ಮಂಡ್ಯ

ಮೀಸಲಾತಿ ತಿದ್ದುಪಡಿಗೆ ಮಾಜಿ ಸಚಿವ ಎನ್.ಮಹೇಶ್‌ ಆಗ್ರಹ

ಮಂಡ್ಯ : ಒಳ ಮೀಸಲಾತಿಯಲ್ಲಿ ಅಲೆಮಾರಿ ಸೇರಿದಂತೆ ಅತಿ ಹಿಂದುಳಿದ ಸಮುದಾಯಗಳಿಗೆ ಅನ್ಯಾಯವಾಗಿದ್ದು, ಕೂಡಲೇ ಮೀಸಲಾತಿಗೆ ತಿದ್ದುಪಡಿ ತಂದು ಸರಿಪಡಿಸಲು ಸರ್ಕಾರ ಮುಂದಾಗಬೇಕು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಆಗ್ರಹಿಸಿದರು.

ವಿಧಾನಸಭೆಯ ಅಧಿವೇಶನ ಮುಗಿಯುವ ಕೊನೆ ವೇಳೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಶಿಷ್ಟ ಜಾತಿ ಸಮುದಾಯದ ಒಳಮೀಸಲಾತಿಗೆ ತಾರ್ಕಿಕ ಮತ್ತು ತಾತ್ವಿಕ ಅಂತ್ಯ ನೀಡಿರುವುದಾಗಿ ಹೇಳಿಕೆ ನೀಡಿದ್ದಾರೆ. ಅದಕ್ಕೆ ಪೂರಕವಾಗಿ ಆ.೨೫ರಂದು ಆದೇಶ ಹೋರಡಿಸಿದ್ದು, ಆದೇಶದಲ್ಲಿ ಯಾವುದೇ ತಾರ್ಕಿಕ ಮತ್ತು ತಾತ್ವಿಕ ಅಂಶಗಳು ಕಾಣುತ್ತಿಲ್ಲ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಒಳಮೀಸಲಾತಿ ಸಂಬಂಧ ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗವು ಅವರು ೫ ವರ್ಗಗಳನ್ನಾಗಿ ವಿಂಗಡಿಸಿದ್ದು, ಎ ವರ್ಗದಲ್ಲಿ ಅತಿ ಹಿಂದುಳಿದ ಪರಿಶಿಷ್ಟ ಸಮುದಾಯದ ೫,೨೨,೦೯೯ ಜನಸಂಖ್ಯೆಯ ೫೯ ಜಾತಿಗಳಿಗೆ ಶೇ.೧ರಷ್ಟು, ಬಿ ವರ್ಗದಲ್ಲಿ ಹೆಚ್ಚು ಹಿಂದುಳಿದ ಪರಿಶಿಷ್ಟ ಸಮುದಾಯದ ೩೬,೬೯,೨೪೬ ಜನಸಂಖ್ಯೆಯ ೧೮ ಜಾತಿಗಳಿಗೆ ಶೇ.೬ರಷ್ಟು, ಸಿ ವರ್ಗದಲ್ಲಿ ಹಿಂದುಳಿದ ಪರಿಶಿಷ್ಟ ಸಮುದಾಯದ ೩೦,೦೮,೬೩೩ ಜನಸಂಖ್ಯೆಯ ೧೭ ಜಾತಿಗಳಿಗೆ ಶೇ.೫ರಷ್ಟು, ಡಿ ವರ್ಗದಲ್ಲಿ ಕಡಿಮೆ ಹಿಂದುಳಿದ ಪರಿಶಿಷ್ಟ ಸಮುದಾಯದ ೨೮,೨೪,೯೩೯ ಜನಸಂಖ್ಯೆಯ ೪ ಜಾತಿಗಳಿಗೆ ಶೇ.೪ರಷ್ಟು ಹಾಗೂ ಇ ವರ್ಗದಲ್ಲಿ ೪,೭೪,೯೫೪ ಜನಸಂಖ್ಯೆಯ ಮೂಲ ಜಾತಿಯ ಹೆಸರು ನಮೂದಿಸದ (ಎಕೆ, ಎಡಿ, ಎಎ) ಜಾತಿಗಳಿಗೆ ಶೇ.೨ರಷ್ಟು ಮೀಸಲಾತಿ ಶಿಫಾರಸ್ಸು ಮಾಡಿದ್ದಾರೆ ಎಂದು ವಿವರಿಸಿದರು.

