ಬೆಂಗಳೂರು: ಇತ್ತೀಚೆಗೆ ನಿಧನರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅಸ್ಥಿಯನ್ನು ಮೊಮ್ಮಗ ಅಮರ್ತ್ಯ ಹೆಗಡೆ ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಿದರು.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಎಸ್.ಎಂ.ಕೃಷ್ಣ ಅವರ ಅಸ್ತಿ ವಿಸರ್ಜನೆ ಮಾಡಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು.
ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಡಿಸೆಂಬರ್.10ರಂದು ಎಸ್.ಎಂ.ಕೃಷ್ಣ ಅವರು ವಿಧಿವಶರಾಗಿದ್ದರು.
ಅವರ ಹುಟ್ಟೂರು ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಹೊರವಲಯದಲ್ಲಿರುವ ಕಾಫಿ ಡೇ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು.
ಅವರ ನಿಧನದ ಹಿನ್ನೆಲೆಯಲ್ಲಿ ಡಿಸೆಂಬರ್.11ರಂದು ಸರ್ಕಾರಿ ರಜೆ ಘೋಷಣೆ ಮಾಡಿ ಮೂರು ದಿನ ಶೋಕಾಚರಣೆ ಘೋಷಿಸಲಾಗಿತ್ತು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…