯಲ್ಲಿ ಮತ ನೀಡಿ ಎಂದು ಎಚ್‌ಡಿಕೆ ಮನವಿ ಮಾಡಿಕೊಂಡಿದ್ದಾರೆ.
ಮಂಡ್ಯ ಜನರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಿರಾ. ನನ್ನಷ್ಟು ಬೇರೆ ಯಾವ ರಾಜಕೀಯ ನಾಯಕರು ಮಂಡ್ಯ ಜನರ ಕಷ್ಟಗಳಿಗೆ ಸ್ಪಂದಿಸಿಲ್ಲ. ಹಲವು ಜಿಲ್ಲೆಯಿಂದ ಮೈತ್ರಿ ನಾಯಕರು ನನ್ನನ್ನು ಚುನಾವಣಾ ಪ್ರಚಾರಕ್ಕೆ ಆಹ್ವಾನಿಸುತ್ತಿದ್ದಾರೆ. ಈ ಬಾರಿ ನನಗೆ ಮತ ನೀಡಿ ಗೆಲ್ಲಿಸಿ. ನಿಮಗಾಗಿ ದುಡಿಯಲು ಇನ್ನೊಮ್ಮೆ ಅವಕಾಶ ನೀಡಿ ಎಂದು ಕುಮಾರಸ್ವಾಮಿ ವಿನಂತಿಸಿದ್ದಾರೆ.
ಜೆಡಿಎಸ್ ಈಗ ಮುಗಿದೇ ಹೋಯ್ತು ಎಂದು ಕೆಲವರು ಹೇಳುತ್ತಿದ್ದಾರೆ. ನಮ್ಮ ಕಾರ್ಯಕರ್ತರು ನಮಗೆ ಯಾರು ಅನ್ಯಾಯ ಮಾಡಿಲ್ಲ. ಎಲ್ಲರಿಗೂ ನಮ್ಮ ಪಕ್ಷದ ಪರ ಒಲವು ಇದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಸ್ವಯಂಕೃತ ಅಪಾರಾಧಗಳಿಂದ ಸೋತಿದ್ದೇವೆ ಅಷ್ಟೆ.
ನನ್ನ ಕನಕಪುರ ಸ್ನೇಹಿತ ನನಗೆ ಅಮೃತ ಹಾಕಿದ್ದೇನೆ ಎಂದು ಹೇಳಿದ್ದಾರೆ. ಅದ್ಯಾವ ಅಮೃತ ಹಾಕಿದ್ದಾನೋ ಗೊತ್ತಿಲ್ಲ. ಇಂದು ಮಂಡ್ಯಕ್ಕೆ ಬಂದು ಏನೇನೋ ಹೇಳಿದ್ದಾರೆ. ಏನು ಹೇಳ್ತಾರೋ ಹೇಳಲಿ, ಈ ಎಲ್ಲಾ ಅಪಾದನೆಗಳಿಗೂ ಮಂಡ್ಯ ಜನರು ಉತ್ತರ ಕೊಡುತ್ತಾರೆ ಎನ್ನುವ ಮೂಲಕ ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟಿರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…