ಅಲೆಮಾರಿ ಹಾಗೂ ಅರೆ ಅಲೆಮಾರಿ, ಅಸಹಾಯ ಮತ್ತು ದುರ್ಬಲ ಸಮುದಾಯಗಳನ್ನು ವಿಂಗಡಿಸಿರುವ ನಾಗಮೋಹನ್‌ದಾಸ್ ವರದಿಯಲ್ಲಿ ಶೇ.೧ರಷ್ಟು ಮೀಸಲಾತಿ ನೀಡಿದ್ದರೂ ಇತರೆ ಪ್ರಬಲ ವರ್ಗಗಳನ್ನು ಸೇರಿಸಿದ ರಾಜ್ಯ ಸರ್ಕಾರ ಮಹಾಮೋಸ ಎಸಗಿದೆ. ಇದು ತಾತ್ವಿಕ ಮತ್ತು ತಾರ್ಕಿಕ ಎಂಬುದು ಸರಿಯೇ ಎಂದು ಪ್ರಶ್ನಿಸಿದರು.

ನಾಗಮೋಹನ್‌ದಾಸ್ ವರದಿಯ ಶಿಫಾರಸ್ಸನ್ನು ತಿದ್ದುಪಡಿ ಮಾಡಿಕೊಂಡ ಕಾಂಗ್ರೆಸ್ ಸರ್ಕಾರ ಮೂರು ವರ್ಗಗಳನ್ನಾಗಿ ವಿಂಗಡಿಸಿಕೊಂಡಿದೆ. ಶೇ ೬, ೬ ಮತ್ತು ೫ ರಷ್ಟು ಮೀಸಲಾತಿ ವಿಂಗಡಿಸಿ, ೧೦೧ ಜಾತಿಗಳ ಪೈಕಿ ೯೮ ಜಾತಿಗಳನ್ನು ಮಾತ್ರ ತೋರಿಸಿದ್ದು, ಕಾನೂನುಬದ್ಧ ಪರಿಶೀಲನೆಯಲ್ಲಿ ಸಮಸ್ಯೆ ಎದುರಾಗುತ್ತದೆ. ಅನುಚ್ಛೇತ ೧೯೨ರ ಪ್ರಕಾರ ಜಾತಿಗಳನ್ನು ಸೇರಿಸಲು ಅಥವಾ ತೆಗೆಯಲು ಕೇಂದ್ರ ಸರ್ಕಾರಕ್ಕೆ ಹೊರತುಪಡಿಸಿ ರಾಜ್ಯ ಸರ್ಕಾರಕ್ಕೆ ಅವಕಾಶವಿಲ್ಲ. ಈ ಸಂಬಂಧ ಯಾರಾದರೂ ನ್ಯಾಯಾಲಯದ ಮೆಟ್ಟಿಲೇರಿದರೆ, ಸದರಿ ಮೀಸಲಾತಿಗೆ ನ್ಯಾಯಾಲಯ ತಡೆ ನೀಡಲು ಇದೋಂದು ಕಾರಣ ಸಾಕಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ತಮ್ಮ ಆದೇಶಕ್ಕೆ ತಿದ್ದುಪಡಿ ತರಬೇಕು. ಇಲ್ಲವಾದಲ್ಲಿ ತಮ್ಮ ಆದೇಶ ಊರ್ಜಿತವಾಗಬಾರದೆಂದು ತಾವೇ ಬೇಕೆಂತಲೇ ಆದೇಶ ಮಾಡಿದಂತಾಗುತ್ತದೆ. ರಾಜ್ಯ ಸರ್ಕಾರ ತನ್ನ ಹಣಕಾಸಿನ ಮುಗ್ಗಟ್ಟಿನಿಂದ ಮೀಸಲಾತಿ ಜಾರಿಯಾಗದಂತೆ ತಡೆಯಲೆಂದೇ ಒಳಮೀಸಲಾತಿ ಆದೇಶ ಮಾಡಿದಂತೆ ಕಾಣುತ್ತಿದೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಬಿಜೆಪಿ ಎಸ್ಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಪರಮಾನಂದ, ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಮಾಧ್ಯಮ ವಕ್ತಾರ ನಾಗಾನಂದ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಕ್ಯಾತನಹಳ್ಳಿಯಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು

ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…

4 hours ago

ಓದುಗರ ಪತ್ರ: ಬಂದರು ಎಂದರೆ…

ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…

4 hours ago

ಓದುಗರ ಪತ್ರ: ರಸ್ತೆ ಡುಬ್ಬಗಳಿಗೆ ಬಿಳಿ ಬಣ್ಣ ಬಳಿಯಿರಿ

ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…

4 hours ago

ಓದುಗರ ಪತ್ರ: ರಾಜಕೀಯದ ಪ್ರಚಾರ ಸಾಧನವಾಗುತ್ತಿರುವ ಜಾತ್ರೆಗಳು

ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…

4 hours ago

ಓದುಗರ ಪತ್ರ: ಸೆಸ್ಕ್ ಯುಜಿ ಕೇಬಲ್ ಮುಂಜಾಗ್ರತೆ ವಹಿಸಿ

ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕೆನೆಪದರ ಪರಿಶಿಷ್ಟರಿಗೆ ಬೇಡವೆನ್ನುವ ಕೇಂದ್ರಕ್ಕೆ ಮತ್ತೆ ಸುಪ್ರೀಂ ತಾಕೀತು

ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…

4 hours ago