Mysore
28
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಕಾವೇರಿ ನದಿಯಲ್ಲಿ ಎಸ್.ಎಂ.ಕೃಷ್ಣ ಅಸ್ಥಿ ವಿಸರ್ಜನೆ

ಬೆಂಗಳೂರು: ಇತ್ತೀಚೆಗೆ ನಿಧನರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅಸ್ಥಿಯನ್ನು ಮೊಮ್ಮಗ ಅಮರ್ತ್ಯ ಹೆಗಡೆ ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಿದರು.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಎಸ್.‌ಎಂ.ಕೃಷ್ಣ ಅವರ ಅಸ್ತಿ ವಿಸರ್ಜನೆ ಮಾಡಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು.

ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಡಿಸೆಂಬರ್.‌10ರಂದು ಎಸ್.ಎಂ.ಕೃಷ್ಣ ಅವರು ವಿಧಿವಶರಾಗಿದ್ದರು.

ಅವರ ಹುಟ್ಟೂರು ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಹೊರವಲಯದಲ್ಲಿರುವ ಕಾಫಿ ಡೇ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು.

ಅವರ ನಿಧನದ ಹಿನ್ನೆಲೆಯಲ್ಲಿ ಡಿಸೆಂಬರ್.‌11ರಂದು ಸರ್ಕಾರಿ ರಜೆ ಘೋಷಣೆ ಮಾಡಿ ಮೂರು ದಿನ ಶೋಕಾಚರಣೆ ಘೋಷಿಸಲಾಗಿತ್ತು.

 

Tags:
error: Content is protected !!